Hadith for the World
Tap the image to view it full size
ಸದ್ಗುಣಗಳು ಮತ್ತು ನಡವಳಿಕೆಗಳು

ಅಬೂ ಮಸ್‌ಊದ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:

Available in 70 languages
«ಅಬೂ ಮಸ್‌ಊದ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸುಸ್ತಾಗಿಬಿಟ್ಟಿದೆ. ಆದ್ದರಿಂದ ನನಗೆ ಸವಾರಿ ಮಾಡುವ ಒಂದು ಒಂಟೆಯನ್ನು ಕೊಡಿ." ಅವರು ಹೇಳಿದರು: "ನನ್ನ ಬಳಿ ಒಂಟೆಯಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆ ಕೊಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ."»

Meaning translation ·

Explanation

The meaning in a few plain lines

ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸತ್ತಿದೆ. ನನ್ನನ್ನು ನನ್ನ ಊರಿಗೆ ತಲುಪಿಸುವ ಒಂದು ಒಂಟೆಯನ್ನು ಕೊಡಿ." ಆದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತನ್ನಲ್ಲಿ ಸವಾರಿ ಮಾಡುವ ಒಂಟೆಯಿಲ್ಲವೆಂದು ಹೇಳಿದರು. ಆಗ ಅಲ್ಲಿದ್ದ ಒಬ್ಬ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆಯನ್ನು ನೀಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), ಒಂಟೆಯನ್ನು ದಾನ ಮಾಡುವ ವ್ಯಕ್ತಿಗೆ ಸಿಗುವ ಪ್ರತಿಫಲದಲ್ಲಿ ಇವನೂ ಭಾಗಿಯಾಗುತ್ತಾನೆಂದು ಹೇಳಿದರು. ಏಕೆಂದರೆ ಅವನು ಒಂಟೆಯ ಅಗತ್ಯವಿರುವ ಆ ವ್ಯಕ್ತಿಗೆ ಒಂಟೆ ನೀಡುವ ವ್ಯಕ್ತಿಯನ್ನು ತೋರಿಸಿಕೊಟ್ಟಿದ್ದಾನೆ.

Source
رواه مسلم
Download image

Saved at original quality