Hadith for the World
ಸದ್ಗುಣಗಳು ಮತ್ತು ನಡವಳಿಕೆಗಳು

Jurisprudence of Ethics

56 hadiths

56 hadiths

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಕುಸ್ತಿಯಲ್ಲಿ ಗೆಲ್ಲುವವನು ಬಲಶಾಲಿಯಲ್ಲ. ಕೋಪ ಬರುವಾಗ ಮನಸ್ಸನ್ನು ನಿಗ್ರಹಿಸುವವನೇ (ನಿಜವಾದ) ಬಲಶಾಲಿ.”متفق عليه
ಅಬೂ ಮಸ್‌ಊದ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸುಸ್ತಾಗಿಬಿಟ್ಟಿದೆ. ಆದ್ದರಿಂದ ನನಗೆ ಸವಾರಿ ಮಾಡುವ ಒಂದು ಒಂಟೆಯನ್ನು ಕೊಡಿ." ಅವರು ಹೇಳಿದರು: "ನನ್ನ ಬಳಿ ಒಂಟೆಯಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆ ಕೊಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ."رواه مسلم
عن عبد الله بن عمرو بن العاص رضي الله عنهما أن رسول الله صلى الله عليه وسلم قال: «من الكبائر شَتْمُ الرجل والديه» قيل: وهل يسبّ الرجل والديه؟ قال: «نعم، يسبّ أبا الرجل فيسبّ أباه، ويسبّ أمّه، فيسبّ أمّه».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ಒಳ್ಳೆಯ ಮಾತನ್ನೇ ಆಡಲಿ ಅಥವಾ ಮೌನವಾಗಿರಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ನೆರೆಮನೆಯವನನ್ನು ಗೌರವಿಸಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ಅತಿಥಿಗಳನ್ನು ಗೌರವಿಸಲಿ.”متفق عليه
ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”متفق عليه
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಜನರು ಅತಿಹೆಚ್ಚಾಗಿ ಸ್ವರ್ಗವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: "ಅಲ್ಲಾಹನ ಭಯ ಮತ್ತು ಉತ್ತಮ ನಡವಳಿಕೆ." ಜನರು ಅತಿಹೆಚ್ಚಾಗಿ ನರಕವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಅವರು ಹೀಗೆ ಉತ್ತರಿಸಿದರು: "ಬಾಯಿ ಮತ್ತು ಗುಹ್ಯಾಂಗ."رواه الترمذي وابن ماجه وأحمد
عن أبي هريرة رضي الله عنه عن رسول الله صلى الله عليه وسلم قال: «الْمُؤْمِنُ مِرْآةُ أَخِيهِ الْمُؤْمِنِ».رواه أبو داود والترمذي
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ."رواه مسلم
ಬನೂ ಮುಜಾಶಿಅ್ ಗೋತ್ರದ ಇಯಾದ್ ಇಬ್ನ್ ಹಿಮಾರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ಮಧ್ಯೆ ಎದ್ದು ನಿಂತು ಪ್ರವಚನ ನೀಡಿದರು. ಅವರು ಹೇಳಿದರು: (ಮತ್ತು ಅವರು ಹದೀಸ್ ಅನ್ನು ಮುಂದುವರಿಸಿದರು, ಅದರಲ್ಲಿ ಇದೂ ಇತ್ತು): "ಖಂಡಿತವಾಗಿಯೂ ನೀವು ಪರಸ್ಪರ ವಿನಯ ತೋರುವುದು ಕಡ್ಡಾಯವೆಂದು ಅಲ್ಲಾಹು ನನಗೆ 'ವಹೀ' (ದೈವಿಕ ಸಂದೇಶ) ನೀಡಿದ್ದಾನೆ. ಎಲ್ಲಿಯವರೆಗೆಂದರೆ, ಯಾರೊಬ್ಬನೂ ಇನ್ನೊಬ್ಬನ ಮೇಲೆ ಜಂಭ ಕೊಚ್ಚಿಕೊಳ್ಳಬಾರದು, ಮತ್ತು ಯಾರೊಬ್ಬನೂ ಇನ್ನೊಬ್ಬನ ಮೇಲೆ ಅತಿಕ್ರಮಣ ಮಾಡಬಾರದು."رواه مسلم
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯಕ್ಕೆ ನಿಷ್ಠರಾಗಿರಿ. ಏಕೆಂದರೆ, ನಿಶ್ಚಯವಾಗಿಯೂ ಸತ್ಯವು ಒಳಿತಿಗೆ ಒಯ್ಯುತ್ತದೆ ಮತ್ತು ಒಳಿತು ಸ್ವರ್ಗಕ್ಕೆ ಒಯ್ಯುತ್ತದೆ. ಒಬ್ಬ ಮನುಷ್ಯನು ಅಲ್ಲಾಹನ ಬಳಿ ಅತ್ಯಂತ ಸತ್ಯವಂತನೆಂದು ದಾಖಲಿಸಲ್ಪಡುವವರೆಗೂ ಸತ್ಯವನ್ನು ಹೇಳುತ್ತಲೇ ಇರುತ್ತಾನೆ ಮತ್ತು ಸತ್ಯಕ್ಕಾಗಿ ಪರಿಶ್ರಮಿಸುತ್ತಲೇ ಇರುತ್ತಾನೆ. ಸುಳ್ಳಿನ ಬಗ್ಗೆ ಎಚ್ಚರವಾಗಿರಿ. ಏಕೆಂದರೆ, ನಿಶ್ಚಯವಾಗಿಯೂ ಸುಳ್ಳು ಕೆಡುಕಿಗೆ ಒಯ್ಯುತ್ತದೆ ಮತ್ತು ಕೆಡುಕು ನರಕಕ್ಕೆ ಒಯ್ಯುತ್ತದೆ. ಒಬ್ಬ ಮನುಷ್ಯನು ಅಲ್ಲಾಹನ ಬಳಿ ಅತ್ಯಂತ ಸುಳ್ಳು ಹೇಳುವವನೆಂದು ದಾಖಲಿಸಲ್ಪಡುವವರೆಗೂ ಸುಳ್ಳು ಹೇಳುತ್ತಲೇ ಇರುತ್ತಾನೆ ಮತ್ತು ಸುಳ್ಳಿಗಾಗಿ ಪರಿಶ್ರಮಿಸುತ್ತಲೇ ಇರುತ್ತಾನೆ."متفق عليه
