Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 71 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ; ನನ್ನ ಸಮಾಧಿಯನ್ನು ಉತ್ಸವ ಸ್ಥಳವಾಗಿ ಮಾಡಬೇಡಿ; ನನ್ನ ಮೇಲೆ ಸ್ವಲಾತ್ ಹೇಳಿರಿ, ನೀವು ಎಲ್ಲಿದ್ದರೂ ನಿಶ್ಚಯವಾಗಿಯೂ ನಿಮ್ಮ ಸ್ವಲಾತ್ ನನ್ನನ್ನು ತಲುಪುತ್ತದೆ.”»

Meaning translation ·

Explanation

The meaning in a few plain lines

ಮನೆಗಳಲ್ಲಿ ನಮಾಝ್ ಮಾಡದಿರುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಹದೀಸಿನಲ್ಲಿ ವಿರೋಧಿಸುತ್ತಾರೆ. ಏಕೆಂದರೆ ಮನೆಯಲ್ಲಿ ನಮಾಝ್ ಮಾಡದಿದ್ದರೆ ಅದು ಸಮಾಧಿಯಾಗಿ ಮಾರ್ಪಡುತ್ತದೆ. ಸಮಾಧಿಯು ನಮಾಝ್ ಮಾಡುವ ಸ್ಥಳವಲ್ಲ. ತಮ್ಮ ಸಮಾಧಿಗೆ ಪದೇ ಪದೇ ಭೇಟಿ ನೀಡುವುದನ್ನು ಮತ್ತು ರೂಢಿಯಾಗಿ ಅಲ್ಲಿ ಒಟ್ಟುಗೂಡುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ. ಏಕೆಂದರೆ ಅದು ಬಹುದೇವಾರಾಧನೆಗೆ ಕಾರಣವಾಗುವ ಸಾಧ್ಯತೆಯಿದೆ. ಅವರ ಮೇಲೆ ಸ್ವಲಾತ್ ಮತ್ತು ಸಲಾಂ ಹೇಳಲು ಆದೇಶಿಸಿದ್ದಾರೆ. ಅದನ್ನು ಭೂಮಿಯ ಯಾವುದೇ ಭಾಗದಿಂದ ಹೇಳಬಹುದು. ಹತ್ತಿರದಿಂದ ಹೇಳಿದರೂ, ದೂರದಿಂದ ಹೇಳಿದರೂ ಅದು ಅವರಿಗೆ ತಲುಪುತ್ತದೆ. ಸಲಾಂ ಹೇಳುವುದಕ್ಕಾಗಿ ಪದೇ ಪದೇ ಅವರ ಸಮಾಧಿಗೆ ಭೇಟಿ ನೀಡಬೇಕಾದ ಅಗತ್ಯವಿಲ್ಲ.

Source
رواه أبو داود
Download image

Saved at original quality