Hadith for the World
ನಮಾಝ್

Virtue and Rulings of Congregational Prayer

7 hadiths

7 hadiths

عن أبي هريرة رضي الله عنه مرفوعًا: «صلاة الرجل في جماعة تَضعُفُ على صلاته في بيته وفِي سُوقِه خمسا وعشرين ضِعفًا، وذلك: أَنَّه إِذَا تَوَضَّأ، فَأَحسَن الوُضُوء، ثمَّ خرج إلى المسجد لاَ يُخرِجُهُ إلاَّ الصلاة؛ لَم يَخْطُ خُطوَةً إِلاَّ رُفِعَت له بِها درجة، وَحُطَّ عَنهُ بها خطيئة، فإذا صلَّى لم تزل الملائكة تُصَلِّي عليه، ما دام في مُصَلاَّه: اللهُمَّ صَلِّ عليه، اللهم اغفِر له، اللهم ارْحَمه، ولا يزال في صلاة ما انتظر الصلاة».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್‌ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್‌ಗಿಂತ ಇಪ್ಪತ್ತಕ್ಕಿಂತಲೂ ಹೆಚ್ಚು ಪದವಿಗಳನ್ನು ಹೊಂದಿದೆ. ಅದೇಕೆಂದರೆ, ಅವರಲ್ಲೊಬ್ಬನು ಅತ್ಯುತ್ತಮ ರೀತಿಯಲ್ಲಿ ವುದೂ (ಅಂಗಸ್ನಾನ) ನಿರ್ವಹಿಸಿ, ನಂತರ ಮಸೀದಿಗೆ ಹೊರಡುತ್ತಾನೆ. ನಮಾಝಿನ ಹೊರತು ಇನ್ನೇನೂ ಅವನನ್ನು (ಹೊರಡುವಂತೆ) ಪ್ರಚೋದಿಸುವುದಿಲ್ಲ. ಅವನು ನಮಾಝನ್ನಲ್ಲದೆ ಇನ್ನೇನನ್ನೂ ಉದ್ದೇಶಿಸುವುದೂ ಇಲ್ಲ. ಹಾಗಾದರೆ, ಅವನು ಮಸೀದಿಯನ್ನು ಪ್ರವೇಶಿಸುವ ತನಕ ಅವನ ಒಂದೊಂದು ಹೆಜ್ಜೆಗೂ ಅವನಿಗೆ ಒಂದೊಂದು ಪದವಿಯನ್ನು ಏರಿಸಲಾಗುತ್ತದೆ ಮತ್ತು ಅವನಿಂದ ಒಂದೊಂದು ಪಾಪವನ್ನು ಅಳಿಸಲಾಗುತ್ತದೆ. ಅವನು ಮಸೀದಿಯನ್ನು ಪ್ರವೇಶಿಸಿದ ನಂತರ, ಎಲ್ಲಿಯವರೆಗೆ ನಮಾಝ್ ಅವನನ್ನು ಅಲ್ಲಿ ತಡೆದಿರಿಸುತ್ತದೋ ಅಲ್ಲಿಯ ತನಕ ಅವನು ನಮಾಝ್ ಮಾಡುತ್ತಿದ್ದಾನೆಂದೇ ಪರಿಗಣಿಸಲಾಗುತ್ತದೆ. ನಿಮ್ಮಲ್ಲೊಬ್ಬನು ನಮಾಝ್ ಮಾಡಿದ ಸ್ಥಳದಲ್ಲೇ ಕುಳಿತಿರುವ ತನಕ ದೇವದೂತರುಗಳು, “ಓ ಅಲ್ಲಾಹ್! ಇವನಿಗೆ ದಯೆ ತೋರು! ಓ ಅಲ್ಲಾಹ್! ಇವನನ್ನು ಕ್ಷಮಿಸು! ಓ ಅಲ್ಲಾಹ್! ಇವನ ಪಶ್ಚಾತ್ತಾಪವನ್ನು ಸ್ವೀಕರಿಸು!” ಎಂದು ಅವನಿಗಾಗಿ ಪ್ರಾರ್ಥಿಸುತ್ತಲೇ ಇರುತ್ತಾರೆ. ಅವನು ಇತರರಿಗೆ ತೊಂದರೆ ಕೊಡದಿರುವ ತನಕ, ಅಥವಾ ಅವನ ವುದೂ (ಅಂಗಸ್ನಾನ) ಅಸಿಂಧುವಾಗದಿರುವ ತನಕ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುತ್ತಾನೋ, ಅವನು ಬೆಳಿಗ್ಗೆ ಮತ್ತು ಸಂಜೆ ಮಸೀದಿಗೆ ಹೋಗುವಾಗಲೆಲ್ಲಾ ಅಲ್ಲಾಹು ಅವನಿಗೆ ಸ್ವರ್ಗದಲ್ಲಿ ಒಂದು ಔತಣವನ್ನು ಸಿದ್ಧಗೊಳಿಸುವನು."