Hadith for the World
Jurisprudence of Ethics

Praiseworthy Morals

35 hadiths

35 hadiths

ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳ, ಸ್ವಾವಲಂಬಿಯಾದ ಮತ್ತು ಗಮನ ಸೆಳೆಯಲು ಬಯಸದ ದಾಸನನ್ನು ಪ್ರೀತಿಸುತ್ತಾನೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ್ತಾರೋ ಅವರೇ ನಿಮ್ಮಲ್ಲಿ ಅತ್ಯುತ್ತಮ ಜನರು."رواه أبو داود والترمذي وأحمد
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."رواه مسلم
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್ನು ಪಡೆಯುತ್ತಾನೆ."رواه أبو داود وأحمد
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು."متفق عليه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."متفق عليه
ಅಬೂ ಮೂಸಾ ಅಲ್-ಅಶ್‌ಅರೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಸಿದವನಿಗೆ ಉಣಿಸಿರಿ, ರೋಗಿಯನ್ನು ಸಂದರ್ಶಿಸಿರಿ, ಮತ್ತು ಸೆರೆಯಾಳನ್ನು ಬಿಡಿಸಿರಿ".رواه البخاري
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಯೆ ತೋರುವವರಿಗೆ ಪರಮ ದಯಾಮಯನು (ಅಲ್ಲಾಹು) ದಯೆ ತೋರುತ್ತಾನೆ. ಭೂಮಿಯಲ್ಲಿರುವವರಿಗೆ ದಯೆ ತೋರಿರಿ. ಆಕಾಶದಲ್ಲಿರುವವನು ನಿಮಗೆ ದಯೆ ತೋರುತ್ತಾನೆ."رواه أبو داود والترمذي وأحمد
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರ ನಾಲಗೆ ಮತ್ತು ಕೈಯಿಂದ ಇತರ ಮುಸಲ್ಮಾನರು ಸುರಕ್ಷಿತರೋ ಅವನೇ ಮುಸ್ಲಿಮ್. ಯಾರು ಅಲ್ಲಾಹು ನಿಷೇಧಿಸಿದ್ದನ್ನು ತೊರೆಯುತ್ತಾನೋ ಅವನೇ ಮುಹಾಜಿರ್."متفق عليه
عَن أَبي هُرَيْرَةَ، قَالَ: قَامَ رَسُولُ اللَّهِ صَلَّى اللهُ عَلَيْهِ وَسَلَّمَ فِي صَلاَةٍ وَقُمْنَا مَعَهُ، فَقَالَ أَعْرَابِيٌّ وَهُوَ فِي الصَّلاَةِ: اللَّهُمَّ ارْحَمْنِي وَمُحَمَّدًا، وَلاَ تَرْحَمْ مَعَنَا أَحَدًا. فَلَمَّا سَلَّمَ النَّبِيُّ صَلَّى اللهُ عَلَيْهِ وَسَلَّمَ قَالَ لِلْأَعْرَابِيِّ: «لَقَدْ حَجَّرْتَ وَاسِعًا» يُرِيدُ رَحْمَةَ اللهِ.رواه البخاري
عَنْ أَنَسِ بْنِ مَالِكٍ رَضِيَ اللَّهُ عَنْهُ قَالَ: سَمِعْتُ النَّبِيَّ صَلَّى اللهُ عَلَيْهِ وَسَلَّمَ يَقُولُ: «إِنَّ اللَّهَ قَالَ: إِذَا ابْتَلَيْتُ عَبْدِي بِحَبِيبَتَيْهِ فَصَبَرَ، عَوَّضْتُهُ مِنْهُمَا الجَنَّةَ» يُرِيدُ: عَيْنَيْهِ.رواه البخاري