ಪವಿತ್ರ ಕುರ್ ಆನ್ ಮತ್ತು ಅದಕ್ಕೆ ಸಂಬಂಧಿಸಿದ ಇತರೆ ವಿಷಯಗಳು
ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:
Available in 70 languages
«ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ."»Meaning translation ·
Saved at original quality








