Hadith for the World
Topic

ಫಿಕ್ಹ್ ಮತ್ತು ಉಸುಲ್-ಎ-ಫಿಖ್

288 hadiths

288 hadiths

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಾಸರು ಬೆಳಗನ್ನು ಪ್ರವೇಶಿಸುವ ಪ್ರತಿ ದಿನವೂ ಎರಡು ದೇವದೂತರುಗಳು ಇಳಿದು ಬರುತ್ತಾರೆ. ಆಗ ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಖರ್ಚು ಮಾಡುವವರಿಗೆ ಬದಲಿಯನ್ನು ನೀಡು. ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು."متفق عليه
عن أبي هريرة رضي الله عنه مرفوعًا: «صلاة الرجل في جماعة تَضعُفُ على صلاته في بيته وفِي سُوقِه خمسا وعشرين ضِعفًا، وذلك: أَنَّه إِذَا تَوَضَّأ، فَأَحسَن الوُضُوء، ثمَّ خرج إلى المسجد لاَ يُخرِجُهُ إلاَّ الصلاة؛ لَم يَخْطُ خُطوَةً إِلاَّ رُفِعَت له بِها درجة، وَحُطَّ عَنهُ بها خطيئة، فإذا صلَّى لم تزل الملائكة تُصَلِّي عليه، ما دام في مُصَلاَّه: اللهُمَّ صَلِّ عليه، اللهم اغفِر له، اللهم ارْحَمه، ولا يزال في صلاة ما انتظر الصلاة».متفق عليه
ಝೈದ್ ಬಿನ್ ಖಾಲಿದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಲು ಒಬ್ಬ ಯೋಧನನ್ನು ಸಿದ್ಧಗೊಳಿಸುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ. ಯಾರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವನು ಬಿಟ್ಟು ಹೋದ ಅವನ ಆಶ್ರಿತರನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೋ ಅವನು ಯುದ್ಧ ಮಾಡಿದವನಿಗೆ ಸಮಾನನಾಗುತ್ತಾನೆ."متفق عليه
ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್‌ನ ಎರಡು (ಐಚ್ಛಿಕ) ರಕ್‌ಅತ್‌ಗಳನ್ನು ನಿರ್ವಹಿಸಲು ತೋರುತ್ತಿದ್ದ ಕಾಳಜಿಯನ್ನು ಬೇರೆ ಯಾವುದೇ ಐಚ್ಛಿಕ ನಮಾಝ್‌ಗಳಲ್ಲಿ ತೋರುತ್ತಿರಲಿಲ್ಲ".متفق عليه
عن أبي شريح خويلد بن عمرو الخزاعي و أبي هريرة رضي الله عنهما عن رسول الله صلى الله عليه وسلم قال: «اللَّهُمَّ إِنِّي أُحَرِّجُ حَقَّ الضَعِيفَين: اليَتِيم والمَرْأَة».حديث أبي شريح رواه النسائي. وحديث أبي هريرة رواه ابن ماجه وأحمد
ಮುಆದ್ ಬಿನ್ ಜಬಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕೈ ಹಿಡಿದು ಹೇಳಿದರು: "ಓ ಮುಆದ್, ಅಲ್ಲಾಹನಾಣೆ! ಖಂಡಿತವಾಗಿಯೂ ನಾನು ನಿನ್ನನ್ನು ಪ್ರೀತಿಸುತ್ತೇನೆ." ನಂತರ ಅವರು ಹೇಳಿದರು: "ಓ ಮುಆದ್, ನಾನು ನಿನಗೆ ಉಪದೇಶ ಮಾಡುತ್ತಿದ್ದೇನೆ. ಎಲ್ಲಾ ನಮಾಝ್‌ಗಳ ನಂತರ ಹೀಗೆ ಹೇಳುವುದನ್ನು ಬಿಟ್ಟುಬಿಡಬೇಡ: ಓ ಅಲ್ಲಾಹ್! ನಿನ್ನನ್ನು ಸ್ಮರಿಸಲು, ನಿನಗೆ ಕೃತಜ್ಞತೆ ಸಲ್ಲಿಸಲು ಮತ್ತು ಉತ್ತಮವಾದ ರೀತಿಯಲ್ಲಿ ನಿನ್ನ ಆರಾಧನೆ ಮಾಡಲು ನನಗೆ ಸಹಾಯ ಮಾಡು."رواه أبو داود والنسائي وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರಿಗೆ ಅಶುದ್ಧಿಯುಂಟಾದರೆ ಅವರು ವುದೂ ನಿರ್ವಹಿಸುವ ತನಕ ಅಲ್ಲಾಹು ಅವರ ನಮಾಝನ್ನು ಸ್ವೀಕರಿಸುವುದಿಲ್ಲ."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಹೇಳಿದನು: ಆದಮರ ಪುತ್ರ ಮಾಡುವ ಎಲ್ಲಾ ಕರ್ಮಗಳು ಅವನಿಗೇ ಆಗಿವೆ; ಉಪವಾಸದ ಹೊರತು. ಅದು ನನಗಾಗಿದೆ ಮತ್ತು ನಾನೇ ಅದಕ್ಕೆ ಪ್ರತಿಫಲವನ್ನು ನೀಡುತ್ತೇನೆ. ಉಪವಾಸವು ಗುರಾಣಿಯಾಗಿದೆ. ನಿಮ್ಮೆಲ್ಲೊಬ್ಬನು ಉಪವಾಸದಲ್ಲಿರುವಾಗ ಅಶ್ಲೀಲವಾಗಿ ವರ್ತಿಸದಿರಲಿ ಅಥವಾ ಉಚ್ಚ ಸ್ವರದಲ್ಲಿ ಮಾತನಾಡದಿರಲಿ. ಯಾರಾದರೂ ಅವನನ್ನು ದೂಷಿಸಿದರೆ ಅಥವಾ ಅವನೊಂದಿಗೆ ಜಗಳವಾಡಿದರೆ, ಅವನು "ನಾನು ಉಪವಾಸದಲ್ಲಿದ್ದೇನೆ" ಎಂದು ಹೇಳಲಿ. ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಉಪವಾಸಿಗನ ಬಾಯಿಯ ದುರ್ಗಂಧವು ಅಲ್ಲಾಹನ ಬಳಿ ಕಸ್ತೂರಿಗಿಂತಲೂ ಹೆಚ್ಚು ಪರಿಮಳವುಳ್ಳದ್ದಾಗಿದೆ. ಉಪವಾಸಿಗನಿಗೆ ಎರಡು ಸಂತೋಷಗಳಿದ್ದು ಅವನು ಆ ಸಂತೋಷಗಳನ್ನು ಆಸ್ವಾದಿಸುತ್ತಾನೆ: ಒಂದು: ಉಪವಾಸ ಪಾರಣೆ ಮಾಡುವಾಗ ದೊರೆಯುವ ಸಂತೋಷ, ಇನ್ನೊಂದು ಉಪವಾಸದ ಮೂಲಕ ಅವನ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವಾಗ ದೊರೆಯುವ ಸಂತೋಷ."متفق عليه
عن عبد الله بن عمرو بن العاص رضي الله عنهما أن رسول الله صلى الله عليه وسلم قال: «يَغْفِرُ الله للشَّهيد كُلَّ شيءٍ إلا الدَّين». وفي رواية له: «القَتْل في سَبِيل الله يُكَفِّر كلَّ شيءٍ إلا الدَّين».رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”رواه مسلم
عن أبي هريرة رضي الله عنه : أن رجلًا أتى النبي صلى الله عليه وسلم يَتَقَاضَاهُ فَأغْلَظَ له، فَهَمَّ به أصحابه، فقال رسول الله صلى الله عليه وسلم : «دَعُوه، فإن لِصَاحب الحَقِّ مَقَالا» ثم قال: «أعْطُوهُ سِنًّا مِثْل سِنِّهِ» قالوا: يا رسول الله، لا نَجِدُ إلا أمْثَلَ مِنْ سِنِّهِ، قال: «أعْطُوه، فإن خَيْرَكم أحْسَنُكُم قَضَاء».متفق عليه
ಶುರೈಹ್ ಬಿನ್ ಹಾನಿಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾನು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಗೆ ಪ್ರವೇಶಿಸಿದಾಗ ಮೊತ್ತಮೊದಲು ಏನು ಮಾಡುತ್ತಿದ್ದರು?" ಅವರು ಹೇಳಿದರು: "ಮಿಸ್ವಾಕ್ (ಹಲ್ಲುಗಳನ್ನು ಸ್ವಚ್ಛಗೊಳಿಸುವ ಕಡ್ಡಿ) ನಿಂದ ಹಲ್ಲು ಸ್ವಚ್ಛಗೊಳಿಸುತ್ತಿದ್ದರು."رواه مسلم
عن ابن مسعود رضي الله عنه قال: قال رسول الله صلى الله عليه وسلم : «أيُّكم مالُ وارثِه أحَبُّ إليه من مالَه؟» قالوا: يا رسول الله، ما منَّا أحد إلا مَالُه أحَبُّ إليه. قال: «فإن مالَه ما قدَّم، ومالُ وارثِه ما أخَّر».رواه البخاري
