Hadith for the World
Tap the image to view it full size
ಫಿಕ್ಹ್ ಮತ್ತು ಉಸುಲ್-ಎ-ಫಿಖ್

ಸಹ್ಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 44 languages
«ಸಹ್ಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಸ್ವರ್ಗದಲ್ಲಿ 'ರಯ್ಯಾನ್' ಎಂಬ ಒಂದು ಬಾಗಿಲಿದೆ. ಉಪವಾಸ ಆಚರಿಸಿದವರು ಪುನರುತ್ಥಾನ ದಿನದಂದು ಅದರ ಮೂಲಕ ಪ್ರವೇಶಿಸುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. (ಆ ದಿನ) 'ಉಪವಾಸಿಗರು ಎಲ್ಲಿ?' ಎಂದು ಕರೆಯಲಾಗುವುದು. ಆಗ ಅವರು ಎದ್ದು ನಿಲ್ಲುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. ಅವರೆಲ್ಲರೂ ಪ್ರವೇಶಿಸಿದ ನಂತರ ಅದನ್ನು ಮುಚ್ಚಲಾಗುವುದು. ನಂತರ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ".»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ, ಸ್ವರ್ಗದ ಬಾಗಿಲುಗಳಲ್ಲಿ ಒಂದು ಬಾಗಿಲನ್ನು 'ಬಾಬು ರ್ರಯ್ಯಾನ್' ಎಂದು ಕರೆಯಲಾಗುತ್ತದೆ. ಉಪವಾಸ ಆಚರಿಸಿದವರು ಪುನರುತ್ಥಾನ ದಿನದಂದು ಅದರ ಮೂಲಕ ಪ್ರವೇಶಿಸುವರು, ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. 'ಉಪವಾಸಿಗರು ಎಲ್ಲಿ?' ಎಂದು ಕರೆಯಲಾಗುವುದು. ಆಗ ಅವರು ಎದ್ದು ನಿಂತು ಪ್ರವೇಶಿಸುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. ಅವರಲ್ಲಿ ಕೊನೆಯವರು ಪ್ರವೇಶಿಸಿದ ನಂತರ ಅದನ್ನು ಮುಚ್ಚಲಾಗುವುದು. ನಂತರ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ.

Source
متفق عليه
Download image

Saved at original quality