KN
Topic
ಫಿಕ್ಹ್ ಮತ್ತು ಉಸುಲ್-ಎ-ಫಿಖ್
288 hadiths
Jurisprudence of Acts of Worship
231
Jurisprudence of Transactions
17
Family Jurisprudence
24
Spiritual and Physical Therapy
9
Foods and Drinks
5
Crimes
1
Prescribed Punishments
4
Principles of Islamic Jurisprudence
4
288 hadiths
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿ ನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಬೂ ಸಈದ್, ಯಾರು ಅಲ್ಲಾಹುವನ್ನು ಪರಿಪಾಲಕನೆಂದು, ಇಸ್ಲಾಮನ್ನು ಧರ್ಮವೆಂದು, ಮತ್ತು ಮುಹಮ್ಮದ್ ರನ್ನು ಪ್ರವಾದಿಯೆಂದು (ಒಪ್ಪಿಕೊಂಡು) ತೃಪ್ತರಾಗುತ್ತಾರೋ, ಅವರಿಗೆ ಸ್ವರ್ಗವು ಖಚಿತವಾಯಿತು". ಇದನ್ನು ಕೇಳಿ ಅಬೂ ಸಈದ್ಗೆ ಆಶ್ಚರ್ಯವಾಯಿತು. ಅವರು ಹೇಳಿದರು: "ಓ ಅಲ್ಲಾಹುವಿನ ಸಂದೇಶವಾಹಕರೇ, ಇದನ್ನು ನನಗೆ ಮತ್ತೊಮ್ಮೆ ಹೇಳಿ". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹಾಗೆಯೇ ಮಾಡಿದರು (ಮತ್ತೊಮ್ಮೆ ಹೇಳಿದರು). ನಂತರ ಹೇಳಿದರು: "ಮತ್ತು ಇನ್ನೊಂದು (ವಿಷಯ) ಇದೆ. ಅದರ ಮೂಲಕ ದಾಸನನ್ನು ಸ್ವರ್ಗದಲ್ಲಿ ನೂರು ಹಂತಗಳಷ್ಟು ಎತ್ತರಿಸಲಾಗುತ್ತದೆ. ಪ್ರತಿಯೆರಡು ಹಂತಗಳ ನಡುವಿನ ಅಂತರವು ಆಕಾಶ ಮತ್ತು ಭೂಮಿಯ ನಡುವಿನ ಅಂತರದಷ್ಟಿರುತ್ತದೆ". ಅಬೂ ಸಈದ್ ಕೇಳಿದರು: "ಅದು ಯಾವುದು, ಓ ಅಲ್ಲಾಹುವಿನ ಸಂದೇಶವಾಹಕರೇ?". ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು (ಶ್ರಮಿಸುವುದು/ಹೋರಾಡುವುದು), ಅಲ್ಲಾಹುವಿನ ಮಾರ್ಗದಲ್ಲಿ ಜಿಹಾದ್ ಮಾಡುವುದು".
رواه مسلم
ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಒಂದು ಸಲ ತಮ್ಮ ಸಾಲಗಾರನನ್ನು ಹುಡುಕುತ್ತಾ ಹೋದರು. ಆದರೆ ಆತ ತಪ್ಪಿಸಿಕೊಳ್ಳುತ್ತಿದ್ದ. ನಂತರ ಆತ ಇವರ ಕಣ್ಣಿಗೆ ಬಿದ್ದ. ಆತ ಹೇಳಿದ: "ನಾನು ಕಷ್ಟದಲ್ಲಿದ್ದೇನೆ." ಅಬೂ ಕತಾದ ಕೇಳಿದರು: "ಅಲ್ಲಾಹನಾಣೆಗೂ?" ಆತ ಉತ್ತರಿಸಿದ: "ಅಲ್ಲಾಹನಾಣೆಗೂ." ಅಬೂ ಕತಾದ ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಪುನರುತ್ಥಾನ ದಿನದ ಕಷ್ಟಗಳಿಂದ ಅಲ್ಲಾಹು ತನ್ನನ್ನು ರಕ್ಷಿಸಬೇಕೆಂದು ಬಯಸುತ್ತಾನೋ, ಅವನು ಕಷ್ಟದಲ್ಲಿರುವವನಿಗೆ ಸಹಾಯ ಮಾಡಲಿ ಅಥವಾ ಅವನ ಸಾಲವನ್ನು ಮನ್ನಾ ಮಾಡಲಿ."
رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದರ್ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
متفق عليه
وعن سالم بن عبد الله بن عمر بن الخطاب رضي الله عنهم عن أبيه: أن رسول الله صلى الله عليه وسلم قال: « نِعْمَ الرَّجُلُ عبد الله، لو كان يُصلِّي من الليل» قال سالم: فكان عبد الله بعد ذلك لا يَنامُ من الليل إلا قليلًا.
