Hadith for the World

All hadiths

The complete card collection, filter by chapter

655 hadiths

ಅಬೂ ಅಯ್ಯೂಬ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನ್ನ (ಮುಸಲ್ಮಾನ) ಸಹೋದರನೊಂದಿಗೆ ಮೂರು ರಾತ್ರಿಗಳಿಗಿಂತ ಹೆಚ್ಚು ಮಾತನಾಡದೆ ಇರಲು ಯಾರಿಗೂ ಅನುಮತಿಯಿಲ್ಲ. ಅವರಿಬ್ಬರು ಎದುರಾಗುವಾಗ ಒಬ್ಬ ಆ ಕಡೆ ಮತ್ತು ಇನ್ನೊಬ್ಬ ಈ ಕಡೆ ಮುಖ ತಿರುಗಿಸುತ್ತಾನೆ. ಅವರಲ್ಲಿ ಮೊದಲು ಸಲಾಮ್ ಹೇಳುವವನೇ ಅತ್ಯುತ್ತಮನು.”متفق عليه
ಜುಬೈರ್ ಬಿನ್ ಮುತ್‌ಇಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಕುಟುಂಬ ಸಂಬಂಧ ಕಡಿಯುವವನು ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”متفق عليه
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ."متفق عليه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ತನ್ನ ಜೀವನೋಪಾಯವು ವಿಶಾಲವಾಗಲು ಮತ್ತು ತನ್ನ ಆಯುಷ್ಯವು ದೀರ್ಘವಾಗಲು ಬಯಸುತ್ತಾನೋ ಅವನು ಕುಟುಂಬ ಸಂಬಂಧಗಳನ್ನು ಜೋಡಿಸಲಿ.”متفق عليه
عن عبد الله بن عمرو بن العاص رضي الله عنهما أن رسول الله صلى الله عليه وسلم قال: «من الكبائر شَتْمُ الرجل والديه» قيل: وهل يسبّ الرجل والديه؟ قال: «نعم، يسبّ أبا الرجل فيسبّ أباه، ويسبّ أمّه، فيسبّ أمّه».متفق عليه
ಅಬೂ ಸಿರ್ಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇತರರಿಗೆ ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಇತರರಿಗೆ ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ."رواه أبو داود والترمذي وابن ماجه وأحمد
ಅಬ್ದುರ್‍ರಹ್ಮಾನ್ ಬಿನ್ ಅಬೂ ಲೈಲಾ ರಿಂದ ವರದಿ. ಅವರು ಹೇಳಿದರು: ಕಅಬ್ ಬಿನ್ ಉಜ್ರ ನನ್ನನ್ನು ಭೇಟಿಯಾಗಿ ಕೇಳಿದರು: "ನಾನು ನಿಮಗೆ ಒಂದು ಉಡುಗೊರೆಯನ್ನು ನೀಡಲೇ? ನಿಶ್ಚಯವಾಗಿಯೂ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಬಳಿಗೆ ಬಂದಾಗ ನಾವು ಹೇಳಿದೆವು: "ಓ ಅಲ್ಲಾಹನ ಸಂದೇಶವಾಹಕರೇ! ನಿಮಗೆ ಹೇಗೆ ಸಲಾಂ ಹೇಳುವುದೆಂದು ನಮಗೆ ತಿಳಿದಿದೆ. ಆದರೆ ನಾವು ನಿಮ್ಮ ಮೇಲೆ ಸಲಾತ್ ಹೇಳುವುದು ಹೇಗೆ?" ಅವರು ಹೇಳಿದರು: "ಹೇಳಿರಿ: ಓ ಅಲ್ಲಾಹ್, ಮುಹಮ್ಮದ್‌ರಿಗೆ ಮತ್ತು ಮುಹಮ್ಮದ್‌ರ ಕುಟುಂಬಕ್ಕೆ ಶಾಂತಿಯನ್ನು ವರ್ಷಿಸು, ಇಬ್ರಾಹೀಮರ ಕುಟುಂಬಕ್ಕೆ ಶಾಂತಿಯನ್ನು ವರ್ಷಿಸಿದಂತೆ. ನಿಶ್ಚಯವಾಗಿಯೂ ನೀನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿರುವೆ. ಓ ಅಲ್ಲಾಹ್, ಮುಹಮ್ಮದ್‌ರಿಗೆ ಮತ್ತು ಮುಹಮ್ಮದ್‌ರ ಕುಟುಂಬಕ್ಕೆ ಸಮೃದ್ಧಿಯನ್ನು ವರ್ಷಿಸು, ಇಬ್ರಾಹೀಮರ ಕುಟುಂಬಕ್ಕೆ ಸಮೃದ್ಧಿಯನ್ನು ವರ್ಷಿಸಿದಂತೆ. ನಿಶ್ಚಯವಾಗಿಯೂ ನೀನು ಸ್ತುತ್ಯರ್ಹನು ಮತ್ತು ಮಹಾಮಹಿಮನಾಗಿರುವೆ."متفق عليه
ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಗ್ರಂಥದ ಆರಂಭವನ್ನು (ಸೂರ ಫಾತಿಹ) ಪಠಿಸದವನಿಗೆ ನಮಾಝ್ ಇಲ್ಲ."متفق عليه
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕೆನ್ನೆಗೆ ಹೊಡೆಯುವವರು, ಅಂಗಿಯನ್ನು ಹರಿಯುವವರು ಮತ್ತು ಅಜ್ಞಾನಕಾಲದ ಪ್ರಾರ್ಥನೆಗಳನ್ನು ಪ್ರಾರ್ಥಿಸುವವರು ನಮ್ಮಲ್ಲಿ ಸೇರಿದವರಲ್ಲ."متفق عليه
عن أَنَس بن مالك رضي الله عنه مرفوعاً: «ما صَلَّيْتُ خلف إمام قَطُّ أَخَفَّ صلاة، ولا أَتَمَّ صلاة من النبي صلى الله عليه وسلم ».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ದಾಸನು ತನ್ನ ಒಡೆಯನಿಗೆ (ಅಲ್ಲಾಹನಿಗೆ) ಅತ್ಯಂತ ನಿಕಟನಾಗುವುದು ಸಾಷ್ಟಾಂಗ ಮಾಡುವಾಗ. ಆದ್ದರಿಂದ ನೀವು ಪ್ರಾರ್ಥಿಸುವುದನ್ನು ಹೆಚ್ಚಿಸಿರಿ.”رواه مسلم
