ಅಕೀದಾ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 62 languages
«ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದೆ: "ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ಪಾಪ ಯಾವುದು?" ಅವರು ಉತ್ತರಿಸಿದರು: "ಅಲ್ಲಾಹು ನಿನ್ನನ್ನು ಸೃಷ್ಟಿಸಿದವನಾಗಿದ್ದೂ ಸಹ ನೀನು ಅವನೊಂದಿಗೆ ಇತರರನ್ನು ಸರಿಸಾಟಿಯಾಗಿ ಮಾಡುವುದು." ನಾನು ಹೇಳಿದೆ: "ಅದು ನಿಜಕ್ಕೂ ಗಂಭೀರ ಪಾಪವಾಗಿದೆ." ನಾನು ಕೇಳಿದೆ: " ನಂತರ ಯಾವುದು?" ಅವರು ಉತ್ತರಿಸಿದರು: "ನಿನ್ನ ಜೊತೆಗೆ ಆಹಾರ ಸೇವಿಸುವನು ಎಂಬ ಭಯದಿಂದ ನೀನು ನಿನ್ನ ಮಗುವನ್ನು ಹತ್ಯೆ ಮಾಡುವುದು." ನಾನು ಕೇಳಿದೆ: "ನಂತರ ಯಾವುದು?" ಅವರು ಉತ್ತರಿಸಿದರು: "ನಿನ್ನ ನೆರೆಮನೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದು."»Meaning translation ·
Saved at original quality








