ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
Available in 61 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು. ಬಹಿರಂಗವಾಗಿ ಪಾಪ ಮಾಡುವ ಒಂದು ರೂಪ ಹೇಗೆಂದರೆ, ಒಬ್ಬ ವ್ಯಕ್ತಿ ರಾತ್ರಿಯಲ್ಲಿ ಒಂದು ಪಾಪವನ್ನು ಮಾಡುತ್ತಾನೆ. ನಂತರ ಅಲ್ಲಾಹು ಅದನ್ನು ಅವನಿಗಾಗಿ ಮುಚ್ಚಿಟ್ಟರೂ, ಮರುದಿನ ಬೆಳಗ್ಗೆ ಅವನು ಹೇಳುತ್ತಾನೆ: "ಓ ಇಂತಿಂತಹವರೇ! ನಾನು ನಿನ್ನೆ ರಾತ್ರಿ ಇಂತಿಂತಹ ಪಾಪ ಮಾಡಿದ್ದೇನೆ. ಅವನ ಪರಿಪಾಲಕನು (ಅಲ್ಲಾಹು) ಅವನ ಪಾಪವನ್ನು ಮುಚ್ಚಿಟ್ಟ ಸ್ಥಿತಿಯಲ್ಲಿ ಅವನು ರಾತ್ರಿಯನ್ನು ಕಳೆದಿದ್ದನು. ಆದರೆ ಬೆಳಗಾದಾಗ ಅವನು ಆ ಮುಚ್ಚಿಗೆಯನ್ನು ತೆರೆದು ಬಿಡುತ್ತಾನೆ."»Meaning translation ·
Saved at original quality








