Hadith for the World

All hadiths

The complete card collection, filter by chapter

655 hadiths

عن عبد الله بن مسعود رضي الله عنه مرفوعاً: «يُؤْتَى بجهنم يومئذ لها سبعون ألف زِمَامٍ مع كل زمام سبعون ألف ملك يَجُرُّونَهَا».رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸುಜೂದ್‌ನಲ್ಲಿ ಹೀಗೆ ಹೇಳುತ್ತಿದ್ದರು: "ಓ ಅಲ್ಲಾಹ್, ನನ್ನ ಎಲ್ಲಾ ಪಾಪಗಳನ್ನು ಕ್ಷಮಿಸು, ಅವುಗಳಲ್ಲಿ ಚಿಕ್ಕದು, ದೊಡ್ಡದು, ಮೊದಲನೆಯದ್ದು, ಕೊನೆಯದ್ದು, ಬಹಿರಂಗವಾದದ್ದು ಮತ್ತು ರಹಸ್ಯವಾದದ್ದು."رواه مسلم
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಜನರು ಅತಿಹೆಚ್ಚಾಗಿ ಸ್ವರ್ಗವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: "ಅಲ್ಲಾಹನ ಭಯ ಮತ್ತು ಉತ್ತಮ ನಡವಳಿಕೆ." ಜನರು ಅತಿಹೆಚ್ಚಾಗಿ ನರಕವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಅವರು ಹೀಗೆ ಉತ್ತರಿಸಿದರು: "ಬಾಯಿ ಮತ್ತು ಗುಹ್ಯಾಂಗ."رواه الترمذي وابن ماجه وأحمد
عن أبي سعيد الخدري رضي الله عنه قال: قال رسول الله صلى الله عليه وسلم : "الْبَاقِيَاتُ الصَّالِحَاتُ، لَا إلَهَ إلَّا اللَّهُ، وَسُبْحَانَ اللَّهِ، وَاَللَّهُ أَكْبَرُ، وَالْحَمْدُ لِلَّهِ، وَلَا حَوْلَ وَلَا قُوَّةَ إلَّا بِاَللَّهِ".رواه ابن حبان والحاكم، أما النسائي فرواه في الكبرى لكن من حديث أبي هريرة
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅದಾನ್ ಮತ್ತು ಇಕಾಮತ್‌ನ ನಡುವಿನ ಪ್ರಾರ್ಥನೆ ತಿರಸ್ಕರಿಸಲ್ಪಡುವುದಿಲ್ಲ."رواه أبو داود والترمذي والنسائي
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಪ್ರಾರ್ಥಿಸುತ್ತಿದ್ದರು: "ಅಲ್ಲಾಹುಮ್ಮ ಅಸ್ಲಿಹ್ ಲೀ ದೀನೀ ಅಲ್ಲದೀ ಹುವ ಇಸ್ಮತು ಅಮ್ರೀ, ವಅಸ್ಲಿಹ್ ಲೀ ದುನ್ಯಾಯಾಯ ಅಲ್ಲತೀ ಫೀಹಾ ಮಆಶೀ, ವಅಸ್ಲಿಹ್ ಲೀ ಆಖಿರತೀ ಅಲ್ಲತೀ ಫೀಹಾ ಮಆದೀ, ವಜ್‌ಅಲಿಲ್ ಹಯಾತ ಝಿಯಾದತನ್ ಲೀ ಫೀ ಕುಲ್ಲಿ ಖೈರಿನ್, ವಜ್‌ಅಲಿಲ್ ಮೌತ ರಾಹತನ್ ಲೀ ಮಿನ್ ಕುಲ್ಲಿ ಶರ‍್ರ್" (ಓ ಅಲ್ಲಾಹ್, ನನ್ನ ಕೆಲಸ-ಕಾರ್ಯಗಳ ಸಂರಕ್ಷಣೆಯಾಗಿರುವ ನನ್ನ ಧರ್ಮವನ್ನು ನನಗೆ ಉತ್ತಮಗೊಳಿಸು, ನಾನು ಜೀವಿಸಬೇಕಾದ ನನ್ನ ಇಹಲೋಕವನ್ನು ನನಗೆ ಉತ್ತಮಗೊಳಿಸು, ನನ್ನ ಮರಳಿ ಹೋಗಬೇಕಾದ ನನ್ನ ಪರಲೋಕವನ್ನು ನನಗೆ ಉತ್ತಮಗೊಳಿಸು. ಜೀವನವನ್ನು ಎಲ್ಲಾ ರೀತಿಯ ಒಳಿತುಗಳಲ್ಲಿ ನನಗೆ ಹೆಚ್ಚಿಸಿಕೊಡು ಮತ್ತು ಮರಣವನ್ನು ಎಲ್ಲ ರೀತಿಯ ಕೆಡುಕುಗಳಿಂದ ನೆಮ್ಮದಿಯಾಗಿ ಮಾಡು).رواه مسلم
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಯನ್ನು ಪಠಿಸುತ್ತಿದ್ದರು: "ಓ ನನ್ನ ಪರಿಪಾಲಕನೇ! ನನ್ನ ಪಾಪಗಳನ್ನು, ಅವಿವೇಕತನವನ್ನು, ನನ್ನ ಎಲ್ಲಾ ಕೆಲಸ-ಕಾರ್ಯಗಳಲ್ಲಿರುವ ಅಪರಿಮಿತಿಯನ್ನು ಮತ್ತು ನನ್ನ ಬಗ್ಗೆ ನೀನು ನನಗಿಂತ ಹೆಚ್ಚು ತಿಳಿದಿರುವುದೆಲ್ಲವನ್ನೂ ಕ್ಷಮಿಸು. ಓ ಅಲ್ಲಾಹ್! ನನ್ನ ತಪ್ಪುಗಳನ್ನು, ಉದ್ದೇಶಪೂರ್ವಕವಾಗಿ ಮಾಡಿದ್ದನ್ನು, ಅವಿವೇಕತನದಿಂದ ಮಾಡಿದ್ದನ್ನು, ತಮಾಷೆಗಾಗಿ ಮಾಡಿದ್ದನ್ನು ಮತ್ತು ನನ್ನಲ್ಲಿರುವ ಎಲ್ಲಾ ಪಾಪಗಳನ್ನೂ ಕ್ಷಮಿಸು. ಓ ಅಲ್ಲಾಹ್! ನಾನು ಮುಂದಕ್ಕೆ ಕಳುಹಿಸಿರುವ, ಹಿಂದೆ ಬಿಟ್ಟಿರುವ, ಬಹಿರಂಗಪಡಿಸಿರುವ ಮತ್ತು ರಹಸ್ಯವಾಗಿ ಮಾಡಿರುವ ಪಾಪಗಳನ್ನು ಕ್ಷಮಿಸು. ನೀನೇ ಮುಂದಕ್ಕೆ ತರುವವನು ಮತ್ತು ಹಿಂದಕ್ಕೆ ತಳ್ಳುವವನು. ನೀನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು."متفق عليه
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬೆಳಗಾಗುವಾಗ ಮತ್ತು ಸಂಜೆಯಾಗುವಾಗ ಈ ಪ್ರಾರ್ಥನೆಗಳನ್ನು ಪಠಿಸದೆ ಬಿಟ್ಟುಬಿಡುತ್ತಿರಲಿಲ್ಲ: "ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ನಿನ್ನಲ್ಲಿ ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಧರ್ಮದಲ್ಲಿ, ಇಹಲೋಕದಲ್ಲಿ, ಕುಟುಂಬದಲ್ಲಿ ಮತ್ತು ಸಂಪತ್ತಿನಲ್ಲಿ ಕ್ಷಮೆ ಮತ್ತು ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಕುಂದು-ಕೊರತೆಗಳನ್ನು ಮುಚ್ಚಿಡು ಮತ್ತು ನನ್ನ ಭಯವನ್ನು ನಿವಾರಿಸು. ಓ ಅಲ್ಲಾಹ್! ನನ್ನ ಮುಂಭಾಗದಿಂದ, ನನ್ನ ಹಿಂಭಾಗದಿಂದ, ನನ್ನ ಬಲಭಾಗದಿಂದ, ನನ್ನ ಎಡಭಾಗದಿಂದ, ನನ್ನ ಮೇಲ್ಭಾಗದಿಂದ ನನ್ನನ್ನು ರಕ್ಷಿಸು. ನನ್ನ ಕೆಳಭಾಗದಿಂದ ನನ್ನನ್ನು ಹತ್ಯೆಗೈಯಲಾಗುವುದರಿಂದ ನಾನು ನಿನ್ನ ಮಹಾತ್ಮೆಯ ಮೂಲಕ ನಿನ್ನಲ್ಲಿ ರಕ್ಷೆ ಬೇಡುತ್ತೇನೆ."رواه أبو داود والنسائي وابن ماجه وأحمد
