ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 65 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಮಸೀದಿಗೆ ಬರಲು ದಾರಿ ತೋರಿಸುವವರು ಯಾರೂ ಇಲ್ಲ." ನಂತರ ಮನೆಯಲ್ಲೇ ನಮಾಝ್ ನಿರ್ವಹಿಸಲು ರಿಯಾಯಿತಿ ನೀಡಬೇಕೆಂದು ಅವರು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿನಂತಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ರಿಯಾಯಿತಿ ನೀಡಿದರು. ಆ ವ್ಯಕ್ತಿ ಹೊರಡುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರನ್ನು ಕರೆದು ಕೇಳಿದರು: "ತಮಗೆ ನಮಾಝ್‌ಗೆ ಕರೆಯುವ ಅಝಾನ್ ಕೇಳುತ್ತದೆಯೇ?" ಆ ವ್ಯಕ್ತಿ ಹೌದು ಎಂದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಾಗಾದರೆ ನೀವು ಅದಕ್ಕೆ ಉತ್ತರ ನೀಡಬೇಕು."»Meaning translation ·
Saved at original quality








