Hadith for the World
ನಮಾಝ್

Method of Prayer

10 hadiths

10 hadiths

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್‌ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು." (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ. ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ಇನ್ನೊಂದು ವರದಿಯಲ್ಲಿ: "ನಿಶ್ಚಯವಾಗಿಯೂ ಅಲ್ಲಾಹು ಶಾಂತಿಯಾಗಿದ್ದಾನೆ. ಆದ್ದರಿಂದ ನಿಮ್ಮಲ್ಲೊಬ್ಬರು ನಮಾಝಿನಲ್ಲಿ ಕುಳಿತುಕೊಳ್ಳುವಾಗ ಹೀಗೆ ಹೇಳಲಿ: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ). ಹೀಗೆ ಹೇಳಿದರೆ ಭೂಮ್ಯಾಕಾಶಗಳಲ್ಲಿರುವ ಅಲ್ಲಾಹನ ಎಲ್ಲಾ ನೀತಿವಂತ ದಾಸರಿಗೂ ಅದು ಅನ್ವಯಿಸುತ್ತದೆ. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು. (ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ನಂತರ ಅವರಿಗೆ ಇಷ್ಟವಾದ ಪ್ರಾರ್ಥನೆಯನ್ನು ಪ್ರಾರ್ಥಿಸಬಹುದು."متفق عليه
عن أبي هريرة رضي الله عنه مرفوعاً: «إذا أَمَّنَ الإمام فأمنوا، فإنه من وافق تأمينه تأمين الملائكة: غفر له ما تقدم من ذنبه».متفق عليه
عن علي بن أبي طالب رضي الله عنه أنَّ رسولَ الله صلى الله عليه وسلم كان إذا قامَ إلى الصلاة، قال: «وَجَّهتُ وجهي للذي فطر السماوات والأرض حنيفًا، وما أنا من المشركين، إنَّ صلاتي، ونُسُكي، ومَحياي، ومماتي لله رب العالمين، لا شريك له، وبذلك أُمِرتُ وأنا من المسلمين، اللهمَّ أنت المَلِك لا إله إلَّا أنت، أنت ربي، وأنا عبدك، ظلمتُ نفسي، واعترفتُ بذنبي، فاغفر لي ذنوبي جميعًا، إنه لا يغفر الذنوب إلا أنت، واهدني لأحسن الأخلاق لا يهدي لأحسنها إلا أنت، واصرف عني سيئَها لا يصرف عني سيئها إلا أنت، لبَّيْك وسَعْدَيْك، والخيرُ كله في يديك، والشر ليس إليك، أنا بك وإليك، تباركتَ وتعاليتَ، أستغفرك وأتوب إليك»، وإذا ركع، قال: «اللهمَّ لك ركعتُ، وبك آمنتُ، ولك أسلمتُ، خشع لك سمعي، وبصري، ومُخِّي، وعظمي، وعَصَبي»، وإذا رفع، قال: «اللهم ربنا لك الحمد مِلءَ السماوات، ومِلءَ الأرض، ومِلءَ ما بينهما، ومِلءَ ما شئتَ من شيء بعد»، وإذا سجد، قال: «اللهم لك سجدتُ، وبك آمنتُ، ولك أسلمتُ، سجد وجهي للذي خلقه، وصوَّره، وشقَّ سمعَه وبصرَه، تبارك الله أحسنُ الخالقين»، ثم يكون من آخر ما يقول بين التشهُّد والتسليم: «اللهم اغفر لي ما قدَّمتُ وما أخَّرتُ، وما أسررتُ وما أعلنتُ، وما أسرفتُ، وما أنت أعلم به مني، أنت المُقَدِّم وأنت المؤَخِّر، لا إله إلا أنت».رواه مسلم
