Hadith for the World
Ablution

Excellence of Ablution

3 hadiths

3 hadiths

عن أبي هريرة رضي الله عنه قال قال رسول الله صلى الله عليه وسلم : ((إن أمتي يُدْعَون يوم القيامة غُرًّا مُحَجَلِّين من آثار الوُضُوء)). فمن اسْتَطَاع منكم أن يُطِيل غُرَّتَه فَليَفعل. وفي لفظ لمسلم: ((رأَيت أبا هريرة يتوضَّأ، فغسل وجهه ويديه حتى كاد يبلغ المنكبين، ثم غسل رجليه حتى رَفَع إلى السَّاقين، ثم قال: سمعت رسول الله صلى الله عليه وسلم يقول: إنَّ أمتي يُدْعَون يوم القيامة غُرًّا مُحَجَّلِين من آثار الوُضُوء)) فمن استطاع منكم أن يطيل غُرَّتَه وتَحْجِيلَه فَليَفعَل. وفي لفظ لمسلم: سمعت خليلي صلى الله عليه وسلم يقول: ((تَبْلُغ الحِليَة من المؤمن حيث يبلغ الوُضُوء)).الرواية الأولى: متفق عليه. الرواية الثانية: رواها مسلم. الرواية الثالثة: رواها مسلم
ಉಸ್ಮಾನ್ ಬಿನ್ ಅಫ್ಫಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದಲೂ ಸಹ."رواه مسلم
ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ. ನಮಾಝ್ ಬೆಳಕಾಗಿದೆ, ದಾನವು ಪುರಾವೆಯಾಗಿದೆ, ತಾಳ್ಮೆಯು ಪ್ರಕಾಶವಾಗಿದೆ, ಮತ್ತು ಕುರ್‌ಆನ್ ನಿನ್ನ ಪರವಾಗಿ ಅಥವಾ ನಿನಗೆ ವಿರುದ್ಧವಾಗಿರುವ ಪುರಾವೆಯಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಬೆಳಗಾಗುತ್ತಲೇ ತನ್ನ ಆತ್ಮವನ್ನು ಮಾರಾಟ ಮಾಡುತ್ತಾನೆ. ನಂತರ ಅವನು ಅದನ್ನು ಸ್ವತಂತ್ರಗೊಳಿಸುತ್ತಾನೆ ಅಥವಾ ನಾಶಗೊಳಿಸುತ್ತಾನೆ."رواه مسلم