Hadith for the World
Jurisprudence of Ethics

Blameworthy Morals

21 hadiths

21 hadiths

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಅಲ್ಲಾಹು ಮೊದಲಿನವರು ಮತ್ತು ನಂತರದವರನ್ನು (ಎಲ್ಲರನ್ನೂ) ಒಟ್ಟುಗೂಡಿಸಿದಾಗ, ಪ್ರತಿಯೊಬ್ಬ ವಿಶ್ವಾಸದ್ರೋಹಿಗಾಗಿ ಒಂದು ಪ್ರತ್ಯೇಕ ಧ್ವಜ ಏರಿಸಲಾಗುವುದು. ಆಗ ಹೇಳಲಾಗುವುದು: 'ಇದು ಇಂಥಿಂತವನ ಮಗನ ವಿಶ್ವಾಸದ್ರೋಹ'."متفق عليه
ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.متفق عليه
عن أبي هريرة رضي الله عنه مرفوعاً: «أتدرون من المفلس؟» قالوا: المُفْلِس فينا من لا دِرهَمَ له ولا مَتَاع، فقال: «إن المفلس من أمتي من يأتي يوم القيامة بصلاة وصيام وزكاة، ويأتي وقد شَتَمَ هذا، وقذف هذا، وأكل مال هذا، وسَفَكَ دم هذا، وضرب هذا، فيعطى هذا من حسناته، وهذا من حسناته، فإن فنيت حسناته قبل أن يُقْضَى ما عليه، أخذ من خطاياهم فَطُرِحتْ عليه، ثم طُرِحَ في النار».رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮಾಟಗಾರಿಕೆ (ವಾಮಾಚಾರ) ಮಾಡುವುದು; ಅಲ್ಲಾಹು (ಹತ್ಯೆ ಮಾಡುವುದು) ನಿಷೇಧಿಸಿದ ಮನುಷ್ಯ ಜೀವಿಯನ್ನು ನೈತಿಕ ಹಕ್ಕಿನಿಂದಲ್ಲದೆ ಹತ್ಯೆ ಮಾಡುವುದು; ಬಡ್ಡಿ ತಿನ್ನುವುದು; ಅನಾಥರ ಆಸ್ತಿಯನ್ನು ತಿನ್ನುವುದು; ಯುದ್ಧಭೂಮಿಯಿಂದ ಪಲಾಯನ ಮಾಡುವುದು; ಮತ್ತು ಪರಿಶುದ್ಧ, ಮುಗ್ಧ ಹಾಗೂ ಸತ್ಯವಿಶ್ವಾಸಿಗಳಾದ ಮಹಿಳೆಯರ ಮೇಲೆ ದುರಾರೋಪ ಹೊರಿಸುವುದು.”متفق عليه
ಸುಲೈಮಾನ್ ಬಿನ್ ಸುರದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕುಳಿತಿದ್ದೆ. ಆಗ ಅಲ್ಲಿ ಇಬ್ಬರು ಪರಸ್ಪರ ನಿಂದಿಸುತ್ತಿದ್ದರು. ಅವರಲ್ಲೊಬ್ಬನ ಮುಖ ಕೆಂಪಾಯಿತು ಮತ್ತು ಅವನ ಕುತ್ತಿಗೆಯ ರಕ್ತನಾಳಗಳು ಊದಿಕೊಂಡವು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾನು ಒಂದು ಮಾತನ್ನು ಬಲ್ಲೆ. ಅವನೇನಾದರೂ ಅದನ್ನು ಹೇಳಿದರೆ, ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ. ಅವನು ‘ಅಊದು ಬಿಲ್ಲಾಹಿ ಮಿನಶ್ಶೈತಾನ್’ ಎಂದು ಹೇಳಿದರೆ ಅವನಲ್ಲುಂಟಾಗುತ್ತಿರುವ ಕೋಪವು ದೂರವಾಗುತ್ತದೆ." ಆಗ ಅವರು ಆ ವ್ಯಕ್ತಿಯೊಡನೆ ಹೇಳಿದರು: "ಶೈತಾನನಿಂದ ಅಲ್ಲಾಹನಲ್ಲಿ ರಕ್ಷಣೆ ಬೇಡು" ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದಾರೆ. ಆಗ ಅವನು ಕೇಳಿದನು: "ನನಗೇನು ಹುಚ್ಚು ಹಿಡಿದಿದೆಯೇ?"متفق عليه
ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಂದು ವೇಳೆ ಆದಮರ ಪುತ್ರನಿಗೆ (ಮನುಷ್ಯನಿಗೆ) ಎರಡು ಕಣಿವೆಗಳಷ್ಟು ಸಂಪತ್ತು ಇದ್ದಿದ್ದರೆ, ಅವನು ಖಂಡಿತವಾಗಿಯೂ ಮೂರನೇ ಕಣಿವೆಯನ್ನು ಬಯಸುತ್ತಿದ್ದನು. ಮತ್ತು ಆದಮರ ಪುತ್ರನ ಹೊಟ್ಟೆಯನ್ನು ಮಣ್ಣನ್ನು ಹೊರತುಪಡಿಸಿ ಬೇರೇನೂ ತುಂಬಿಸುವುದಿಲ್ಲ (ಅಂದರೆ, ಮರಣ ಹೊಂದುವವರೆಗೆ ಅವನ ಆಸೆ ತೀರುವುದಿಲ್ಲ). ಮತ್ತು ಯಾರು ತೌಬಾ (ಪಶ್ಚಾತ್ತಾಪ) ಮಾಡುತ್ತಾರೋ, ಅಲ್ಲಾಹು ಅವನ ತೌಬಾವನ್ನು ಸ್ವೀಕರಿಸುತ್ತಾನೆ".متفق عليه