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮಲ್ಲೊಬ್ಬನು ಒಂಟಿಯಾಗಿ ಮಾಡುವ ನಮಾಝ್‌ಗಿಂತ ಜಮಾಅತ್ (ಸಂಘಟಿತ) ನಮಾಝ್ ಇಪ್ಪತ್ತೈದು ಪಟ್ಟು ಶ್ರೇಷ್ಠವಾಗಿದೆ. ರಾತ್ರಿಯ ಮಲಕ್‌ಗಳು (ದೇವದೂತರು) ಮತ್ತು ಹಗಲಿನ ಮಲಕ್‌ಗಳು ಫಜ್ರ್ ನಮಾಝ್‌ನಲ್ಲಿ ಒಟ್ಟುಗೂಡುತ್ತಾರೆ". ನಂತರ ಅಬೂ ಹುರೈರಾ ಹೇಳುತ್ತಿದ್ದರು: "ನೀವು ಇಚ್ಛಿಸಿದರೆ (ಇದಕ್ಕೆ ಪುರಾವೆಯಾಗಿ ಈ ವಚನವನ್ನು) ಓದಿರಿ: "ಖಂಡಿತವಾಗಿಯೂ ಫಜ್ರ್‌ನ ಪಾರಾಯಣವು (ಕುರ್‌ಆನ್) ಸಾಕ್ಷಿವಹಿಸಲ್ಪಡುತ್ತದೆ." [ಸೂರಃ ಅಲ್-ಇಸ್ರಾ: 78].متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಮಸೀದಿಗೆ ಬರಲು ದಾರಿ ತೋರಿಸುವವರು ಯಾರೂ ಇಲ್ಲ." ನಂತರ ಮನೆಯಲ್ಲೇ ನಮಾಝ್ ನಿರ್ವಹಿಸಲು ರಿಯಾಯಿತಿ ನೀಡಬೇಕೆಂದು ಅವರು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿನಂತಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ರಿಯಾಯಿತಿ ನೀಡಿದರು. ಆ ವ್ಯಕ್ತಿ ಹೊರಡುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರನ್ನು ಕರೆದು ಕೇಳಿದರು: "ತಮಗೆ ನಮಾಝ್‌ಗೆ ಕರೆಯುವ ಅಝಾನ್ ಕೇಳುತ್ತದೆಯೇ?" ಆ ವ್ಯಕ್ತಿ ಹೌದು ಎಂದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಾಗಾದರೆ ನೀವು ಅದಕ್ಕೆ ಉತ್ತರ ನೀಡಬೇಕು."رواه مسلم
عن عبد الرحمن بن أبي عمرة قال: دخل عثمان بن عفان المسجد بعد صلاة المغرب، فقعد وحده، فقعدتُ إليه فقال: يا ابن أخي، سمعت رسول الله صلى الله عليه وسلم يقول: «من صلى العشاء في جماعة فكأنما قام نصف الليل، ومن صلى الصبح في جماعة فكأنما صلى الليل كله».رواه مسلم
عن أبي موسى قال: قال النبي صلى الله عليه وسلم: «أعظم الناس أجرًا في الصلاة أبعدهم فأبعدهم ممشى، والذي ينتظر الصلاة حتى يصليها مع الإمام أعظم أجرًا من الذي يصلي ثم ينام».متفق عليه