عن أبي أمامة رضي الله عنه قال: سمعتُ رسولَ اللهِ صلى الله عليه وسلم يقولُ: «اقْرَؤُوا القرْآنَ؛ فَإنَّهُ يَأتِي يَوْمَ القِيَامَةِ شَفِيعًا لأَصْحَابِهِ».رواه مسلم
عن أبي هريرة رضي الله عنه عن رسول الله صلى الله عليه وسلم قال: «مَنْ شهدَ الْجَنَازَةَ حتى يصلَّى عليها فله قِيرَاطٌ، ومن شهدها حتى تُدفن فله قِيرَاطان، قيل: وما القِيرَاطَانِ؟ قال: مثل الجبلين العظيمين». ولمسلم: «أصغرهما مثل أُحُدٍ».متفق عليه
عن جُنْدُب بن عَبْدِ الله البجَليِّ رضي الله عنه قال: «صلى النبي صلى الله عليه وسلم يوم النَّحر، ثم خطب، ثم ذبح، وقال: من ذبح قبل أن يُصَلِّيَ فَلْيَذْبَحْ أُخرى مكانها، ومن لم يذبح فَلْيَذْبَحْ باسم الله».متفق عليه
عن أبي ذر الغفاري رضي الله عنه عن النبي صلى الله عليه وسلم قال: «ألاَ أُخْبِرُكَ بِأَحَبِّ الكَلاَمِ إِلَى اللهِ؟ إنَّ أَحَبَّ الكلام إِلى الله: سبحان اللهِ وبحمدِهِ».رواه مسلم
عن عدي بن عميرة الكندي رضي الله عنه مرفوعاً: «من اسْتَعْمَلْنَاهُ منكم على عمل، فكَتَمَنَا مِخْيَطًا فما فوقه، كان غُلُولا يأتي به يوم القيامة». فقام إليه رجلٌ أسودُ من الأنصار، كأني أنظر إليه، فقال: يا رسول الله، اقبل عني عَمَلَكَ، قال: «وما لك؟» قال: سمعتك تقول كذا وكذا، قال: «وأنا أقوله الآن: من اسْتَعْمَلْنَاهُ على عمل فلْيَجِيْء بقليله وكثيره، فما أُوتِيَ منه أَخَذَ، وما نهي عنه انْتَهَى».رواه مسلم
ಜುಂದುಬ್ ಬಿನ್ ಅಬ್ದುಲ್ಲಾ ಕಸ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ. ಆದ್ದರಿಂದ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ನಿಮ್ಮನ್ನು ಪ್ರಶ್ನಿಸುವಂತೆ ಮಾಡಬೇಡಿ. ಏಕೆಂದರೆ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ಯಾರನ್ನಾದರೂ ಪ್ರಶ್ನೆ ಮಾಡಿದರೆ ಅವನನ್ನು ಹಿಡಿದು ತಲೆಕೆಳಗಾಗಿ ನರಕಕ್ಕೆ ಎಸೆಯುತ್ತಾನೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುತ್ತಾನೋ, ಅವನು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುವಾಗಲೆಲ್ಲಾ ಅಲ್ಲಾಹು ಅವನಿಗೆ ಸ್ವರ್ಗದಲ್ಲಿ ಒಂದು ಔತಣವನ್ನು ಸಿದ್ಧಗೊಳಿಸುವನು."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ಒಳ್ಳೆಯ ಮಾತನ್ನೇ ಆಡಲಿ ಅಥವಾ ಮೌನವಾಗಿರಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ನೆರೆಮನೆಯವನನ್ನು ಗೌರವಿಸಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ಅತಿಥಿಗಳನ್ನು ಗೌರವಿಸಲಿ.”متفق عليه
ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”متفق عليه
عن عمر بن الخطاب رضي الله عنه مرفوعًا: «مَنْ نَامَ عَنْ حِزْبِهِ مِنَ الليلِ، أو عَنْ شَيْءٍ مِنه، فَقَرَأَهُ ما بَيْنَ صَلَاةِ الفَجْرِ وَصَلَاةِ الظُّهْرِ، كُتِبَ لهُ كَأَنَّمَا قَرَأَهُ مِنَ الليلِ».رواه مسلم
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎರಡು ಅನುಗ್ರಹಗಳು. ಅವುಗಳ ವಿಷಯದಲ್ಲಿ ಅನೇಕ ಜನರು ನಷ್ಟದಲ್ಲಿದ್ದಾರೆ: ಆರೋಗ್ಯ ಮತ್ತು ಬಿಡುವು."رواه البخاري
عن أبي هريرة رضي الله عنه مرفوعاً: «والذي نفسي بيده، لو لم تذنبوا، لذهب الله بكم، وجاء بقوم يُذْنِبُونَ، فيستغفرون اللهَ تعالى، فيغفر لهم».رواه مسلم
عن جابر بن عبد الله رضي الله عنهما قال: قال رسول الله صلى الله عليه وسلم : «يُبْعَثُ كلُّ عبدٍ على ما مات عليه».رواه مسلم