عن الحكم قال: غَلَب على الكُوفة رجُل -قد سَمَّاه- زَمَنَ ابن الأشْعَث، فأمر أبَا عُبيدة بن عبد الله أن يصلِّي بالناس، فكان يصلِّي، فإذا رَفع رأسه من الرُّكوع قام قَدْر ما أقُول: اللَّهُم ربَّنا لك الحَمد، مِلْءَ السَّماوات ومِلْءَ الأرض، ومِلْءَ ما شِئت من شَيء بعد، أهْل الثَّناء والمَجد، لا مانع لما أعْطَيت، ولا مُعْطِي لما مَنعت، ولا يَنفع ذَا الجَدِّ مِنْك الجَدِّ. قال الحَكم: فَذَكَرت ذلك لعَبد الرَّحمن بن أبي ليلى فقال: سمعت البَرَاء بن عَازب يقول: «كانت صلاة رسول الله صلى الله عليه وسلم وركُوعه، وإذا رفع رأسه من الرُّكوع، وسُجوده، وما بَيْن السَّجدتين، قريبًا من السَّوَاء» قال شُعبة: فذَكَرْتُه لِعَمرو بن مُرَّة فقال: قد رأيت ابن أبي ليلى، فلم تَكن صلاته هكذا.رواه مسلم
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗೆ ಏಳು ಎಲುಬುಗಳ ಮೇಲೆ ಸಾಷ್ಟಾಂಗ ಮಾಡಲು ಆಜ್ಞಾಪಿಸಲಾಗಿದೆ. ಅವು: ಹಣೆ"—ಇದನ್ನು ಹೇಳುವಾಗ ಅವರು ತಮ್ಮ ಕೈಯಿಂದ ಮೂಗಿನ ಕಡೆಗೆ ತೋರಿಸಿದರು—"ಕೈಗಳು, ಮೊಣಕಾಲುಗಳು ಮತ್ತು ಪಾದಗಳ ತುದಿಗಳು. ಮತ್ತು ಬಟ್ಟೆ ಹಾಗೂ ಕೂದಲನ್ನು ಮಡಚಬಾರದೆಂದು ಕೂಡ ಆಜ್ಞಾಪಿಸಲಾಗಿದೆ."متفق عليه
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗೆ ಸನ್ಮಾರ್ಗವನ್ನು ತೋರಿಸು ಮತ್ತು ನನಗೆ ಜೀವನೋಪಾಯವನ್ನು ದಯಪಾಲಿಸು) ಎಂದು ಹೇಳುತ್ತಿದ್ದರು.رواه أبو داود والترمذي وابن ماجه وأحمد
عن أنس بن مالك رضي الله عنه أن النبي صلى الله عليه وسلم : كان لا يقنت إلا إذا دعا لقوم، أو دعا على قوم.رواه ابن خزيمة
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕಳ್ಳತನ ಮಾಡುವವರಲ್ಲಿ ಅತಿಕೆಟ್ಟವರು ನಮಾಝ್‌ನಲ್ಲಿ ಕಳ್ಳತನ ಮಾಡುವವರು." ಸಹಾಬಿಗಳು ಕೇಳಿದರು: "ನಮಾಝ್‌ನಲ್ಲಿ ಕಳ್ಳತನ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅದರ ರುಕೂ ಮತ್ತು ಸುಜೂದ್‌ಗಳನ್ನು ಪೂರ್ಣಗೊಳಿಸದಿರುವುದು."رواه ابن حبان
ಇಬ್ನ್ ಅಬೂ ಔಫಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರುಕೂನಿಂದ ಬೆನ್ನನ್ನು ಎತ್ತುವಾಗ, ಹೀಗೆ ಹೇಳುತ್ತಿದ್ದರು: "ಸಮಿಅಲ್ಲಾಹು ಲಿಮನ್ ಹಮಿದ, ಅಲ್ಲಾಹುಮ್ಮ ರಬ್ಬನಾ ಲಕಲ್ ಹಮ್ದ್, ಮಿಲ್‌ಅ ಸ್ಸಮಾವಾತಿ ವಮಿಲ್‌ಅಲ್ ಅರ್ದಿ, ವಮಿಲ್‌ಅ ಮಾ ಶಿಅ್‌ತ ಮಿನ್ ಶೈಇನ್ ಬಅ್‌ದ್."رواه مسلم
ಉಸ್ಮಾನ್ ಬಿನ್ ಅಬುಲ್ ಆಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಶೈತಾನನು ನನ್ನ ಮತ್ತು ನನ್ನ ನಮಾಝ್ ಹಾಗೂ ಕುರ್‌ಆನ್ ಪಠಣದ ನಡುವೆ ಬಂದು ಗಲಿಬಿಲಿಗೊಳಿಸುತ್ತಾನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅವನು ಖಿನ್‌ಝಬ್ ಎಂಬ ಹೆಸರಿನ ಶೈತಾನ್. ನಿಮಗೆ ಅವನ ಅನುಭವವಾದರೆ, ಅವನ ವಿರುದ್ಧ ಅಲ್ಲಾಹನಲ್ಲಿ ರಕ್ಷೆ ಬೇಡಿರಿ, ಮತ್ತು ನಿಮ್ಮ ಎಡಭಾಗಕ್ಕೆ ಮೂರು ಸಲ ಹಗುರವಾಗಿ ಉಗಿಯಿರಿ." ಅವರು ಹೇಳುತ್ತಾರೆ: "ನಾನು ಹಾಗೆ ಮಾಡಿದೆ. ಆಗ ಅಲ್ಲಾಹು ಅವನನ್ನು ನನ್ನಿಂದ ದೂರವಿರಿಸಿದನು."رواه مسلم