Hadith for the World
ಸದ್ಗುಣಗಳು ಮತ್ತು ನಡವಳಿಕೆಗಳು

Virtues

64 hadiths

64 hadiths

ಸಹ್ಲ್ ಬಿನ್ ಸಅದ್ ಸಾಇದೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಮಾರ್ಗದಲ್ಲಿ ಒಂದು ದಿನ 'ರಿಬಾತ್' ಮಾಡುವುದು (ಗಡಿಯಲ್ಲಿ ಕಾವಲು ಕಾಯುವುದು) ಇಹಲೋಕ ಮತ್ತು ಅದರಲ್ಲಿರುವ ಎಲ್ಲದಕ್ಕಿಂತ ಉತ್ತಮವಾಗಿದೆ. ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನಿಗೆ ದೊರೆಯುವ ಚಾಟಿಯಷ್ಟು (ಅಥವಾ ಚಾಟಿ ಇಡುವಷ್ಟು) ಸ್ಥಳವು ಇಹಲೋಕ ಮತ್ತು ಅದರಲ್ಲಿರುವ ಎಲ್ಲದಕ್ಕಿಂತ ಉತ್ತಮವಾಗಿದೆ. ಅಲ್ಲಾಹನ ಮಾರ್ಗದಲ್ಲಿ ದಾಸನು ಮಾಡುವ ಒಂದು ಸಂಜೆಯ ನಡೆಯುವಿಕೆ (ರೌಹ) ಅಥವಾ ಒಂದು ಮುಂಜಾನೆಯ ನಡೆಯುವಿಕೆ (ಗದ್ವಾ) ಇಹಲೋಕ ಮತ್ತು ಅದರಲ್ಲಿರುವ ಎಲ್ಲದಕ್ಕಿಂತ ಉತ್ತಮವಾಗಿದೆ".متفق عليه
عن أبي موسى الأشعري رضي الله عنه قَالَ: قالَ رسول اللَّه -صَلّى اللهُ عَلَيْهِ وسَلَّم-: «إِنَّ مِنْ إِجْلاَلِ الله -تَعَالَى-: إِكْرَامَ ذِي الشَّيْبَةِ المُسْلِمِ، وَحَامِلِ القُرْآنِ غَيرِ الغَالِي فِيه، وَالجَافِي عَنْه، وَإِكْرَام ذِي السُّلْطَان المُقْسِط».رواه أبو داود
عن عمران بن حصين رضي الله عنهما قَالَ: قَالَ رسولُ اللَّه -صَلّى اللهُ عَلَيْهِ وسَلَّم-: «الحَيَاءُ لاَ يَأْتِي إِلاَّ بِخَيرٍ». وفي رواية : «الحَيَاءُ خَيرٌ كُلُّهٌ» أو قال: «الحَيَاءُ كُلُّهُ خَيرٌ».الرواية الأولى: متفق عليها. الرواية الثانية والثالثة: رواها مسلم
عن أنس بن مالك رضي الله عنه قال: كان أخوانِ على عهد النبي صلى الله عليه وسلم وكان أحدُهما يأتي النبي صلى الله عليه وسلم والآخر يَحتَرِف، فَشَكَا الُمحتَرِف أَخَاه للنبي صلى الله عليه وسلم فقال: «لعَلَّك تُرزَقُ بِهِ».رواه الترمذي
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿಧವೆ ಮತ್ತು ಬಡವರಿಗಾಗಿ ಪರಿಶ್ರಮಪಡುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವರಿಗೆ, ಅಥವಾ ರಾತ್ರಿಯಿಡೀ ನಮಾಝ್ ಮಾಡುವವರು ಮತ್ತು ಹಗಲಿಡೀ ಉಪವಾಸ ಆಚರಿಸುವವರಿಗೆ ಸಮವಾಗಿದ್ದಾರೆ."متفق عليه