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಿದ್ದ ಪ್ರಾರ್ಥನೆಗಳಲ್ಲಿ ಒಂದು ಹೀಗಿತ್ತು: "ಓ ಅಲ್ಲಾಹ್! ನಿನ್ನ ಅನುಗ್ರಹಗಳ ನಿವಾರಣೆಯಿಂದ, ನಿನ್ನ ಸೌಖ್ಯದ ಬದಲಾವಣೆಯಿಂದ, ನಿನ್ನ ಹಠಾತ್ ಶಿಕ್ಷೆಯಿಂದ ಮತ್ತು ನಿನ್ನ ಸರ್ವ ಕ್ರೋಧಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ."رواه مسلم
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಪ್ರಾರ್ಥನೆಗಳನ್ನು ಪ್ರಾರ್ಥಿಸುತ್ತಿದ್ದರು: "ಓ ಅಲ್ಲಾಹ್! ನಾನು ನಿನ್ನಲ್ಲಿ ಸಾಲದ ಪ್ರಾಬಲ್ಯದಿಂದ, ಶತ್ರುಗಳ ಪ್ರಾಬಲ್ಯದಿಂದ ಮತ್ತು ಶತ್ರುಗಳು ಸಂಭ್ರಮಿಸುವುದರಿಂದ ರಕ್ಷೆ ಬೇಡುತ್ತೇನೆ."رواه النسائي وأحمد
عن عبد الله بن عمر رضي الله عنهما عن النبي صلى الله عليه وسلم قال: «المؤمن الذي يخالط الناس، ويصبر على أذاهم خير من الذي لا يخالط الناس ولا يصبر على أذاهم».رواه الترمذي وابن ماجه وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಶಾಲಿ ಸತ್ಯವಿಶ್ವಾಸಿಯು ದುರ್ಬಲ ಸತ್ಯವಿಶ್ವಾಸಿಗಿಂತ ಉತ್ತಮನು ಮತ್ತು ಅಲ್ಲಾಹನಿಗೆ ಹೆಚ್ಚು ಪ್ರಿಯನಾಗಿದ್ದಾನೆ. ಎಲ್ಲರಲ್ಲೂ ಒಳಿತಿದೆ. ನಿನಗೆ ಪ್ರಯೋಜನಕಾರಿಯಾದ ವಿಷಯದಲ್ಲಿ ಉತ್ಸುಕನಾಗು, ಅಲ್ಲಾಹನಲ್ಲಿ ಸಹಾಯ ಬೇಡು ಮತ್ತು ಅಸಹಾಯಕನಾಗಬೇಡ. ನಿನಗೇನಾದರೂ ಸಂಭವಿಸಿದರೆ, "ಒಂದು ವೇಳೆ ನಾನು ಹೀಗೆ ಮಾಡುತ್ತಿದ್ದರೆ ಹೀಗಾಗುತ್ತಿತ್ತು" ಎಂದು ಹೇಳಬೇಡ. ಬದಲಿಗೆ, "ಇದು ಅಲ್ಲಾಹು ವಿಧಿಸಿದ್ದು; ಅವನು ಇಚ್ಛಿಸುವುದನ್ನು ಅವನು ಮಾಡುತ್ತಾನೆ" ಎಂದು ಹೇಳು. ಏಕೆಂದರೆ ‘ಒಂದು ವೇಳೆ' ಎಂಬ ಮಾತು ಶೈತಾನನು ಕಾರ್ಯೋನ್ಮುಖನಾಗಲು ಬಾಗಿಲು ತೆರೆದುಕೊಡುತ್ತದೆ."رواه مسلم
عن أبي هريرة رضي الله عنه عن رسول الله صلى الله عليه وسلم قال: «الْمُؤْمِنُ مِرْآةُ أَخِيهِ الْمُؤْمِنِ».رواه أبو داود والترمذي
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ."رواه مسلم
ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಪ್ರಾರ್ಥನೆಯೇ ಆರಾಧನೆ." ನಂತರ ಅವರು ಪಠಿಸಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದನು: ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ, ನಾನು ನಿಮಗೆ ಉತ್ತರ ನೀಡುತ್ತೇನೆ. ನನ್ನನ್ನು ಆರಾಧಿಸಲು ಯಾರು ಅಹಂಕಾರ ತೋರುತ್ತಾರೋ ಅವರು ನಿಂದನೀಯ ಸ್ಥಿತಿಯಲ್ಲಿ ನರಕವನ್ನು ಪ್ರವೇಶಿಸುವರು.”رواه أبو داود والترمذي وابن ماجه وأحمد
ಬನೂ ಮುಜಾಶಿಅ್ ಗೋತ್ರದ ಇಯಾದ್ ಇಬ್ನ್ ಹಿಮಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಮಧ್ಯೆ ಎದ್ದು ನಿಂತು ಪ್ರವಚನ ನೀಡಿದರು. ಅವರು ಹೇಳಿದರು: (ಮತ್ತು ಅವರು ಹದೀಸ್ ಅನ್ನು ಮುಂದುವರಿಸಿದರು, ಅದರಲ್ಲಿ ಇದೂ ಇತ್ತು): "ಖಂಡಿತವಾಗಿಯೂ ನೀವು ಪರಸ್ಪರ ವಿನಯ ತೋರುವುದು ಕಡ್ಡಾಯವೆಂದು ಅಲ್ಲಾಹು ನನಗೆ 'ವಹೀ' (ದೈವಿಕ ಸಂದೇಶ) ನೀಡಿದ್ದಾನೆ. ಎಲ್ಲಿಯವರೆಗೆಂದರೆ, ಯಾರೊಬ್ಬನೂ ಇನ್ನೊಬ್ಬನ ಮೇಲೆ ಜಂಭ ಕೊಚ್ಚಿಕೊಳ್ಳಬಾರದು, ಮತ್ತು ಯಾರೊಬ್ಬನೂ ಇನ್ನೊಬ್ಬನ ಮೇಲೆ ಅತಿಕ್ರಮಣ ಮಾಡಬಾರದು."رواه مسلم
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚಾಗಿ ಪ್ರಾರ್ಥಿಸುತ್ತಿದ್ದ ಪ್ರಾರ್ಥನೆ ಹೀಗಿತ್ತು: "ಓ ಅಲ್ಲಾಹ್! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು."متفق عليه
ಶದ್ದಾದ್ ಬಿನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕ್ಷಮೆಯಾಚನೆಯ ಸರದಾರನಂತಿರುವ ಪ್ರಾರ್ಥನೆ ಯಾವುದೆಂದರೆ ನೀವು ಹೀಗೆ ಪಠಿಸುವುದು: ಓ ಅಲ್ಲಾಹ್! ನೀನೇ ನನ್ನ ಪರಿಪಾಲಕ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ನೀನು ನನ್ನನ್ನು ಸೃಷ್ಟಿಸಿರುವೆ ಮತ್ತು ನಾನು ನಿನ್ನ ದಾಸನಾಗಿರುವೆ. ನಾನು ನನಗೆ ಸಾಧ್ಯವಾದಷ್ಟು ನಿನ್ನ ಕರಾರು ಮತ್ತು ವಾಗ್ದಾನಕ್ಕೆ ನಿಷ್ಠನಾಗಿರುತ್ತೇನೆ. ನಾನು ಮಾಡಿದ ಪಾಪಗಳ ಕೆಡುಕುಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ. ನನ್ನ ಮೇಲಿರುವ ನಿನ್ನ ಅನುಗ್ರಹಗಳನ್ನು ಒಪ್ಪಿಕೊಳ್ಳುತ್ತೇನೆ ಮತ್ತು ನಾನು ಮಾಡಿದ ಪಾಪಗಳನ್ನೂ ಒಪ್ಪಿಕೊಳ್ಳುತ್ತೇನೆ. ಆದ್ದರಿಂದ ನನ್ನನ್ನು ಕ್ಷಮಿಸು. ಏಕೆಂದರೆ, ನಿಶ್ಚಯವಾಗಿಯೂ ನೀನಲ್ಲದೆ ಪಾಪಗಳನ್ನು ಕ್ಷಮಿಸುವವರಿಲ್ಲ." ಅವರು (ಪ್ರವಾದಿ) ಮುಂದುವರಿದು ಹೇಳಿದರು: "ಯಾರಾದರೂ ಇದರಲ್ಲಿ ಪೂರ್ಣ ನಂಬಿಕೆಯಿಟ್ಟು ಇದನ್ನು ಹಗಲಿನಲ್ಲಿ ಪಠಿಸಿ, ನಂತರ ಅದೇ ದಿನ ಸಂಜೆಯಾಗುವ ಮುನ್ನ ನಿಧನನಾದರೆ, ಅವನು ಸ್ವರ್ಗವಾಸಿಗಳಲ್ಲಿ ಸೇರುತ್ತಾನೆ. ಯಾರಾದರೂ ಇದರಲ್ಲಿ ಪೂರ್ಣ ನಂಬಿಕೆಯಿಟ್ಟು ಇದನ್ನು ರಾತ್ರಿಯಲ್ಲಿ ಪಠಿಸಿ, ನಂತರ ಬೆಳಗಾಗುವ ಮುನ್ನ ನಿಧನನಾದರೆ, ಅವನು ಸ್ವರ್ಗವಾಸಿಗಳಲ್ಲಿ ಸೇರುತ್ತಾನೆ."رواه البخاري
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯಕ್ಕೆ ನಿಷ್ಠರಾಗಿರಿ. ಏಕೆಂದರೆ, ನಿಶ್ಚಯವಾಗಿಯೂ ಸತ್ಯವು ಒಳಿತಿಗೆ ಒಯ್ಯುತ್ತದೆ ಮತ್ತು ಒಳಿತು ಸ್ವರ್ಗಕ್ಕೆ ಒಯ್ಯುತ್ತದೆ. ಒಬ್ಬ ಮನುಷ್ಯನು ಅಲ್ಲಾಹನ ಬಳಿ ಅತ್ಯಂತ ಸತ್ಯವಂತನೆಂದು ದಾಖಲಿಸಲ್ಪಡುವವರೆಗೂ ಸತ್ಯವನ್ನು ಹೇಳುತ್ತಲೇ ಇರುತ್ತಾನೆ ಮತ್ತು ಸತ್ಯಕ್ಕಾಗಿ ಪರಿಶ್ರಮಿಸುತ್ತಲೇ ಇರುತ್ತಾನೆ. ಸುಳ್ಳಿನ ಬಗ್ಗೆ ಎಚ್ಚರವಾಗಿರಿ. ಏಕೆಂದರೆ, ನಿಶ್ಚಯವಾಗಿಯೂ ಸುಳ್ಳು ಕೆಡುಕಿಗೆ ಒಯ್ಯುತ್ತದೆ ಮತ್ತು ಕೆಡುಕು ನರಕಕ್ಕೆ ಒಯ್ಯುತ್ತದೆ. ಒಬ್ಬ ಮನುಷ್ಯನು ಅಲ್ಲಾಹನ ಬಳಿ ಅತ್ಯಂತ ಸುಳ್ಳು ಹೇಳುವವನೆಂದು ದಾಖಲಿಸಲ್ಪಡುವವರೆಗೂ ಸುಳ್ಳು ಹೇಳುತ್ತಲೇ ಇರುತ್ತಾನೆ ಮತ್ತು ಸುಳ್ಳಿಗಾಗಿ ಪರಿಶ್ರಮಿಸುತ್ತಲೇ ಇರುತ್ತಾನೆ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಾಲಗೆಯಲ್ಲಿ ಹಗುರವಾದ, ತಕ್ಕಡಿಯಲ್ಲಿ ಭಾರವಾದ ಮತ್ತು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಇಷ್ಟವಾದ ಎರಡು ವಚನಗಳು: ಸುಬ್‌ಹಾನಲ್ಲಾಹಿಲ್ ಅಝೀಮ್ ಮತ್ತು ಸುಬ್‌ಹಾನಲ್ಲಾಹಿ ವಬಿಹಮ್ದಿಹೀ.”متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸರ್ವಶಕ್ತನಾದ ಅಲ್ಲಾಹನ ದೃಷ್ಟಿಯಲ್ಲಿ ಪ್ರಾರ್ಥನೆಗಿಂತಲೂ ಹೆಚ್ಚು ಗೌರವಾರ್ಹವಾದ ಬೇರೆ ವಿಷಯವಿಲ್ಲ.”رواه الترمذي وابن ماجه وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ದಾನ ಮಾಡಿದ ಕಾರಣ ಯಾವುದೇ ಆಸ್ತಿ ಕಡಿಮೆಯಾಗಿಲ್ಲ. (ಇತರರನ್ನು) ಮನ್ನಿಸುವ ಗುಣವಿರುವ ದಾಸನಿಗೆ ಅಲ್ಲಾಹು ಗೌರವವನ್ನಲ್ಲದೆ ಬೇರೇನನ್ನೂ ಹೆಚ್ಚಿಸಿಲ್ಲ. ಯಾರು ಅಲ್ಲಾಹನಿಗಾಗಿ ವಿನಯ ತೋರುತ್ತಾನೋ ಅವನನ್ನು ಅಲ್ಲಾಹು ಉನ್ನತಿಗೇರಿಸದೇ ಇರಲಾರ.”رواه مسلم
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ."رواه الترمذي وأحمد