عن أبي مسعود البدري رضي الله عنه قَال: قَالَ رَسُولُ اللَّه -صَلّى اللهُ عَلَيْهِ وسَلَّم-: «حُوسِب رجُل ممن كان قَبْلَكُمْ، فلم يُوجد له من الخَيْر شيء، إلا أنه كان يُخَالط الناس وكان مُوسِراً، وكان يأمُر غِلْمَانَه أن يَتَجَاوَزُوا عن المُعْسِر، قال الله عز وجل : نحن أحَقُّ بذلك منه؛ تَجَاوزُوا عنه».رواه مسلم
ಮಅದಾನ್ ಬಿನ್ ಅಬೂ ತಲ್ಹ ಯಅಮರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸ್ವತಂತ್ರಗೊಳಿಸಿದ ಗುಲಾಮನಾದ ಸೌಬಾನ್‌ರನ್ನು ಭೇಟಿಯಾಗಿ ಹೇಳಿದೆ: ನನಗೆ ಒಂದು ಕರ್ಮವನ್ನು ತಿಳಿಸಿಕೊಡಿ. ನಾನು ಅದನ್ನು ಮಾಡಿದರೆ ಅದರ ಮೂಲಕ ಅಲ್ಲಾಹು ನನ್ನನ್ನು ಸ್ವರ್ಗಕ್ಕೆ ಪ್ರವೇಶಗೊಳಿಸಬೇಕು. ಅಥವಾ ನಾನು ಹೀಗೆ ಹೇಳಿದೆ: ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮವನ್ನು ತಿಳಿಸಿಕೊಡಿ. ಅವರು ಮೌನವಾದರು. ನಾನು ಪುನಃ ಕೇಳಿದೆ. ಆದರೆ ಅವರು ಮೌನವಾದರು. ನಾನು ಮೂರನೇ ಬಾರಿ ಕೇಳಿದಾಗ ಅವರು ಹೇಳಿದರು: ನಾನು ಇದೇ ವಿಷಯವನ್ನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದ್ದೆ. ಆಗ ಅವರು ಹೀಗೆ ಉತ್ತರಿಸಿದರು: "ಅಲ್ಲಾಹನಿಗೆ ಅತ್ಯಧಿಕವಾಗಿ ಸುಜೂದ್ ಮಾಡಿರಿ. ಏಕೆಂದರೆ ನೀವು ಅಲ್ಲಾಹನಿಗಾಗಿ ಒಂದು ಸುಜೂದ್ ಮಾಡಿದರೆ, ಅಲ್ಲಾಹು ಅದರಿಂದ ನಿಮಗೆ ಒಂದುಸ್ಥಾನಯನ್ನು ಏರಿಸುವನು ಮತ್ತು ನಿಮ್ಮಿಂದ ಒಂದು ಪಾಪವನ್ನು ಅಳಿಸುವನು." ಮಅದಾನ್ ಹೇಳಿದರು: ನಂತರ ನಾನು ಅಬೂ ದರ್ದಾಅ್‌ರನ್ನು ಭೇಟಿಯಾಗಿ ಇದೇ ಪ್ರಶ್ನೆಯನ್ನು ಕೇಳಿದೆ. ಅವರು ಕೂಡ ಸೌಬಾನ್ ಹೇಳಿದಂತೆಯೇ ಹೇಳಿದರು.رواه مسلم
عن أبي هريرة رضي الله عنه قال: قال رسول الله صلى الله عليه وسلم : «إذا قَام أحَدُكُم من الليل، فَاسْتَعْجَمَ القرآن على لِسَانه، فلم يَدْرِ ما يقول، فَلْيَضْطَجِع».رواه مسلم
ಸಹ್ಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಸ್ವರ್ಗದಲ್ಲಿ 'ರಯ್ಯಾನ್' ಎಂಬ ಒಂದು ಬಾಗಿಲಿದೆ. ಉಪವಾಸ ಆಚರಿಸಿದವರು ಪುನರುತ್ಥಾನ ದಿನದಂದು ಅದರ ಮೂಲಕ ಪ್ರವೇಶಿಸುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. (ಆ ದಿನ) 'ಉಪವಾಸಿಗರು ಎಲ್ಲಿ?' ಎಂದು ಕರೆಯಲಾಗುವುದು. ಆಗ ಅವರು ಎದ್ದು ನಿಲ್ಲುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. ಅವರೆಲ್ಲರೂ ಪ್ರವೇಶಿಸಿದ ನಂತರ ಅದನ್ನು ಮುಚ್ಚಲಾಗುವುದು. ನಂತರ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ".متفق عليه
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಮದಾನಿನ ಕೊನೆಯ ಹತ್ತು ದಿನಗಳಲ್ಲಿ ಇತರ ದಿನಗಳಲ್ಲಿ ಪರಿಶ್ರಮಿಸದಷ್ಟು ಪರಿಶ್ರಮಿಸುತ್ತಿದ್ದರು."رواه مسلم
