ಸದ್ಗುಣಗಳು ಮತ್ತು ನಡವಳಿಕೆಗಳು
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಯನ್ನು ಪಠಿಸುತ್ತಿದ್ದರು:
Available in 54 languages
«ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಯನ್ನು ಪಠಿಸುತ್ತಿದ್ದರು: "ಓ ನನ್ನ ಪರಿಪಾಲಕನೇ! ನನ್ನ ಪಾಪಗಳನ್ನು, ಅವಿವೇಕತನವನ್ನು, ನನ್ನ ಎಲ್ಲಾ ಕೆಲಸ-ಕಾರ್ಯಗಳಲ್ಲಿರುವ ಅಪರಿಮಿತಿಯನ್ನು ಮತ್ತು ನನ್ನ ಬಗ್ಗೆ ನೀನು ನನಗಿಂತ ಹೆಚ್ಚು ತಿಳಿದಿರುವುದೆಲ್ಲವನ್ನೂ ಕ್ಷಮಿಸು. ಓ ಅಲ್ಲಾಹ್! ನನ್ನ ತಪ್ಪುಗಳನ್ನು, ಉದ್ದೇಶಪೂರ್ವಕವಾಗಿ ಮಾಡಿದ್ದನ್ನು, ಅವಿವೇಕತನದಿಂದ ಮಾಡಿದ್ದನ್ನು, ತಮಾಷೆಗಾಗಿ ಮಾಡಿದ್ದನ್ನು ಮತ್ತು ನನ್ನಲ್ಲಿರುವ ಎಲ್ಲಾ ಪಾಪಗಳನ್ನೂ ಕ್ಷಮಿಸು. ಓ ಅಲ್ಲಾಹ್! ನಾನು ಮುಂದಕ್ಕೆ ಕಳುಹಿಸಿರುವ, ಹಿಂದೆ ಬಿಟ್ಟಿರುವ, ಬಹಿರಂಗಪಡಿಸಿರುವ ಮತ್ತು ರಹಸ್ಯವಾಗಿ ಮಾಡಿರುವ ಪಾಪಗಳನ್ನು ಕ್ಷಮಿಸು. ನೀನೇ ಮುಂದಕ್ಕೆ ತರುವವನು ಮತ್ತು ಹಿಂದಕ್ಕೆ ತಳ್ಳುವವನು. ನೀನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು."»Meaning translation ·
Saved at original quality








