Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:

Available in 60 languages
«ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾವು ಜಿಹಾದ್ ಅನ್ನು ಅತಿಶ್ರೇಷ್ಠ ಕರ್ಮವೆಂದು ಪರಿಗಣಿಸುತ್ತೇವೆ. ನಾವು ಕೂಡ ಜಿಹಾದ್ ಮಾಡಬಾರದೇ?" ಅವರು ಉತ್ತರಿಸಿದರು: "ಬೇಡ, ಬದಲಿಗೆ ಅತಿಶ್ರೇಷ್ಠ ಜಿಹಾದ್ ಎಂದರೆ ಹಜ್ಜ್ ಮಬ್ರೂರ್ (ಸ್ವೀಕೃತ ಹಜ್ಜ್) ಆಗಿದೆ."»

Meaning translation ·

Explanation

The meaning in a few plain lines

ಅಲ್ಲಾಹನ ಮಾರ್ಗದಲ್ಲಿರುವ ಜಿಹಾದ್ ಮತ್ತು ಶತ್ರುಗಳ ವಿರುದ್ಧದ ಯುದ್ಧವನ್ನು ಸಹಾಬಿಗಳು (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅತಿಶ್ರೇಷ್ಠ ಕರ್ಮವೆಂದು ಪರಿಗಣಿಸಿದ್ದರು. ಆದ್ದರಿಂದ ಮಹಿಳೆಯರು ಕೂಡ ಜಿಹಾದ್ ಮಾಡಬೇಕೇ? ಎಂದು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು. ಆಗ ಅವರ ಪಾಲಿಗೆ ಯಾವುದು ಅತಿಶ್ರೇಷ್ಠ ಜಿಹಾದ್ ಆಗಿದೆಯೆಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಮಾರ್ಗದರ್ಶನ ನೀಡಿದರು. ಅದು ಸ್ವೀಕೃತ ಹಜ್ಜ್ ಆಗಿದೆ. ಸ್ವೀಕೃತ ಹಜ್ಜ್ ಎಂದರೆ ಕುರ್‌ಆನ್ ಮತ್ತು ಸುನ್ನತ್‌ಗೆ ಅನುಗುಣವಾಗಿರುವ ಮತ್ತು ಪಾಪಗಳು ಹಾಗೂ ತೋರಿಕೆಗಳಿಂದ ಮುಕ್ತವಾಗಿರುವ ಹಜ್ಜ್.

Source
رواه البخاري
Download image

Saved at original quality