Hadith for the World
ನಮಾಝ್

Obligation of Prayer and Ruling on Its Abandoner

5 hadiths

5 hadiths

ಅಮ್ರ್ ಬಿನ್ ಶುಐಬ್ ರಿಂದ, ಅವರು ಅವರ ತಂದೆಯಿಂದ, ಅವರು ಅವರ ತಾತನಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಕ್ಕಳಿಗೆ ಏಳು ವರ್ಷ ಪ್ರಾಯವಾದಾಗ ನಮಾಝ್ ನಿರ್ವಹಿಸಲು ಆದೇಶಿಸಿರಿ, ಹತ್ತು ವರ್ಷ ಪ್ರಾಯವಾದಾಗ ಅದಕ್ಕಾಗಿ ಹೊಡೆಯಿರಿ ಮತ್ತು ಮಲಗುವ ಸ್ಥಳದಲ್ಲಿ ಅವರನ್ನು ಬೇರ್ಪಡಿಸಿರಿ."رواه أبو داود
ಬುರೈದ ಬಿನ್ ಹಸೀಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಸರ್ ನಮಾಜನ್ನು ಬೇಗನೆ ನಿರ್ವಹಿಸಿರಿ. ಏಕೆಂದರೆ ಪ್ರವಾದಿಯವರು ಹೇಳಿದರು: "ಯಾರು ಅಸರ್ ನಮಾಝನ್ನು ತೊರೆಯುತ್ತಾರೋ ಅವರ ಕರ್ಮಗಳು ನಿಷ್ಪಲವಾಗುತ್ತವೆ."رواه البخاري
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."متفق عليه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ನಮಾಝನ್ನು ಮರೆತುಬಿಟ್ಟರೆ ನೆನಪಾದಾಗ ಅದನ್ನು ನಿರ್ವಹಿಸಲಿ. ಇದಲ್ಲದೆ ಅದಕ್ಕೆ ಬೇರೆ ಪ್ರಾಯಶ್ಚಿತ್ತವಿಲ್ಲ. "ನನ್ನ ನೆನಪಿಗಾಗಿ ನಮಾಝ್ ನಿರ್ವಹಿಸಿರಿ." [ತ್ವಾಹಾ 14]"متفق عليه
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ."رواه مسلم