Hadith for the World
Topic

ಫಿಕ್ಹ್ ಮತ್ತು ಉಸುಲ್-ಎ-ಫಿಖ್

288 hadiths

288 hadiths

ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿ ನಿದ್ರೆಯಿಂದ ಎದ್ದರೆ, ಹಲ್ಲುಜ್ಜುವ ಕಡ್ಡಿಯಿಂದ ತಮ್ಮ ಬಾಯಿಯನ್ನು ಸ್ವಚ್ಛಗೊಳಿಸುತ್ತಿದ್ದರು."متفق عليه
عن عبد الله بن زيد بن عاصم المازني رضي الله عنه قال: (شُكِيَ إلى النبيِّ صلى الله عليه وسلم الرَّجلُ يُخَيَّلُ إِليه أنَّه يَجِد الشَّيء في الصَّلاة، فقال: لا ينصرف حتَّى يَسمعَ صَوتًا، أو يَجِد رِيحًا).متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸತ್ಯವಿಶ್ವಾಸಿ ಪುರುಷನು ಸತ್ಯವಿಶ್ವಾಸಿ ಸ್ತ್ರೀಯನ್ನು ದ್ವೇಷಿಸಬಾರದು. ಅವಳ ಒಂದು ಗುಣವನ್ನು ಅವನು ಇಷ್ಟಪಡದಿದ್ದರೆ, ಅವಳ ಇನ್ನೊಂದು ಗುಣವು ಅವನಿಗೆ ಇಷ್ಟವಾಗಬಹುದು." ಅಥವಾ ಅವರು ಹೀಗೆ ಹೇಳಿದರು: "ಅವಳ ಬೇರೊಂದು ಗುಣವು."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಮಾಮರು ತಲೆ ಎತ್ತುವುದಕ್ಕಿಂತ ಮೊದಲು ತಲೆ ಎತ್ತುವವರು, ಅಲ್ಲಾಹು ಅವರ ತಲೆಯನ್ನು ಕತ್ತೆಯ ತಲೆಯಾಗಿ, ಅಥವಾ ಅವರ ರೂಪವನ್ನು ಕತ್ತೆಯ ರೂಪವಾಗಿ ಮಾರ್ಪಡಿಸುವನು ಎಂದು ಭಯಪಡುವುದಿಲ್ಲವೇ?"متفق عليه
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಆಹಾರವು ಸಿದ್ಧವಾಗಿರುವಾಗ ಮತ್ತು ಮಲಮೂತ್ರಗಳನ್ನು ಅದುಮಿಕೊಂಡು ನಮಾಝ್ ನಿರ್ವಹಿಸಬಾರದು."رواه مسلم
ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್‌ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು." (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ. ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ಇನ್ನೊಂದು ವರದಿಯಲ್ಲಿ: "ನಿಶ್ಚಯವಾಗಿಯೂ ಅಲ್ಲಾಹು ಶಾಂತಿಯಾಗಿದ್ದಾನೆ. ಆದ್ದರಿಂದ ನಿಮ್ಮಲ್ಲೊಬ್ಬರು ನಮಾಝಿನಲ್ಲಿ ಕುಳಿತುಕೊಳ್ಳುವಾಗ ಹೀಗೆ ಹೇಳಲಿ: ಅತ್ತಹಿಯ್ಯಾತು ಲಿಲ್ಲಾಹಿ, ವಸ್ಸಲವಾತು, ವತ್ತಯ್ಯಿಬಾತು, ಅಸ್ಸಲಾಮು ಅಲೈಕ ಅಯ್ಯುಹನ್ನಬಿಯ್ಯು ವರಹ್ಮತುಲ್ಲಾಹಿ ವಬರಕಾತುಹು, ಅಸ್ಸಲಾಮು ಅಲೈನಾ ವಅಲಾ ಇಬಾದಿಲ್ಲಾಹಿ ಸ್ಸಾಲಿಹೀನ್. (ಅಭಿವಂದನೆಗಳು, ನಮಾಝ್‌ಗಳು ಮತ್ತು ಅತ್ಯುತ್ತಮವಾದುದೆಲ್ಲವೂ ಅಲ್ಲಾಹನಿಗೆ ಮೀಸಲು. ಓ ಪ್ರವಾದಿಯವರೇ! ನಿಮ್ಮ ಮೇಲೆ ಅಲ್ಲಾಹನ ಶಾಂತಿ, ಕರುಣೆ ಮತ್ತು ಸಮೃದ್ಧಿಯಿರಲಿ. ನಮ್ಮ ಮೇಲೆ ಮತ್ತು ಅಲ್ಲಾಹನ ನೀತಿವಂತ ದಾಸರೆಲ್ಲರ ಮೇಲೆ ಶಾಂತಿಯಿರಲಿ). ಹೀಗೆ ಹೇಳಿದರೆ ಭೂಮ್ಯಾಕಾಶಗಳಲ್ಲಿರುವ ಅಲ್ಲಾಹನ ಎಲ್ಲಾ ನೀತಿವಂತ ದಾಸರಿಗೂ ಅದು ಅನ್ವಯಿಸುತ್ತದೆ. ಅಶ್‌ಹದು ಅನ್ ಲಾ ಇಲಾಹ ಇಲ್ಲಲ್ಲಾಹು ವ ಅಶ್‌ಹದು ಅನ್ನ ಮುಹಮ್ಮದನ್ ಅಬ್ದುಹೂ ವರಸೂಲುಹು. (ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ದೇವರಿಲ್ಲ ಎಂದು ನಾನು ಸಾಕ್ಷ್ಯವಹಿಸುತ್ತೇನೆ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷ್ಯ ವಹಿಸುತ್ತೇನೆ). ನಂತರ ಅವರಿಗೆ ಇಷ್ಟವಾದ ಪ್ರಾರ್ಥನೆಯನ್ನು ಪ್ರಾರ್ಥಿಸಬಹುದು."متفق عليه
عن أبي موسى الأشعري رضي الله عنه قال: خَسَفَت الشمس على زمان رسول الله صلى الله عليه وسلم . فقام فَزِعًا، ويخشى أن تكون الساعة، حتى أتى المسجد، فقام، فصلى بأطول قيام وسجود، ما رأيته يفعله في صلاته قطُّ، ثم قال: إن هذه الآيات التي يُرْسِلُهَا الله عز وجل : لا تكون لموت أحد ولا لحياته، ولكن الله يُرْسِلُهَا يُخَوِّفُ بها عباده، فإذا رأيتم منها شيئا فَافْزَعُوا إلى ذكر الله و دُعَائِهِ وَاسْتِغْفَارِهِ.متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಾ ಹೇಳುತ್ತಿದ್ದರು: "ಓ ಅಲ್ಲಾಹ್! ನಾನು ನಿನ್ನಲ್ಲಿ ಸಮಾಧಿಯ ಶಿಕ್ಷೆಯಿಂದ, ನರಕ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಪರೀಕ್ಷೆಯಿಂದ ರಕ್ಷೆ ಬೇಡುತ್ತೇನೆ." ಮುಸ್ಲಿಂರ ಇನ್ನೊಂದು ವರದಿಯಲ್ಲಿ: "ನಿಮ್ಮಲ್ಲೊಬ್ಬನು ಕೊನೆಯ ತಶಹ್ಹುದ್ ಪಠಿಸಿದ ನಂತರ ನಾಲ್ಕು ವಿಷಯಗಳಿಂದ ಅಲ್ಲಾಹನಲ್ಲಿ ರಕ್ಷೆ ಬೇಡಲಿ. ನರಕ ಶಿಕ್ಷೆಯಿಂದ, ಸಮಾಧಿಯ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಕೆಡುಕಿನಿಂದ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು. ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶುಕ್ರವಾರ ಇಮಾಮರು ಪ್ರವಚನ ನಿರ್ವಹಿಸುತ್ತಿರುವಾಗ, ನೀನು ನಿನ್ನ ಬಳಿಯಿರುವವನಿಗೆ "ಮೌನವಾಗಿರು" ಎಂದು ಹೇಳಿದರೆ ನೀನು ಅನಗತ್ಯವಾದುದನ್ನು ಮಾಡಿದೆ."متفق عليه
