Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:

Available in 70 languages
«ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಪರದೂಷಣೆ ಏನೆಂದು ನಿಮಗೆ ತಿಳಿದಿದೆಯೇ?” ಅನುಯಾಯಿಗಳು ಉತ್ತರಿಸಿದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು.” ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “(ಪರದೂಷಣೆ ಎಂದರೆ) ನಿನ್ನ ಸಹೋದರನ ಬಗ್ಗೆ ಅವನಿಗೆ ಇಷ್ಟವಿಲ್ಲದ ಮಾತನ್ನು ಹೇಳುವುದು.” ಆಗ ಒಬ್ಬರು ಕೇಳಿದರು: “ಒಂದು ವೇಳೆ ನಾನು ಹೇಳುವ ಸಂಗತಿ ಅವನಲ್ಲಿದ್ದರೆ?” ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: “ಅದು ಅವನಲ್ಲಿದ್ದರೆ ನೀನು ಅವನ ಬಗ್ಗೆ ಪರದೂಷಣೆ ಮಾಡಿರುವೆ. ಅದು ಅವನಲ್ಲಿಲ್ಲದಿದ್ದರೆ ನೀನು ಅವನ ಮೇಲೆ ಸುಳ್ಳಾರೋಪ ಹೊರಿಸಿರುವೆ.”»

Meaning translation ·

Explanation

The meaning in a few plain lines

ನಿಷೇಧಿಸಲಾದ ಪರದೂಷಣೆ ಯಾವುದೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುತ್ತಾರೆ. ಅದು ಅನುಪಸ್ಥಿತನಾಗಿರುವ ಒಬ್ಬ ಮುಸಲ್ಮಾನನ ಬಗ್ಗೆ ಅವನಿಗೆ ಇಷ್ಟವಿಲ್ಲದ್ದನ್ನು ಹೇಳುವುದು. ಅದು ಅವನ ದೇಹದ ಆಕೃತಿ ಅಥವಾ ಗುಣಕ್ಕೆ ಸಂಬಂಧಿಸಿದ್ದಾದರೂ ಸಹ. ಉದಾಹರಣೆಗೆ, ಒಕ್ಕಣ್ಣ, ಮೋಸಗಾರ, ಸುಳ್ಳುಗಾರ ಮುಂತಾದ ಅವನ ಕೆಟ್ಟ ಗುಣಗಳನ್ನು ಹೇಳುವುದು. ಈ ಗುಣಗಳು ಅವನಲ್ಲಿದ್ದರೂ ಸಹ. ಇನ್ನು, ಆ ಗುಣಗಳು ಅವನಲ್ಲಿಲ್ಲದಿದ್ದರೆ ಅದು ಸುಳ್ಳಾರೋಪವಾಗುತ್ತದೆ. ಅಂದರೆ ಒಬ್ಬ ವ್ಯಕ್ತಿಯಲ್ಲಿ ಇಲ್ಲದ್ದನ್ನು ಇದೆಯೆಂದು ಆರೋಪಿಸುವುದು. ಇದು ಪರದೂಷಣೆಗಿಂತಲೂ ಗಂಭೀರವಾಗಿದೆ.

Source
رواه مسلم
Download image

Saved at original quality