عن ابن عمر رضي الله عنهما مرفوعا: «الظلم ظلمات يوم القيامة». عن جابر رضي الله عنهما مرفوعا: «اتقوا الظلم، فإن الظلم ظلمات يوم القيامة، واتقوا الشُّحَ؛ فإنه أَهْلَكَ من كان قبلكم».حديث ابن عمر -رضي الله عنهما-: متفق عليه. حديث جابر -رضي الله عنه-: رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ. ನೀವು ಒಬ್ಬರನ್ನೊಬ್ಬರು ಬೇಹುಗಾರಿಕೆ ಮಾಡಬೇಡಿ, ಒಬ್ಬರು ಇನ್ನೊಬ್ಬರ ಖಾಸಗಿ ವಿಚಾರಗಳನ್ನು ಕೆದಕಬೇಡಿ, ಒಬ್ಬರನ್ನೊಬ್ಬರು ಅಸೂಯೆ ಪಡಬೇಡಿ, ಒಬ್ಬರಿಗೊಬ್ಬರು ಮುಖ ತಿರುಗಿಸಬೇಡಿ, ಒಬ್ಬರನ್ನೊಬ್ಬರು ದ್ವೇಷಿಸಬೇಡಿ. ಓ ಅಲ್ಲಾಹನ ದಾಸರೇ, ನೀವು ಸಹೋದರರಾಗಿರಿ."متفق عليه
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ."متفق عليه
عن عبد الله بن عمرو بن العاص رضي الله عنهما أن رسول الله صلى الله عليه وسلم قال: «من الكبائر شَتْمُ الرجل والديه» قيل: وهل يسبّ الرجل والديه؟ قال: «نعم، يسبّ أبا الرجل فيسبّ أباه، ويسبّ أمّه، فيسبّ أمّه».متفق عليه
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."متفق عليه
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅತಿಯಾಗಿ ಶಾಪ ಹಾಕುವವರು ಪುನರುತ್ಥಾನ ದಿನದಂದು ಸಾಕ್ಷಿಗಳು ಅಥವಾ ಶಿಫಾರಸ್ಸು ಮಾಡುವವರು ಆಗುವುದಿಲ್ಲ."رواه مسلم
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಬ್ಬಾಳಿಕೆಯ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ದಬ್ಬಾಳಿಕೆಯು ಪುನರುತ್ಥಾನ ದಿನದಂದು ಅಂಧಕಾರಗಳಾಗಿರುತ್ತವೆ. ಜಿಪುಣತನದ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ಜಿಪುಣತನವು ನಿಮಗಿಂತ ಮೊದಲಿನವರನ್ನು ನಾಶ ಮಾಡಿದೆ. ಅದು ಅವರನ್ನು ಅವರ ರಕ್ತ ಹರಿಸುವಂತೆ ಮತ್ತು ಅವರಿಗೆ ನಿಷಿದ್ಧವಾದುದನ್ನು ಧರ್ಮಸಮ್ಮತವಾಗಿ ಪರಿಗಣಿಸುವಂತೆ ಪ್ರೇರೇಪಿಸಿದೆ."رواه مسلم
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ." ನಂತರ ಅವರು ಈ ವಚನವನ್ನು ಪಠಿಸಿದರು: "ಅಕ್ರಮವೆಸಗುತ್ತಿರುವ ಊರುಗಳನ್ನು ಹಿಡಿಯುವಾಗ ತಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಆಗಿರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ವೇದನಾಭರಿತ ಮತ್ತು ಕಠೋರವಾಗಿದೆ." [ಸೂರ ಹೂದ್: 102]متفق عليه