عن ابن مسعود رضي الله عنه قال: قال رسول الله صلى الله عليه وسلم : «لا حَسَدَ إلا في اثنتين: رجل آتاه الله مالا، فسَلَّطَه على هَلَكَتِهِ في الحَقِّ، ورجل آتاه الله حِكْمَة، فهو يقضي بها ويُعَلِّمَها». وعن ابن عمر رضي الله عنهما ، عن النبي صلى الله عليه وسلم قال: «لا حسد إلا في اثنتين: رجل آتاه الله القرآن، فهو يقوم به آناء الليل وآناء النهار، ورجل آتاه الله مالا، فهو ينفقه آناء الليل وآناء النهار».حديث ابن مسعود رضي الله عنه: متفق عليه. حديث ابن عمر رضي الله عنه: متفق عليه
عن أبي هريرة ـ رضي الله عنه ـ قال: قال رسول الله صلى الله عليه وسلم : «لا يَلِجُ النارَ رجُل بَكى من خشية الله حتى يَعود اللَّبنُ في الضَّرْع، ولا يَجتمع غُبَارٌ في سبيل الله وَدُخَانُ جهنم».رواه الترمذي والنسائي وأحمد
ಝುಬೈರ್ ಇಬ್ನುಲ್ ಅವ್ವಾಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನು ತನ್ನ ಹಗ್ಗವನ್ನು ತೆಗೆದುಕೊಂಡು, ನಂತರ ತನ್ನ ಬೆನ್ನ ಮೇಲೆ ಸೌದೆಯ ಹೊರೆಯೊಂದಿಗೆ ಬಂದು, ನಂತರ ಅದನ್ನು ಮಾರಿ, ಮತ್ತು ಅದರ ಮೂಲಕ ಅಲ್ಲಾಹು ಅವನ ಮುಖವನ್ನು (ಭಿಕ್ಷಾಟನೆಯ ಅವಮಾನದಿಂದ) ಕಾಪಾಡುವುದು, ಅವನು ಜನರಲ್ಲಿ ಬೇಡುವುದಕ್ಕಿಂತ ಉತ್ತಮವಾಗಿದೆ; ಅವರು (ಜನರು) ಅವನಿಗೆ ಕೊಡಲಿ ಅಥವಾ ಕೊಡದಿರಲಿ".رواه البخاري
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸಂಬಂಧಿಕರು ಸಂಬಂಧ ಜೋಡಿಸಿದರೆ ಮಾತ್ರ ಸಂಬಂಧ ಜೋಡಿಸುವವನು ಕುಟುಂಬ ಸಂಬಂಧವನ್ನು ಕಾಪಾಡುವವನಲ್ಲ. ಬದಲಿಗೆ, ಸಂಬಂಧಿಕರು ಸಂಬಂಧವನ್ನು ಕಡಿದಾಗ ಅವರೊಡನೆ ಸಂಬಂಧ ಜೋಡಿಸುವವನೇ ಕುಟುಂಬ ಸಂಬಂಧವನ್ನು ಕಾಪಾಡುವವನು.”رواه البخاري
عن أبي هريرة رضي الله عنه قال: قال رسول الله صلى الله عليه وسلم : «مَا يَجِدُ الشَّهيد من مَسِّ القتل إلا كما يَجِدُ أَحَدُكُمْ من مَسِّ القَرْصَةِ».رواه الترمذي وابن ماجه والنسائي والدارمي وأحمد
عن أبي هريرة رضي الله عنه قال: قيل: يا رسول الله، ما يعدل الجهاد في سبيل الله؟ قال: «لا تستطيعونه» فأعادوا عليه مرتين أو ثلاثًا كل ذلك يقول: «لا تستطيعونه»! ثم قال: «مثل المجاهد في سبيل الله كمثل الصائم القائم القانت بآيات الله لا يَفْتُرُ من صيام، ولا صلاة، حتى يرجع المجاهد في سبيل الله». وفي رواية البخاري: أن رجلاً قال: يا رسول الله، دلني على عمل يعْدِلُ الجهاد؟ قال: «لا أجده» ثم قال: «هل تستطيع إذا خرج المجاهد أن تدخل مسجدك فتقوم ولا تفتر، وتصوم ولا تفطر»؟ فقال: «ومن يستطيع ذلك؟!»متفق عليه، والرواية الثانية للبخاري