Hadith for the World
ಹದೀಸ್ ಮತ್ತು ಇತರೆ ಸಂಬಂಧಿತ ವಿಷಯಗಳು

General Sunnah Topics

3 hadiths

3 hadiths

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳುತ್ತಾನೋ ಅವನು ನರಕದಲ್ಲಿ ತನ್ನ ಆಸನವನ್ನು ಸಿದ್ಧಪಡಿಸಿಕೊಳ್ಳಲಿ.”رواه البخاري
ಸಮುರ ಬಿನ್ ಜುಂದುಬ್ ಮತ್ತು ಮುಗೀರ ಬಿನ್ ಶುಅ್‌ಬ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರಿಬ್ಬರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಳ್ಳು ಎಂದು ಭಾವಿಸಲಾಗುವ ಒಂದು ಹದೀಸನ್ನು ಯಾರಾದರೂ ನನ್ನ ಹೆಸರಲ್ಲಿ ವರದಿ ಮಾಡಿದರೆ, ಅವನು ಸುಳ್ಳುಗಾರರಲ್ಲಿ ಒಬ್ಬನಾಗಿದ್ದಾನೆ."رواه مسلم في مقدمته
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."متفق عليه