Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನೊಂದಿಗೆ ಹೇಳಿದರು:

Available in 70 languages
«ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನೊಂದಿಗೆ ಹೇಳಿದರು: "ಒಳಿತಿನ ಕಾರ್ಯಗಳಲ್ಲಿ ಯಾವುದನ್ನೂ ಕೀಳಾಗಿ ಕಾಣಬೇಡ. ಅದು ನಿನ್ನ ಸಹೋದರನನ್ನು ಮಂದಹಾಸದ ಮುಖದಿಂದ ಭೇಟಿಯಾಗುವುದಾಗಿದ್ದರೂ ಸಹ.”»

Meaning translation ·

Explanation

The meaning in a few plain lines

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಒಳಿತಿನ ಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದ್ದಾರೆ ಮತ್ತು ಅದರಲ್ಲಿ ಯಾವುದನ್ನೂ ಕೀಳಾಗಿ ಕಾಣಬಾರದು; ಅದೊಂದು ಚಿಕ್ಕ ಸಂಗತಿಯಾಗಿದ್ದರೂ ಸಹ ಎಂದು ಹೇಳಿದ್ದಾರೆ. ಭೇಟಿಯಾಗುವಾಗ ಮುಖದಲ್ಲಿ ಮುಗುಳ್ನಗೆ ಬೀರುವುದು ಒಂದು ಚಿಕ್ಕ ಒಳಿತಿನ ಕಾರ್ಯವಾಗಿದೆ. ಮುಸಲ್ಮಾನರು ಇದರಲ್ಲಿ ಉತ್ಸಾಹ ತೋರಬೇಕು. ಏಕೆಂದರೆ ಇದರಿಂದ ಮುಸಲ್ಮಾನರ ನಡುವೆ ಅನ್ಯೋನ್ಯತೆ ಹೆಚ್ಚಾಗುತ್ತದೆ ಮತ್ತು ಅವರ ಮನಸ್ಸಿಗೆ ಸಂತೋಷವನ್ನು ನೀಡಿದಂತಾಗುತ್ತದೆ.

Source
رواه مسلم
Download image

Saved at original quality