عن عائشة رضي الله عنها قالت: «ما غِرْتُ على أحد من نساء النبي صلى الله عليه وسلم ما غِرْتُ على خديجة رضي الله عنها ، وما رأيتها قط، ولكن كان يُكثر ذِكْرَها، وربما ذبح الشَّاةَ، ثم يُقطعها أَعْضَاءً، ثم يَبْعَثُهَا في صَدَائِقِ خديجة، فربما قلت له: كأن لم يكن في الدنيا إلا خديجة! فيقول: «إنها كانت وكانت وكان لي منها وَلَدٌ». وفي رواية: وإن كان لَيَذْبَحُ الشَّاءَ، فيُهدي في خَلَائِلِهَا منها ما يَسَعُهُنَّ. وفي رواية: كان إذا ذَبَحَ الشَّاةَ، يقول: «أرسلوا بها إلى أصدقاء خديجة». وفي رواية: قالت: اسْتَأْذَنَتْ هالة بنت خويلد أخت خديجة على رسول الله صلى الله عليه وسلم فعرف استئذان خديجة، فارْتَاحَ لذلك، فقال: «اللهم هالة بنت خويلد».الرواية الأولى: متفق عليها. الرواية الثانية: متفق عليها. الرواية الثالثة: متفق عليها. الرواية الرابعة: متفق عليها
عن أبي هريرة رضي الله عنه مرفوعًا: «يقول الله تعالى : ما لِعَبدِي المُؤمن عِندِي جَزَاء إِذَا قَبَضتُ صَفِيَّه مِنْ أَهلِ الدُّنيَا ثُمَّ احْتَسَبَه إِلاَّ الجنَّة».رواه البخاري
ಉಮ್ಮು ದರ್ದಾಅ್ ಮತ್ತು ಅಬೂ ದರ್ದಾಅ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಒಬ್ಬ ಮುಸ್ಲಿಂ ವ್ಯಕ್ತಿಯು ತನ್ನ ಸಹೋದರನಿಗಾಗಿ ಅವನ ಅನುಪಸ್ಥಿತಿಯಲ್ಲಿ ಮಾಡುವ ಪ್ರಾರ್ಥನೆಯು ಸ್ವೀಕರಿಸಲ್ಪಡುತ್ತದೆ. ಅವನ ತಲೆಯ ಬಳಿ ಹೊಣೆ ವಹಿಸಿಕೊಡಲಾದ ಒಬ್ಬ ದೇವದೂತರು ಇರುತ್ತಾರೆ. ಪ್ರತಿ ಬಾರಿ ಅವನು ತನ್ನ ಸಹೋದರನಿಗಾಗಿ ಒಳಿತನ್ನು ಪ್ರಾರ್ಥಿಸಿದಾಗ, ಹೊಣೆ ವಹಿಸಿಕೊಡಲಾದ ದೇವದೂತರು ಹೇಳುತ್ತಾರೆ: 'ಆಮೀನ್ (ಅಲ್ಲಾಹನೇ, ಈ ಪ್ರಾರ್ಥನೆಯನ್ನು ಸ್ವೀಕರಿಸು), ಮತ್ತು ನಿನಗೂ ಅಂತಹದ್ದೇ ಇರಲಿ' ".رواه مسلم
ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು ಮಾಡುವ ದೀನಾರ್, ಮತ್ತು ಅವನು ಅಲ್ಲಾಹನ ಮಾರ್ಗದಲ್ಲಿ ತನ್ನ ಸಹಚರರಿಗಾಗಿ ಖರ್ಚು ಮಾಡುವ ದೀನಾರ್." ಅಬೂ ಕಿಲಾಬ ಹೇಳಿದರು: "ಅವರು ಕುಟುಂಬದಿಂದ ಆರಂಭಿಸಿದರು." ನಂತರ ಅಬೂ ಕಿಲಾಬ ಹೇಳಿದರು: "ತನ್ನ ಕುಟುಂಬದ ಕಿರಿಯ ಸದಸ್ಯರಿಗಾಗಿ ಖರ್ಚು ಮಾಡುವ ಪುರುಷನಿಗಿಂತ ಹೆಚ್ಚು ಪ್ರತಿಫಲ ಪಡೆಯುವವರು ಯಾರಿದ್ದಾರೆ? ಅವನ ಮೂಲಕ ಅಲ್ಲಾಹು ಅವರನ್ನು ಪರಿಶುದ್ಧರನ್ನಾಗಿ ಮಾಡುತ್ತಾನೆ ಅಥವಾ ಅವರಿಗೆ ಪ್ರಯೋಜನವನ್ನು ನೀಡುತ್ತಾನೆ ಮತ್ತು ಅವರನ್ನು ಶ್ರೀಮಂತಗೊಳಿಸುತ್ತಾನೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ. ಅವನು ತನ್ನ ಕೈಗಳನ್ನು ತೊಳೆದಾಗ, ಅವನ ಕೈಗಳಿಂದ ಮಾಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕೈಗಳಿಂದ ಹೊರಬರುತ್ತದೆ. ಅವನು ತನ್ನ ಕಾಲುಗಳನ್ನು ತೊಳೆದಾಗ, ಅವನ ಕಾಲುಗಳಿಂದ ನಡೆದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕಾಲುಗಳಿಂದ ಹೊರಬರುತ್ತದೆ. ಎಷ್ಟರವರೆಗೆಂದರೆ ಅವನು ಪಾಪಗಳಿಂದ ಶುದ್ಧನಾಗಿ ಹೊರಬರುವವರೆಗೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ; ನನ್ನ ಸಮಾಧಿಯನ್ನು ಉತ್ಸವ ಸ್ಥಳವಾಗಿ ಮಾಡಬೇಡಿ; ನನ್ನ ಮೇಲೆ ಸ್ವಲಾತ್ ಹೇಳಿರಿ, ನೀವು ಎಲ್ಲಿದ್ದರೂ ನಿಶ್ಚಯವಾಗಿಯೂ ನಿಮ್ಮ ಸ್ವಲಾತ್ ನನ್ನನ್ನು ತಲುಪುತ್ತದೆ.”رواه أبو داود
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇಬ್ಬರು ಹೆಣ್ಣು ಮಕ್ಕಳನ್ನು ಅವರು ಪ್ರಾಯಕ್ಕೆ ಬರುವವರೆಗೆ ಪೋಷಿಸುತ್ತಾರೋ, ಅವರು ಮತ್ತು ನಾನು ಪುನರುತ್ಥಾನ ದಿನದಂದು ಹೀಗೆ ಬರುವೆವು." (ಹೀಗೆ ಹೇಳುತ್ತಾ) ಅವರು ತಮ್ಮ ಬೆರಳುಗಳನ್ನು ಜೋಡಿಸಿದರು.رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಸತ್ಯವಿಶ್ವಾಸಿಗಳಾಗುವ ತನಕ ನೀವು ಸ್ವರ್ಗವನ್ನು ಪ್ರವೇಶಿಸುವುದಿಲ್ಲ, ಮತ್ತು ನೀವು ಪರಸ್ಪರ ಪ್ರೀತಿಸುವ ತನಕ ನೀವು ಸತ್ಯವಿಶ್ವಾಸಿಗಳಾಗುವುದಿಲ್ಲ. ನೀವು ಪರಸ್ಪರ ಪ್ರೀತಿಸುವಂತೆ ಮಾಡುವ ಒಂದು ವಿಷಯವನ್ನು ನಾನು ನಿಮಗೆ ತಿಳಿಸಲೇ? ನಿಮ್ಮ ಮಧ್ಯೆ ಸಲಾಮ್ ಹೇಳುವುದನ್ನು ವ್ಯಾಪಕಗೊಳಿಸಿ."رواه مسلم
عن عبد الله بن عمر رضي الله عنهما أَنَّ رَجُلاً مِنَ الأعرَاب لَقِيهَ بِطَريق مَكَّة، فَسَلَّم عَلَيه عَبد الله بنُ عمر، وَحمَلهُ على حمار كان يركَبُهُ، وَأعطَاه عِمَامَة كَانت على رأسه، قال ابن دينار: فقُلنا له: أَصْلَحَك الله، إنَّهم الأعراب وهُم يَرْضَون بِاليَسِير، فقال عبدُ الله بنَ عُمر: إِنَّ أَبَا هَذَا كَانَ وُدًّا لِعُمر بنِ الخطَّاب رضي الله عنه وإنِّي سَمِعت رسول الله صلى الله عليه وسلم يقول: «إِنَّ أَبَرَّ البِرِّ صِلَةُ الرَّجُل أَهْلَ وُدِّ أَبِيه». وفي رواية عن ابن دينار، عن ابن عمر: أنَّه كان إذَا خَرَج إلى مكة كان له حمار يَتَرَوَّحُ عليه إذا ملَّ رُكُوبَ الرَّاحِلة، وَعِمَامة يَشُدُّ بها رأسه، فَبينَا هو يومًا على ذلك الحمار إِذْ مَرَّ بِهِ أَعْرَابِي، فقال: أَلَسْتَ فُلاَن بنَ فُلاَن؟ قال: بَلَى. فَأَعْطَاهُ الحِمَار، فقال: ارْكَب هَذَا، وَأَعْطَاهُ العِمَامَةَ وَقَالَ: اشْدُدْ بِهَا رَأْسَكَ، فَقَالَ لَهُ بَعض أصحَابِه: غفر الله لك أَعْطَيت هذا الأعرابي حمارا كنت تَرَوَّحُ عليه، وعِمَامَة كُنتَ تشدُّ بها رأسَك؟ فقال: إِنِّي سمِعت رسول الله صلى الله عليه وسلم يقول: «إِنَّ مِنْ أَبَرِّ البِّر أَنْ يَصِلَ الرَّجُلُ أَهْلَ وُدَّ أَبِيهِ بَعْدَ أَنْ يُوَلِّيَ» وَإِنَّ أَبَاه كان صَدِيقًا لِعُمَرَ رضي الله عنه .رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ತಿಳಿಸಿಕೊಡಿ." ಅವರು ಹೇಳಿದರು: "ಕಷ್ಟ ಕಾಲದಲ್ಲಿ ಅತ್ಯುತ್ತಮವಾಗಿ ವುದೂ ನಿರ್ವಹಿಸುವುದು, ಮಸೀದಿಗೆ ಅತ್ಯಧಿಕ ಹೆಜ್ಜೆ ಹಾಕುವುದು ಮತ್ತು ಒಂದು ನಮಾಝ್ ನಿರ್ವಹಿಸಿದ ಬಳಿಕ ಇನ್ನೊಂದು ನಮಾಝನ್ನು ಕಾಯುವುದು. ಇದೇ ರಿಬಾತ್ ಆಗಿದೆ."رواه مسلم
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ತಿಳಿಸಿಕೊಡಿ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹನ ಸ್ಮರಣೆ."رواه الترمذي وابن ماجه وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”رواه مسلم
ಅಬೂ ಸಈದ್ ಖುದ್ರಿ ಮತ್ತು ಅಬೂ ಹುರೈರ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ಮುಸಲ್ಮಾನನಿಗೆ ಆಯಾಸ, ಅನಾರೋಗ್ಯ, ಆತಂಕ, ದುಃಖ, ಹಾನಿ, ಸಂಕಟ ಮುಂತಾದ ಯಾವುದೇ ಸಂಭವಿಸಿದರೂ, ಎಲ್ಲಿಯವರೆಗೆಂದರೆ ಒಂದು ಸಣ್ಣ ಮುಳ್ಳು ಚುಚ್ಚಿದರೂ ಸಹ, ಅದಕ್ಕೆ ಪರಿಹಾರವಾಗಿ ಅಲ್ಲಾಹು ಅವನ ಕೆಲವು ಪಾಪಗಳನ್ನು ಅಳಿಸದೆ ಇರುವುದಿಲ್ಲ.”متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎಷ್ಟೋ ಬಾಗಿಲುಗಳಿಂದ, ಕೆದರಿದ ಕೂದಲಿನ ದೂಡಲ್ಪಟ್ಟ ವ್ಯಕ್ತಿಗಳಿದ್ದಾರೆ. ಒಂದು ವೇಳೆ ಅವನು ಅಲ್ಲಾಹನ ಮೇಲೆ ಆಣೆಯಿಟ್ಟರೆ, ಅವನು (ಅಲ್ಲಾಹು) ಖಂಡಿತವಾಗಿಯೂ ಅದನ್ನು ಪೂರ್ಣಗೊಳಿಸುತ್ತಾನೆ".رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ." ಅವರೊಡನೆ ಕೇಳಲಾಯಿತು: “ಓ ಅಲ್ಲಾಹನ ಸಂದೇಶವಾಹಕರೇ! ಯಾರು?" ಅವರು ಉತ್ತರಿಸಿದರು: "ಯಾರು ಬದುಕಿರುವಾಗ ಅವನ ತಂದೆ-ತಾಯಿಗಳಲ್ಲಿ ಒಬ್ಬರು ಅಥವಾ ಇಬ್ಬರು ವೃದ್ಧಾಪ್ಯವನ್ನು ತಲುಪಿಯೂ ಸ್ವರ್ಗವನ್ನು ಪ್ರವೇಶಿಸಲಾಗದವನು."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾದ ದಾರಿಯಲ್ಲಿ ಚಲಿಸುತ್ತಿದ್ದರು. ಅವರು ಜುಮ್ದಾನ್ ಎಂಬ ಹೆಸರಿನ ಪರ್ವತದ ಬಳಿಯಿಂದ ಸಾಗಿದಾಗ ಹೇಳಿದರು: "ಮುಂದುವರಿಯಿರಿ. ಇದು ಜುಮ್ದಾನ್. ಮುಫರ್‍ರಿದ್‌ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಮುಫರ್‍ರಿದ್‌ಗಳು ಎಂದರೇನು?" ಅವರು ಉತ್ತರಿಸಿದರು: "ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವ ಪುರುಷರು ಮತ್ತು ಸ್ತ್ರೀಯರು."رواه مسلم
عن أبي هريرة رضي الله عنه قال: جاء رجل إلى رسول الله صلى الله عليه وسلم فقال: يا رسول الله، مَنْ أحقُّ الناس بِحُسن صَحَابَتِي؟ قال: «أمك» قال: ثم مَنْ ؟ قال: «أمك»، قال: ثم مَنْ؟ قال: «أمك»، قال: ثم مَنْ؟ قال: «أبوك». متفق عليه. وفي رواية: يا رسول الله، مَنْ أحقُّ بحُسْنِ الصُّحْبَةِ؟ قال: «أمك، ثم أمك، ثم أمك، ثم أباك، ثم أدْنَاك أدْنَاك».الرواية الأولى: متفق عليها. الرواية الثانية: رواها مسلم
عن أنس رضي الله عنه مرفوعاً: «من خَرج في طلب العلم فهو في سَبِيلِ الله حتى يرجع».رواه الترمذي
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಅಲ್ಲಾಹನಲ್ಲಿ ಭರವಸೆಯಿಡಬೇಕಾದ ರೀತಿಯಲ್ಲೇ ಭರವಸೆಯಿಟ್ಟರೆ, ಅವನು ಹಕ್ಕಿಗಳಿಗೆ ಆಹಾರ ನೀಡುವಂತೆ ನಿಮಗೂ ಆಹಾರ ನೀಡುವನು. ಅವು ಬೆಳಗ್ಗೆ ಖಾಲಿ ಹೊಟ್ಟೆಯಿಂದ ಹೊರಟು ಸಂಜೆ ತುಂಬಿದ ಹೊಟ್ಟೆಯೊಂದಿಗೆ ಮರಳುತ್ತವೆ."رواه الترمذي وابن ماجه وأحمد