ಸದ್ಗುಣಗಳು ಮತ್ತು ನಡವಳಿಕೆಗಳು
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
Available in 54 languages
«ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬೆಳಗಾಗುವಾಗ ಮತ್ತು ಸಂಜೆಯಾಗುವಾಗ ಈ ಪ್ರಾರ್ಥನೆಗಳನ್ನು ಪಠಿಸದೆ ಬಿಟ್ಟುಬಿಡುತ್ತಿರಲಿಲ್ಲ: "ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ನಿನ್ನಲ್ಲಿ ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಧರ್ಮದಲ್ಲಿ, ಇಹಲೋಕದಲ್ಲಿ, ಕುಟುಂಬದಲ್ಲಿ ಮತ್ತು ಸಂಪತ್ತಿನಲ್ಲಿ ಕ್ಷಮೆ ಮತ್ತು ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಕುಂದು-ಕೊರತೆಗಳನ್ನು ಮುಚ್ಚಿಡು ಮತ್ತು ನನ್ನ ಭಯವನ್ನು ನಿವಾರಿಸು. ಓ ಅಲ್ಲಾಹ್! ನನ್ನ ಮುಂಭಾಗದಿಂದ, ನನ್ನ ಹಿಂಭಾಗದಿಂದ, ನನ್ನ ಬಲಭಾಗದಿಂದ, ನನ್ನ ಎಡಭಾಗದಿಂದ, ನನ್ನ ಮೇಲ್ಭಾಗದಿಂದ ನನ್ನನ್ನು ರಕ್ಷಿಸು. ನನ್ನ ಕೆಳಭಾಗದಿಂದ ನನ್ನನ್ನು ಹತ್ಯೆಗೈಯಲಾಗುವುದರಿಂದ ನಾನು ನಿನ್ನ ಮಹಾತ್ಮೆಯ ಮೂಲಕ ನಿನ್ನಲ್ಲಿ ರಕ್ಷೆ ಬೇಡುತ್ತೇನೆ."»Meaning translation ·
Saved at original quality