عن عبد الله بن عُمَر رضي الله عنه قال: «اسْتَأْذَنَ الْعَبَّاسُ بن عَبْدِ الْمُطَّلِب رسول الله صلى الله عليه وسلم : أن يبيت بمكة ليالي مِنى، من أجل سِقَايَتِه فأذن له».متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜನಾಝಾದ (ಅಂತ್ಯಕ್ರಿಯೆಯ) ವಿಷಯದಲ್ಲಿ ಆತುರ ಮಾಡಿರಿ. ಏಕೆಂದರೆ, (ಆ ಮೃತ ವ್ಯಕ್ತಿ) ಸಜ್ಜನನಾಗಿದ್ದರೆ, ನೀವು ಅದನ್ನು ಒಳಿತಿನ ಕಡೆಗೆ ಬೇಗನೆ ಕಳುಹಿಸುತ್ತಿದ್ದೀರಿ. ಒಂದು ವೇಳೆ ಅದು ಅದಲ್ಲದಿದ್ದರೆ (ಕೆಟ್ಟವನಾಗಿದ್ದರೆ), ನೀವು ಅದನ್ನು ನಿಮ್ಮ ಹೆಗಲುಗಳಿಂದ ಕೆಡುಕನ್ನು (ಬೇಗನೆ) ಇಳಿಸುತ್ತಿದ್ದೀರಿ".متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಐದು ಕಾರ್ಯಗಳು ಫಿತ್ರ (ಸಹಜ ಮನೋಧರ್ಮ) ದ ಭಾಗವಾಗಿವೆ: ಸುನ್ನತಿ ಮಾಡುವುದು, ಗುಹ್ಯಭಾಗದ ರೋಮವನ್ನು ಬೋಳಿಸುವುದು, ಮೀಸೆ ಕಿರಿದಾಗಿಸುವುದು, ಉಗುರುಗಳನ್ನು ಕತ್ತರಿಸುವುದು ಮತ್ತು ಕಂಕುಳದ ರೋಮವನ್ನು ಕೀಳುವುದು."متفق عليه
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯವನ್ನು ಪ್ರವೇಶಿಸುವಾಗ,ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್ ಖುಬುಸಿ ವಲ್ ಖಬಾಇಸ್ (ಓ ಅಲ್ಲಾಹ್, ಗಂಡು ಶೈತಾನರಿಂದ ಮತ್ತು ಹೆಣ್ಣು ಶೈತಾನರಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಿದ್ದರು."متفق عليه
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು (ಇಬ್ನ್ ಅಬ್ಬಾಸ್) ಅತಾಅ್ ಇಬ್ನ್ ಅಬೀ ರಬಾಹ್ ರಿಗೆ ಹೇಳಿದರು: "ನಾನು ನಿನಗೆ ಸ್ವರ್ಗವಾಸಿಗಳಲ್ಲಿ ಸೇರಿದ ಒಬ್ಬ ಮಹಿಳೆಯನ್ನು ತೋರಿಸಲೇ?" ನಾನು ಹೇಳಿದೆನು: "ಖಂಡಿತವಾಗಿ (ತೋರಿಸಿ)". ಅವರು ಹೇಳಿದರು: "ಈ ಕಪ್ಪು ಮಹಿಳೆ. ಆಕೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: 'ನಾನು ಮೂರ್ಛೆ ರೋಗದಿಂದ (ಅಥವಾ ಅಪಸ್ಮಾರದಿಂದ) ಬಳಲುತ್ತಿದ್ದೇನೆ ಮತ್ತು (ಆಗ) ನನ್ನ ದೇಹವು ಅನಾವರಣಗೊಳ್ಳುತ್ತದೆ. ಆದ್ದರಿಂದ, ನನಗಾಗಿ ಅಲ್ಲಾಹನಲ್ಲಿ ಪ್ರಾರ್ಥಿಸಿರಿ'. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: 'ನೀನು ಇಚ್ಛಿಸಿದರೆ ತಾಳ್ಮೆಯಿಂದಿರು. ನಿನಗೆ ಸ್ವರ್ಗವಿದೆ. ಇನ್ನು ನೀನು ಇಚ್ಛಿಸಿದರೆ ಅಲ್ಲಾಹು ನಿನ್ನನ್ನು ಗುಣಪಡಿಸುವಂತೆ ನಾನು ಪ್ರಾರ್ಥಿಸುವೆನು'. ಆಕೆ ಹೇಳಿದರು: 'ನಾನು ತಾಳ್ಮೆಯಿಂದಿರುತ್ತೇನೆ'. ನಂತರ ಆಕೆ ಹೇಳಿದರು: 'ಆದರೆ ನಾನು (ಮೂರ್ಛೆ ಹೋದಾಗ) ಅನಾವರಣಗೊಳ್ಳುತ್ತೇನೆ, ಆದ್ದರಿಂದ ನಾನು ಅನಾವರಣಗೊಳ್ಳದಂತೆ ಅಲ್ಲಾಹನಲ್ಲಿ ಪ್ರಾರ್ಥಿಸಿರಿ'. ಆಗ ಅವರು ಆಕೆಗಾಗಿ ಪ್ರಾರ್ಥಿಸಿದರು".متفق عليه
ಉಮ್ಮು ಅತಿಯ್ಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಜನಾಝಾಗಳನ್ನು (ಮೃತದೇಹಗಳನ್ನು) ಹಿಂಬಾಲಿಸುವುದನ್ನು ನಮಗೆ (ಮಹಿಳೆಯರಿಗೆ) ನಿಷೇಧಿಸಲಾಗಿದೆ. ಆದರೆ ನಮ್ಮ ಮೇಲೆ ಅದನ್ನು ಕಟ್ಟುನಿಟ್ಟಾಗಿ ಹೇರಲಾಗಿರಲಿಲ್ಲ".متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ. ಅವನು ತನ್ನ ಕೈಗಳನ್ನು ತೊಳೆದಾಗ, ಅವನ ಕೈಗಳಿಂದ ಮಾಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕೈಗಳಿಂದ ಹೊರಬರುತ್ತದೆ. ಅವನು ತನ್ನ ಕಾಲುಗಳನ್ನು ತೊಳೆದಾಗ, ಅವನ ಕಾಲುಗಳಿಂದ ನಡೆದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕಾಲುಗಳಿಂದ ಹೊರಬರುತ್ತದೆ. ಎಷ್ಟರವರೆಗೆಂದರೆ ಅವನು ಪಾಪಗಳಿಂದ ಶುದ್ಧನಾಗಿ ಹೊರಬರುವವರೆಗೆ."رواه مسلم
ಜಾಬಿರ್ ಬಿನ್ ಅಬ್ದಿಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಕುರ್‌ಆನ್‌ನ ಒಂದು ಸೂರಃವನ್ನು (ಅಧ್ಯಾಯವನ್ನು) ಕಲಿಸುವಂತೆ ಪ್ರತಿಯೊಂದು ವಿಷಯದಲ್ಲೂ ಇಸ್ತಿಖಾರ (ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ) ಮಾಡುವುದನ್ನು ಕಲಿಸುತ್ತಿದ್ದರು. ಅವರು ಹೇಳುತ್ತಿದ್ದರು: 'ನಿಮ್ಮಲ್ಲಿ ಯಾರಿಗಾದರೂ ಒಂದು ವಿಷಯವನ್ನು ಮಾಡಲು ಉದ್ದೇಶವಿದ್ದರೆ, ಅವನು ಫರ್ದ್ (ಕಡ್ಡಾಯ) ಅಲ್ಲದ ಎರಡು ರಕ್‌ಅತ್ ನಮಾಝ್ ಮಾಡಲಿ. ನಂತರ ಹೀಗೆ ಹೇಳಲಿ: 'ಅಲ್ಲಾಹುಮ್ಮ ಇನ್ನೀ ಅಸ್ತಖೀರುಕ ಬಿ ಇಲ್ಮಿಕ, ವ ಅಸ್ತಕ್ದಿರುಕ ಬಿ ಕುದ್ರತಿಕ, ವ ಅಸ್ಅಲುಕ ಮಿನ್ ಫದ್ಲಿಕಲ್ ಅಝೀಮ್, ಫ ಇನ್ನಕ ತಕ್ದಿರು ವಲಾ ಅಕ್ದಿರು, ವ ತಅ್‌ಲಮು ವಲಾ ಅಅ್‌ಲಮು, ವ ಅಂತ ಅಲ್ಲಾಮುಲ್ ಗುಯೂಬ್. ಅಲ್ಲಾಹುಮ್ಮ ಇನ್ ಕುಂತ ತಅ್‌ಲಮು ಅನ್ನ ಹಾಧಲ್ ಅಮ್ರ (ಇಲ್ಲಿ ತನ್ನ ಅಗತ್ಯವನ್ನು ಹೇಳಿಕೊಳ್ಳಲಿ) ಖೈರುನ್ ಲೀ ಫೀ ದೀನೀ, ವ ಮಆಶೀ, ವ ಆಖಿಬತಿ ಅಮ್‌ರೀ (ಅಥವಾ ಅವರು ಹೀಗೆ ಹೇಳಿದರು: ಆಜಿಲಿ ಅಮ್‌ರೀ ವ ಆಜಿಲಿಹಿ), ಫಕ್ದುರ್‌ಹು ಲೀ ವ ಯಸ್ಸಿರ್‌ಹು ಲೀ ಸುಮ್ಮ ಬಾರಿಕ್ ಲೀ ಫೀಹಿ. ವ ಇನ್ ಕುಂತ ತಅ್‌ಲಮು ಅನ್ನ ಹಾಧಲ್ ಅಮ್ರ ಶರ್ರುನ್ ಲೀ ಫೀ ದೀನೀ ವ ಮಆಶೀ ವ ಆಖಿಬತಿ ಅಮ್‌ರೀ (ಅಥವಾ ಅವರು ಹೀಗೆ ಹೇಳಿದರು: ಫೀ ಆಜಿಲಿ ಅಮ್‌ರೀ ವ ಆಜಿಲಿಹಿ), ಫಸ್‌ರಿಫ್‌ಹು ಅನ್ನೀ ವಸ್‌ರಿಫ್‌ನೀ ಅನ್‌ಹು, ವಕ್ದುರ್ ಲಿಯಲ್ ಖೈರ ಹೈಸು ಕಾನ, ಸುಮ್ಮ ಅರ್ದಿನೀ ಬಿಹಿ.' (ಅರ್ಥ: 'ಓ ಅಲ್ಲಾಹ್, ನಿನ್ನ ಜ್ಞಾನದ ಮೂಲಕ ನಾನು ನಿನ್ನಿಂದ ಮಾರ್ಗದರ್ಶನವನ್ನು ಕೋರುತ್ತೇನೆ, ನಿನ್ನ ಸಾಮರ್ಥ್ಯದ ಮೂಲಕ ನಾನು ನಿನ್ನಿಂದ ಶಕ್ತಿಯನ್ನು ಕೋರುತ್ತೇನೆ ಮತ್ತು ನಿನ್ನ ಮಹಾ ಅನುಗ್ರಹವನ್ನು ಬೇಡುತ್ತೇನೆ. ನಿಸ್ಸಂದೇಹವಾಗಿ, ನೀನು ಸಾಮರ್ಥ್ಯವುಳ್ಳವನು ಮತ್ತು ನಾನು ಸಾಮರ್ಥ್ಯಹೀನನು. ನೀನು ತಿಳಿದಿರುವವನು ಮತ್ತು ನಾನು ತಿಳಿದಿಲ್ಲದವನು, ಮತ್ತು ನೀನು ಎಲ್ಲಾ ಅಗೋಚರ ವಿಷಯಗಳನ್ನು ಬಲ್ಲವನು. ಓ ಅಲ್ಲಾಹ್‌, ಈ ವಿಷಯವು (ಇಲ್ಲಿ ತನ್ನ ಅಗತ್ಯವನ್ನು ಹೇಳಿಕೊಳ್ಳಲಿ) ನನ್ನ ಧರ್ಮಕ್ಕೆ, ನನ್ನ ಜೀವನೋಪಾಯಕ್ಕೆ ಮತ್ತು ನನ್ನ ಅಂತಿಮ ಫಲಿತಾಂಶಕ್ಕೆ (ಅಥವಾ ಅವರು ಹೀಗೆ ಹೇಳಿದರು: ನನ್ನ ಪ್ರಸ್ತುತ ಮತ್ತು ಭವಿಷ್ಯದ ವಿಷಯಗಳಿಗೆ) ಒಳ್ಳೆಯದೆಂದು ನಿನಗೆ ತಿಳಿದಿದ್ದರೆ, ಅದನ್ನು ನನಗಾಗಿ ನಿರ್ಣಯಿಸು, ಅದನ್ನು ನನಗೆ ಸುಲಭಗೊಳಿಸು ಮತ್ತು ನಂತರ ಅದರಲ್ಲಿ ನನಗೆ ಸಮೃದ್ಧಿಯನ್ನು ನೀಡು. ಮತ್ತು ಈ ವಿಷಯವು ನನ್ನ ಧರ್ಮಕ್ಕೆ, ನನ್ನ ಜೀವನೋಪಾಯಕ್ಕೆ ಮತ್ತು ನನ್ನ ಅಂತಿಮ ಫಲಿತಾಂಶಕ್ಕೆ (ಅಥವಾ ಅವರು ಹೀಗೆ ಹೇಳಿದರು: ನನ್ನ ಪ್ರಸ್ತುತ ಮತ್ತು ಭವಿಷ್ಯದ ವಿಷಯಗಳಿಗೆ) ಕೆಟ್ಟದ್ದೆಂದು ನಿನಗೆ ತಿಳಿದಿದ್ದರೆ, ಅದನ್ನು ನನ್ನಿಂದ ದೂರ ಮಾಡು ಮತ್ತು ನನ್ನನ್ನು ಅದರಿಂದ ದೂರ ಮಾಡು. ಒಳಿತು ಎಲ್ಲೇ ಇದ್ದರೂ ಅದನ್ನು ನನಗಾಗಿ ನಿರ್ಣಯಿಸು, ಮತ್ತು ನಂತರ ಅದರಿಂದ ನನ್ನನ್ನು ತೃಪ್ತಿಪಡಿಸು.')" ಅವರು (ಜಾಬಿರ್) ಹೇಳಿದರು: "ಮತ್ತು ಅವನು ತನ್ನ ಅಗತ್ಯವನ್ನು ಹೆಸರಿಸಬೇಕು."رواه البخاري
عن أنس بن مالك رضي الله عنه قال: مرَّ النَّبي - صلى الله عليه وسلم - بامرَأَة تَبكِي عِند قَبرٍ، فقال: «اتَّقِي الله واصْبِري» فقالت: إليك عَنِّي؛ فَإِنَّك لم تُصَب بِمُصِيبَتِي ولم تَعرِفه، فقِيل لها: إِنَّه النَّبِي - صلى الله عليه وسلم - فأتت باب النبي - صلى الله عليه وسلم - فلم تجد عنده بوَّابِين، فقالت: لم أَعرِفكَ، فقال: «إِنَّما الصَّبرُ عِند الصَّدمَةِ الأُولَى». وفي رواية: «تَبكِي على صبِّي لها».متفق عليه
