ಅಕೀದಾ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 53 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: "ನಾನು ನನ್ನ ದಾಸನು ನನ್ನ ಬಗ್ಗೆ ಹೇಗೆ ಯೋಚಿಸುತ್ತಾನೋ ಹಾಗೆ ಇರುತ್ತೇನೆ. ಅವನು ನನ್ನನ್ನು ನೆನಪಿಸಿಕೊಂಡಾಗ ನಾನು ಅವನೊಂದಿಗೆ ಇರುತ್ತೇನೆ. ಅವನು ನನ್ನನ್ನು ಮನಸ್ಸಿನಲ್ಲಿ ನೆನಪಿಸಿಕೊಂಡರೆ, ನಾನು ಅವನನ್ನು ಮನಸ್ಸಿನಲ್ಲಿ ನೆನಪಿಸಿಕೊಳ್ಳುತ್ತೇನೆ. ಅವನು ನನ್ನನ್ನು ಒಂದು ಗುಂಪಿನಲ್ಲಿ ನೆನಪಿಸಿಕೊಂಡರೆ, ನಾನು ಅವನನ್ನು ಅದಕ್ಕಿಂತಲೂ ಉತ್ತಮವಾದ ಗುಂಪಿನಲ್ಲಿ ನೆನಪಿಸಿಕೊಳ್ಳುತ್ತೇನೆ. ಅವನು ನನ್ನ ಕಡೆಗೆ ಒಂದು ಗೇಣಿನ ಅಂತರದಷ್ಟು ಹತ್ತಿರವಾದರೆ, ನಾನು ಅವನ ಕಡೆಗೆ ಒಂದು ಮೊಳಕೈ ಅಂತರದಷ್ಟು ಹತ್ತಿರವಾಗುತ್ತೇನೆ. ಮತ್ತು ಅವನು ನನ್ನ ಕಡೆಗೆ ಒಂದು ಮೊಳಕೈ ಅಂತರದಷ್ಟು ಹತ್ತಿರವಾದರೆ, ನಾನು ಅವನ ಕಡೆಗೆ ಒಂದು ಬಾವು (ಎರಡು ಕೈಗಳನ್ನು ಅಗಲಿಸಿದಾಗ ಉಂಟಾಗುವ ಅಳತೆ) ಅಂತರದಷ್ಟು ಹತ್ತಿರವಾಗುತ್ತೇನೆ. ಅವನು ನನ್ನ ಬಳಿಗೆ ನಡೆದುಕೊಂಡು ಬಂದರೆ, ನಾನು ಅವನ ಬಳಿಗೆ ಓಡುತ್ತಾ ಬರುತ್ತೇನೆ."»Meaning translation ·
Saved at original quality