متفق عليه
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಅಲ್ಲಾಹನ ಮಾರ್ಗದಲ್ಲಿ ಒಂದು ದಿನ ಉಪವಾಸವನ್ನು ಆಚರಿಸುತ್ತಾನೋ, ಅಲ್ಲಾಹು ಅವನ ಮುಖವನ್ನು ನರಕದಿಂದ ಎಪ್ಪತ್ತು ಶರತ್ಕಾಲಗಳಷ್ಟು ದೂರ ಮಾಡುತ್ತಾನೆ."
متفق عليه
ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜನರು ಉಪವಾಸವನ್ನು ಬೇಗನೆ ತೊರೆಯುವವರೆಗೆ ಅವರು ಒಳಿತಿನಲ್ಲಿರುತ್ತಾರೆ."
متفق عليه
ಝೈದ್ ಬಿನ್ ಸಾಬಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆ ಸಹರಿ ಸೇವಿಸಿದೆವು. ನಂತರ ಅವರು ನಮಾಝ್ ಮಾಡಲು ನಿಂತರು. ನಾನು ಕೇಳಿದೆ: 'ಅದಾನ್ ಮತ್ತು ಸಹರಿಯ ನಡುವೆ ಎಷ್ಟು ಸಮಯವಿತ್ತು?' ಅವರು ಹೇಳಿದರು: 'ಸುಮಾರು ಐವತ್ತು ಆಯತ್ಗಳಷ್ಟು.'"
متفق عليه
ಸತ್ಯವಿಶ್ವಾಸಿಗಳ ಮಾತೆ ಮತ್ತು ಪ್ರವಾದಿಪತ್ನಿ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಮದಾನ್ ತಿಂಗಳ ಕೊನೆಯ ಹತ್ತು ದಿನಗಳಲ್ಲಿ ಅಲ್ಲಾಹು ಮರಣವನ್ನು ನೀಡುವವರೆಗೆ ಈತಿಕಾಫ್ (ಏಕಾಂತ ಆರಾಧನೆ) ಮಾಡುತ್ತಿದ್ದರು. ಅವರ ನಂತರ ಅವರ ಪತ್ನಿಯರು ಈತಿಕಾಫ್ ಕೂರುತ್ತಿದ್ದರು."
متفق عليه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನೀವು ಸಹರಿ ಸೇವಿಸಿರಿ, ಏಕೆಂದರೆ ಸಹರಿಯಲ್ಲಿ ಸಮೃದ್ಧಿ (ಬರಕತ್) ಇದೆ."
متفق عليه
ಜಾಬಿರ್ ಇಬ್ನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಪ್ರಯಾಣದಲ್ಲಿದ್ದರು. ಆಗ ಅವರು ಜನರು ಗುಂಪುಗೂಡಿ ಒಬ್ಬ ವ್ಯಕ್ತಿಗೆ ನೆರಳು ನೀಡುತ್ತಿರುವುದನ್ನು ಕಂಡರು. ಅವರು (ಪ್ರವಾದಿ) ಕೇಳಿದರು: "ಇದೇನು?". ಜನರು ಹೇಳಿದರು: "ಆತ ಉಪವಾಸದಲ್ಲಿದ್ದಾನೆ". ಆಗ ಅವರು (ಪ್ರವಾದಿ) ಹೇಳಿದರು: "ಪ್ರಯಾಣದ ಸಂದರ್ಭದಲ್ಲಿ ಉಪವಾಸ ಆಚರಿಸುವುದು ಪುಣ್ಯಕಾರ್ಯವಲ್ಲ". ಇಮಾಮ್ ಮುಸ್ಲಿಂ ರವರ ಇನ್ನೊಂದು ವರದಿಯಲ್ಲಿ ಹೀಗಿದೆ: "ಅಲ್ಲಾಹು ನಿಮಗೆ ನೀಡಿದ ರಿಯಾಯಿತಿಯನ್ನು ಸ್ವೀಕರಿಸಿಕೊಳ್ಳಿರಿ".
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನೀವು ರಮದಾನ್ಗಿಂತ ಒಂದು ಅಥವಾ ಎರಡು ದಿನಗಳ ಮೊದಲು ಉಪವಾಸ ಆಚರಿಸಬಾರದು. ಆದರೆ ವಾಡಿಕೆಯ ಉಪವಾಸವನ್ನು ಆಚರಿಸುವವನ ಹೊರತು. ಅವನು ಅದನ್ನು ಆಚರಿಸಬಹುದು."