عن أبي سعيد الخدري رضي الله عنه مرفوعاً: «إِنَّ مِنْ أَشَرِّ النَّاسِ عِندَ الله مَنزِلَةً يَومَ القِيَامَةِ الرَّجُلَ يُفضِي إِلَى المَرْأَةِ وَتُفْضِي إِلَيه، ثُمَّ يَنشُرُ سِرَّهَا».رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ. ತಮ್ಮ ಪ್ರವಾದಿಗಳ ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಂಡ ಜನರನ್ನು ಅಲ್ಲಾಹು ಶಪಿಸಿದ್ದಾನೆ."رواه أحمد
عن أبي هريرة رضي الله عنه مرفوعًا: «إِذَا لَبِسْتُم، وَإِذَا تَوَضَّأتُم، فَابْدَأُوا بَأَيَامِنُكُم».رواه أبو داود واللفظ له، والترمذي وابن ماجه وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು. ಜನರಿಗೆ ನಮಾಝ್ ನಿರ್ವಹಿಸಲು ಆಜ್ಞಾಪಿಸಿ, ನಂತರ ಒಬ್ಬರನ್ನು ಅವರಿಗೆ ಇಮಾಂ ಆಗಿ ನೇಮಿಸಿ, ನಂತರ ಸೌದೆಗಳ ಕಟ್ಟುಗಳೊಂದಿಗೆ ಕೆಲವು ಜನರನ್ನು ಕರೆದುಕೊಂಡು ಹೋಗಿ, ನಮಾಝ್‌ಗೆ ಬರದವರ ಮನೆಗಳನ್ನು ಸುಟ್ಟುಬಿಡಲು ನಾನು ಯೋಚಿಸಿದ್ದೆ."متفق عليه
عن أبي هريرة رضي الله عنه قال قال رسول الله صلى الله عليه وسلم : ((إن أمتي يُدْعَون يوم القيامة غُرًّا مُحَجَلِّين من آثار الوُضُوء)). فمن اسْتَطَاع منكم أن يُطِيل غُرَّتَه فَليَفعل. وفي لفظ لمسلم: ((رأَيت أبا هريرة يتوضَّأ، فغسل وجهه ويديه حتى كاد يبلغ المنكبين، ثم غسل رجليه حتى رَفَع إلى السَّاقين، ثم قال: سمعت رسول الله صلى الله عليه وسلم يقول: إنَّ أمتي يُدْعَون يوم القيامة غُرًّا مُحَجَّلِين من آثار الوُضُوء)) فمن استطاع منكم أن يطيل غُرَّتَه وتَحْجِيلَه فَليَفعَل. وفي لفظ لمسلم: سمعت خليلي صلى الله عليه وسلم يقول: ((تَبْلُغ الحِليَة من المؤمن حيث يبلغ الوُضُوء)).الرواية الأولى: متفق عليه. الرواية الثانية: رواها مسلم. الرواية الثالثة: رواها مسلم