عن أبي هريرة رضي الله عنه مرفوعًا: «بينما رجل يمشي في حُلَّةٍ تُعْجِبُهُ نَفْسُهُ، مُرَجِّلٌ رأسه، يَخْتَالُ في مَشْيَتهِ، إذ خَسَفَ اللهُ به، فهو يَتَجَلْجَلُ في الأرض إلى يوم القيامة".متفق عليه
عن عبد الله بن مسعود رضي الله عنه عن النبيِّ صلى الله عليه وسلم ، قَالَ: «لا يدخلُ الجنةَ مَن كان في قلبه مِثقال ذرةٍ من كِبر» فقال رجل: إنّ الرجلَ يحب أن يكون ثوبه حسنا، ونَعله حسنة؟ قال: «إنّ الله جميلٌ يحب الجمالَ، الكِبر: بَطَرُ الحق وغَمْطُ الناس».رواه مسلم
ಸಮುರ ಬಿನ್ ಜುಂದುಬ್ ಮತ್ತು ಮುಗೀರ ಬಿನ್ ಶುಅ್‌ಬ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರಿಬ್ಬರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಳ್ಳು ಎಂದು ಭಾವಿಸಲಾಗುವ ಒಂದು ಹದೀಸನ್ನು ಯಾರಾದರೂ ನನ್ನ ಹೆಸರಲ್ಲಿ ವರದಿ ಮಾಡಿದರೆ, ಅವನು ಸುಳ್ಳುಗಾರರಲ್ಲಿ ಒಬ್ಬನಾಗಿದ್ದಾನೆ."رواه مسلم في مقدمته
ಹಿಶಾಮ್ ಇಬ್ನ್ ಹಕೀಮ್ ಇಬ್ನ್ ಹಿಝಾಮ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಶಾಮ್ (ಸಿರಿಯಾ) ನಲ್ಲಿ 'ಅನ್ಬಾತ್' (ಜನಾಂಗದವರು) ಗಳ ಒಂದು ಗುಂಪಿನ ಬಳಿ ಹಾದುಹೋದರು. ಅವರನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿತ್ತು. ಅವರು (ಹಿಶಾಮ್) ಕೇಳಿದರು: "ಇವರ ವಿಷಯವೇನು?". ಜನರು ಹೇಳಿದರು: "ಅವರನ್ನು 'ಜಿಝ್ಯಾ' (ತೆರಿಗೆ) ಗಾಗಿ ತಡೆಹಿಡಿಯಲಾಗಿದೆ". ಆಗ ಹಿಶಾಮ್ ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುವುದನ್ನು ಖಂಡಿತವಾಗಿಯೂ ಕೇಳಿದ್ದೇನೆ ಎಂದು ನಾನು ಸಾಕ್ಷಿ ನುಡಿಯುತ್ತೇನೆ: 'ಖಂಡಿತವಾಗಿಯೂ ಇಹಲೋಕದಲ್ಲಿ ಜನರನ್ನು ಶಿಕ್ಷಿಸುವವರನ್ನು ಅಲ್ಲಾಹು ಶಿಕ್ಷಿಸುತ್ತಾನೆ' ".رواه مسلم
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಪುರುಷನು ಇನ್ನೊಬ್ಬ ಪುರುಷನ ಖಾಸಗಿ ಭಾಗಗಳನ್ನು ಮತ್ತು ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಖಾಸಗಿ ಭಾಗಗಳನ್ನು ನೋಡಬಾರದು. ಒಬ್ಬ ಪುರುಷನು ಇನ್ನೊಬ್ಬ ಪುರುಷನ ಜೊತೆಗೆ ಒಂದೇ ಬಟ್ಟೆಯಲ್ಲಿ ಮಲಗಬಾರದು. ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಜೊತೆಗೆ ಒಂದೇ ಬಟ್ಟೆಯಲ್ಲಿ ಮಲಗಬಾರದು."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."متفق عليه
أَنَّ رَسُولَ اللهِ صَلَّى اللهُ عَلَيْهِ وَسَلَّمَ مَرَّ عَلَى صُبْرَةِ طَعَامٍ فَأَدْخَلَ يَدَهُ فِيهَا، فَنَالَتْ أَصَابِعُهُ بَلَلًا فَقَالَ: «مَا هَذَا يَا صَاحِبَ الطَّعَامِ؟» قَالَ أَصَابَتْهُ السَّمَاءُ يَا رَسُولَ اللهِ، قَالَ: «أَفَلَا جَعَلْتَهُ فَوْقَ الطَّعَامِ كَيْ يَرَاهُ النَّاسُ؟ @مَنْ غَشَّ فَلَيْسَ مِنِّي».رواه مسلم