Hadith for the World
Jurisprudence of Supplications and Remembrance of Allah

Prophetic Guidance on Remembering Allah

5 hadiths

5 hadiths

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದಾರೆ: "ಒಬ್ಬ ವ್ಯಕ್ತಿ ಮನೆಯನ್ನು ಪ್ರವೇಶಿಸುವಾಗ ಮತ್ತು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸಿದರೆ, ಶೈತಾನನು ಹೇಳುತ್ತಾನೆ: ನಿಮಗೆ ಇಲ್ಲಿ ರಾತ್ರಿವಾಸವಿಲ್ಲ ಮತ್ತು ರಾತ್ರಿಭೋಜನವಿಲ್ಲ. ಆದರೆ ಅವನು ಮನೆಯನ್ನು ಪ್ರವೇಶಿಸುವಾಗ ಅಲ್ಲಾಹನನ್ನು ಸ್ಮರಿಸದಿದ್ದರೆ, ಶೈತಾನನು ಹೇಳುತ್ತಾನೆ: ನೀವು ರಾತ್ರಿವಾಸವನ್ನು ಪಡೆದಿದ್ದೀರಿ. ಅವನು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸದಿದ್ದರೆ ಶೈತಾನನು ಹೇಳುತ್ತಾನೆ: ನೀವು ರಾತ್ರಿವಾಸವನ್ನು ಮತ್ತು ರಾತ್ರಿಭೋಜನವನ್ನು ಪಡೆದಿದ್ದೀರಿ."رواه مسلم
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಓ ಅಲ್ಲಾಹ್, ನಿನಗೆ ನಾನು ಶರಣಾಗಿದ್ದೇನೆ, ನಿನ್ನಲ್ಲಿ ವಿಶ್ವಾಸವಿಟ್ಟಿದ್ದೇನೆ, ನಿನ್ನ ಮೇಲೆ ಭರವಸೆ ಇಟ್ಟಿದ್ದೇನೆ, ನಿನ್ನ ಕಡೆಗೆ ತಿರುಗಿದ್ದೇನೆ, ನಿನ್ನ ಸಹಾಯದಿಂದ ವಾದಿಸಿದ್ದೇನೆ. ಓ ಅಲ್ಲಾಹ್, ನೀನು ನನ್ನನ್ನು ದಾರಿತಪ್ಪಿಸದಂತೆ ನಿನ್ನ ಘನತೆಯಿಂದ ನಾನು ನಿನ್ನಲ್ಲಿ ಅಭಯ ಬೇಡುತ್ತೇನೆ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ಯಾವುದೇ ಆರಾಧ್ಯನಿಲ್ಲ. ನೀನು ಶಾಶ್ವತವಾಗಿ ಜೀವಂತವಿರುವವನು, ಎಂದಿಗೂ ಸಾಯದವನು. ಜಿನ್ನ್‌ಗಳು ಮತ್ತು ಮನುಷ್ಯರು ಸಾಯುತ್ತಾರೆ."متفق عليه، وهذا لفظ مسلم ورواه البخاري مختصرًا
عن أبي هريرة رضي الله عنه قال: سمعت رسول الله صلى الله عليه وسلم يقول: «وَاللهِ إني لأَسْتَغْفِرُ اللهَ وأَتُوبُ إليهِ في اليومِ أَكْثَرَ من سَبْعِينَ مَرَّةً».رواه البخاري
ಅಗರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಇವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಒಬ್ಬರಾಗಿದ್ದರು - ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ, ಅಲ್ಲಾಹನ ಕಡೆಗೆ ಪಶ್ಚಾತ್ತಾಪ ಪಡಿರಿ. ಏಕೆಂದರೆ ನಾನು ದಿನಕ್ಕೆ ನೂರು ಬಾರಿ ಅವನ ಕಡೆಗೆ ಪಶ್ಚಾತ್ತಾಪ ಪಡುತ್ತೇನೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸುಜೂದ್‌ನಲ್ಲಿ ಹೀಗೆ ಹೇಳುತ್ತಿದ್ದರು: "ಓ ಅಲ್ಲಾಹ್, ನನ್ನ ಎಲ್ಲಾ ಪಾಪಗಳನ್ನು ಕ್ಷಮಿಸು, ಅವುಗಳಲ್ಲಿ ಚಿಕ್ಕದು, ದೊಡ್ಡದು, ಮೊದಲನೆಯದ್ದು, ಕೊನೆಯದ್ದು, ಬಹಿರಂಗವಾದದ್ದು ಮತ್ತು ರಹಸ್ಯವಾದದ್ದು."رواه مسلم