Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 54 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಾಸರು ಬೆಳಗನ್ನು ಪ್ರವೇಶಿಸುವ ಪ್ರತಿ ದಿನವೂ ಎರಡು ದೇವದೂತರುಗಳು ಇಳಿದು ಬರುತ್ತಾರೆ. ಆಗ ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಖರ್ಚು ಮಾಡುವವರಿಗೆ ಬದಲಿಯನ್ನು ನೀಡು. ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು."»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸೂರ್ಯ ಉದಯಿಸುವ ಪ್ರತಿದಿನವೂ, ಇಬ್ಬರು ದೇವದೂತರುಗಳು ಇಳಿದು ಬಂದು ಘೋಷಿಸುವರು. ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಸತ್ಕರ್ಮಗಳಿಗೆ, ಕುಟುಂಬಕ್ಕೆ, ಅತಿಥಿಗಳಿಗೆ ಮತ್ತು ಸ್ವಯಂಪ್ರೇರಿತ ಉತ್ತಮ ಕಾರ್ಯಗಳಿಗೆ ಖರ್ಚು ಮಾಡುವವರಿಗೆ ಬದಲಿಯನ್ನು ನೀಡು, ಅವರು ಖರ್ಚು ಮಾಡಿದ್ದಕ್ಕೆ ಪ್ರತಿಯಾಗಿ ಅವರಿಗೆ ಒಳಿತು ಮತ್ತು ಸಮೃದ್ಧಿಯನ್ನು ದಯಪಾಲಿಸು. ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು ಮತ್ತು ಹಕ್ಕುದಾರರಿಗೆ ಕೊಡದೆ ಅವರು ತಡೆಹಿಡಿದ ಆ ಸಂಪತ್ತನ್ನು ನಾಶಪಡಿಸು.

Source
متفق عليه
Download image

Saved at original quality