KN
Virtues
Merits of Organs' Acts
6 hadiths
Excellence of Knowledge
8
Excellence of Monotheism
4
Merits of the Noble Qur'an
5
Merits of Being Dutiful to One's Parents
3
Merits of Maintaining Kinship Ties
1
فضائل آل البيت رضي الله عنهم
4
Merits of Good Deeds
16
Merits of Remembering Allah
10
Merits of Supplication
5
Merits of Heart Acts
4
Merits of Organs' Acts
6
6 hadiths
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿಧವೆ ಮತ್ತು ಬಡವರಿಗಾಗಿ ಪರಿಶ್ರಮಪಡುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವರಿಗೆ, ಅಥವಾ ರಾತ್ರಿಯಿಡೀ ನಮಾಝ್ ಮಾಡುವವರು ಮತ್ತು ಹಗಲಿಡೀ ಉಪವಾಸ ಆಚರಿಸುವವರಿಗೆ ಸಮವಾಗಿದ್ದಾರೆ."
متفق عليه
ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು ಮಾಡುವ ದೀನಾರ್, ಮತ್ತು ಅವನು ಅಲ್ಲಾಹನ ಮಾರ್ಗದಲ್ಲಿ ತನ್ನ ಸಹಚರರಿಗಾಗಿ ಖರ್ಚು ಮಾಡುವ ದೀನಾರ್." ಅಬೂ ಕಿಲಾಬ ಹೇಳಿದರು: "ಅವರು ಕುಟುಂಬದಿಂದ ಆರಂಭಿಸಿದರು." ನಂತರ ಅಬೂ ಕಿಲಾಬ ಹೇಳಿದರು: "ತನ್ನ ಕುಟುಂಬದ ಕಿರಿಯ ಸದಸ್ಯರಿಗಾಗಿ ಖರ್ಚು ಮಾಡುವ ಪುರುಷನಿಗಿಂತ ಹೆಚ್ಚು ಪ್ರತಿಫಲ ಪಡೆಯುವವರು ಯಾರಿದ್ದಾರೆ? ಅವನ ಮೂಲಕ ಅಲ್ಲಾಹು ಅವರನ್ನು ಪರಿಶುದ್ಧರನ್ನಾಗಿ ಮಾಡುತ್ತಾನೆ ಅಥವಾ ಅವರಿಗೆ ಪ್ರಯೋಜನವನ್ನು ನೀಡುತ್ತಾನೆ ಮತ್ತು ಅವರನ್ನು ಶ್ರೀಮಂತಗೊಳಿಸುತ್ತಾನೆ."
رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ. ಅವನು ತನ್ನ ಕೈಗಳನ್ನು ತೊಳೆದಾಗ, ಅವನ ಕೈಗಳಿಂದ ಮಾಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕೈಗಳಿಂದ ಹೊರಬರುತ್ತದೆ. ಅವನು ತನ್ನ ಕಾಲುಗಳನ್ನು ತೊಳೆದಾಗ, ಅವನ ಕಾಲುಗಳಿಂದ ನಡೆದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕಾಲುಗಳಿಂದ ಹೊರಬರುತ್ತದೆ. ಎಷ್ಟರವರೆಗೆಂದರೆ ಅವನು ಪಾಪಗಳಿಂದ ಶುದ್ಧನಾಗಿ ಹೊರಬರುವವರೆಗೆ."
رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಸತ್ಯವಿಶ್ವಾಸಿಗಳಾಗುವ ತನಕ ನೀವು ಸ್ವರ್ಗವನ್ನು ಪ್ರವೇಶಿಸುವುದಿಲ್ಲ, ಮತ್ತು ನೀವು ಪರಸ್ಪರ ಪ್ರೀತಿಸುವ ತನಕ ನೀವು ಸತ್ಯವಿಶ್ವಾಸಿಗಳಾಗುವುದಿಲ್ಲ. ನೀವು ಪರಸ್ಪರ ಪ್ರೀತಿಸುವಂತೆ ಮಾಡುವ ಒಂದು ವಿಷಯವನ್ನು ನಾನು ನಿಮಗೆ ತಿಳಿಸಲೇ? ನಿಮ್ಮ ಮಧ್ಯೆ ಸಲಾಮ್ ಹೇಳುವುದನ್ನು ವ್ಯಾಪಕಗೊಳಿಸಿ."
رواه مسلم
عن أبي هريرة رضي الله عنه قال: قال رسول الله صلى الله عليه وسلم : «من قتل وَزَغَةً فِي أَوَّلِ ضَرْبَةٍ فله كذا وكذا حسنة، ومن قتلها في الضَّرْبَةِ الثانية فله كذا وكذا حسنة دون الأولى، وإن قتلها في الضربة الثالثة فله كذا وكذا حسنة». وفي رواية: «من قتل وَزَغًا في أول ضربة كتب له مائة حسنة، وفي الثانية دون ذلك، وفي الثالثة دون ذلك».
رواه مسلم
عن أبي سعيد الخُدْرِي رضي الله عنه قال: جاءت امرأة إلى رسول الله صلى الله عليه وسلم فقالت: يا رسول الله، ذهب الرجال بِحَدِيثِكَ، فاجْعَل لنَا من نَفْسِك يومًا نَأتِيكَ فيه تُعَلِّمُنَا مما عَلَّمَكَ الله، قال: «اجْتَمِعْنَ يَوَم كَذَا وكَذَا» فَاجْتَمَعْنَ، فأتَاهُنَّ النبي صلى الله عليه وسلم فَعَلَّمَهُنَّ مما عَلَّمَهُ الله، ثم قال: «ما مِنْكُنَّ من امرأة تُقَدِّمُ ثَلاَثَة من الولد إلا كانوا حِجَابًا من النَّارِ» فقالت امرأة: واثنين؟ فقال رسول الله صلى الله عليه وسلم : «واثنين».
متفق عليه