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ."رواه الترمذي وأحمد
ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳ, ಸ್ವಾವಲಂಬಿಯಾದ ಮತ್ತು ಗಮನ ಸೆಳೆಯಲು ಬಯಸದ ದಾಸನನ್ನು ಪ್ರೀತಿಸುತ್ತಾನೆ."رواه مسلم
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಬ್ಬಾಳಿಕೆಯ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ದಬ್ಬಾಳಿಕೆಯು ಪುನರುತ್ಥಾನ ದಿನದಂದು ಅಂಧಕಾರಗಳಾಗಿರುತ್ತವೆ. ಜಿಪುಣತನದ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ಜಿಪುಣತನವು ನಿಮಗಿಂತ ಮೊದಲಿನವರನ್ನು ನಾಶ ಮಾಡಿದೆ. ಅದು ಅವರನ್ನು ಅವರ ರಕ್ತ ಹರಿಸುವಂತೆ ಮತ್ತು ಅವರಿಗೆ ನಿಷಿದ್ಧವಾದುದನ್ನು ಧರ್ಮಸಮ್ಮತವಾಗಿ ಪರಿಗಣಿಸುವಂತೆ ಪ್ರೇರೇಪಿಸಿದೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ್ತಾರೋ ಅವರೇ ನಿಮ್ಮಲ್ಲಿ ಅತ್ಯುತ್ತಮ ಜನರು."رواه أبو داود والترمذي وأحمد
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."رواه مسلم
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್ನು ಪಡೆಯುತ್ತಾನೆ."رواه أبو داود وأحمد
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು."متفق عليه
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ." ನಂತರ ಅವರು ಈ ವಚನವನ್ನು ಪಠಿಸಿದರು: "ಅಕ್ರಮವೆಸಗುತ್ತಿರುವ ಊರುಗಳನ್ನು ಹಿಡಿಯುವಾಗ ತಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಆಗಿರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ವೇದನಾಭರಿತ ಮತ್ತು ಕಠೋರವಾಗಿದೆ." [ಸೂರ ಹೂದ್: 102]متفق عليه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."متفق عليه
عن أبي هريرة رضي الله عنه مرفوعًا: «بينما رجل يمشي في حُلَّةٍ تُعْجِبُهُ نَفْسُهُ، مُرَجِّلٌ رأسه، يَخْتَالُ في مَشْيَتهِ، إذ خَسَفَ اللهُ به، فهو يَتَجَلْجَلُ في الأرض إلى يوم القيامة".متفق عليه
ಅಬೂ ಮೂಸಾ ಅಲ್-ಅಶ್‌ಅರೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಸಿದವನಿಗೆ ಉಣಿಸಿರಿ, ರೋಗಿಯನ್ನು ಸಂದರ್ಶಿಸಿರಿ, ಮತ್ತು ಸೆರೆಯಾಳನ್ನು ಬಿಡಿಸಿರಿ".رواه البخاري
عن عبد الله بن مسعود رضي الله عنه عن النبيِّ صلى الله عليه وسلم ، قَالَ: «لا يدخلُ الجنةَ مَن كان في قلبه مِثقال ذرةٍ من كِبر» فقال رجل: إنّ الرجلَ يحب أن يكون ثوبه حسنا، ونَعله حسنة؟ قال: «إنّ الله جميلٌ يحب الجمالَ، الكِبر: بَطَرُ الحق وغَمْطُ الناس».رواه مسلم
ಸಮುರ ಬಿನ್ ಜುಂದುಬ್ ಮತ್ತು ಮುಗೀರ ಬಿನ್ ಶುಅ್‌ಬ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರಿಬ್ಬರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಳ್ಳು ಎಂದು ಭಾವಿಸಲಾಗುವ ಒಂದು ಹದೀಸನ್ನು ಯಾರಾದರೂ ನನ್ನ ಹೆಸರಲ್ಲಿ ವರದಿ ಮಾಡಿದರೆ, ಅವನು ಸುಳ್ಳುಗಾರರಲ್ಲಿ ಒಬ್ಬನಾಗಿದ್ದಾನೆ."رواه مسلم في مقدمته