ಫಿಕ್ಹ್ ಮತ್ತು ಉಸುಲ್-ಎ-ಫಿಖ್
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 60 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು. ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."»Meaning translation ·
Saved at original quality