متفق عليه
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಿತ್ರ್ ಝಕಾತನ್ನು ಒಂದು ಸಾಅ್ ಖರ್ಜೂರ ಅಥವಾ ಒಂದು ಸಾಅ್ ಬಾರ್ಲಿಯಂತೆ ಗುಲಾಮರು, ಸ್ವತಂತ್ರರು, ಪುರುಷರು, ಸ್ತ್ರೀಯರು, ಕಿರಿಯರು, ಹಿರಿಯರು ಮುಂತಾದ ಎಲ್ಲಾ ಮುಸ್ಲಿಮರ ಮೇಲೆ ಕಡ್ಡಾಯಗೊಳಿಸಿದರು. ಜನರು ನಮಾಝ್ಗೆ ಹೊರಡುವ ಮೊದಲು ಅದನ್ನು ನೀಡಬೇಕೆಂದು ಅವರು ಆದೇಶಿಸಿದರು."
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ."
متفق عليه
عن عائشة وأم سلمة رضي الله عنهما «أن رسول الله صلى الله عليه وسلم كان يُدْرِكُهُ الفجر وهو جُنٌبٌ من أهله، ثم يغتسل ويصوم ».
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ಉಪವಾಸದಲ್ಲಿದ್ದಾಗ ಮರೆತು ತಿಂದರೆ ಅಥವಾ ಕುಡಿದರೆ, ಅವನು ತನ್ನ ಉಪವಾಸವನ್ನು ಪೂರ್ಣಗೊಳಿಸಲಿ. ಏಕೆಂದರೆ ಅಲ್ಲಾಹನೇ ಅವನಿಗೆ ಆಹಾರ ಮತ್ತು ಪಾನೀಯವನ್ನು ನೀಡಿದ್ದಾನೆ."
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್ ನಿರ್ವಹಿಸುವುದು."
متفق عليه
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ರಮದಾನ್ ತಿಂಗಳ ಕೊನೆಯ ಹತ್ತು ರಾತ್ರಿಗಳಲ್ಲಿರುವ ಬೆಸ ರಾತ್ರಿಗಳಲ್ಲಿ ಲೈಲತುಲ್ ಖದ್ರ್ ಅನ್ನು ಹುಡುಕಿರಿ."
متفق عليه
عن عمر بن الخطاب رضي الله عنه قال: قال رسول الله صلى الله عليه وسلم : «إذا أقبل الليل من هَهُنا، وأَدْبَرَالنهار من ههنا، فقد أفطر الصائم».
متفق عليه
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಅದನ್ನು (ಚಂದ್ರನನ್ನು) ಕಂಡರೆ ಉಪವಾಸವನ್ನು ಪ್ರಾರಂಭಿಸಿರಿ, ಮತ್ತು ನೀವು ಅದನ್ನು ಕಂಡರೆ ಉಪವಾಸವನ್ನು ನಿಲ್ಲಿಸಿರಿ. ಮೋಡಗಳ ಕಾರಣ ನಿಮಗೆ ಅದನ್ನು ಕಾಣಲಾಗದಿದ್ದರೆ ಮೂವತ್ತು ದಿನಗಳನ್ನು ಪೂರ್ಣಗೊಳಿಸಿರಿ."
متفق عليه
ಅಬೂ ಹೌರಾ ಸಅದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹಸನ್ ಬಿನ್ ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ನೀವು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಕಂಠಪಾಠ ಮಾಡಿದ್ದೀರಿ?" ಅವರು ಹೇಳಿದರು: "ನಾನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಮಾತನ್ನು ಕಂಠಪಾಠ ಮಾಡಿದ್ದೇನೆ: ಸಂಶಯವಿರುವ ವಿಷಯಗಳನ್ನು ಬಿಟ್ಟು ಸಂಶಯವಿಲ್ಲದ ವಿಷಯಗಳನ್ನು ಸ್ವೀಕರಿಸಿರಿ. ಏಕೆಂದರೆ, ಸತ್ಯವು ನಿಶ್ಚಿಂತೆಯಾಗಿದೆ ಮತ್ತು ಸುಳ್ಳು ಸಂಶಯವಾಗಿದೆ."
رواه الترمذي والنسائي وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್ಗಿಂತ ಇಪ್ಪತ್ತಕ್ಕಿಂತಲೂ ಹೆಚ್ಚು ಪದವಿಗಳನ್ನು ಹೊಂದಿದೆ. ಅದೇಕೆಂದರೆ, ಅವರಲ್ಲೊಬ್ಬನು ಅತ್ಯುತ್ತಮ ರೀತಿಯಲ್ಲಿ ವುದೂ (ಅಂಗಸ್ನಾನ) ನಿರ್ವಹಿಸಿ, ನಂತರ ಮಸೀದಿಗೆ ಹೊರಡುತ್ತಾನೆ. ನಮಾಝಿನ ಹೊರತು ಇನ್ನೇನೂ ಅವನನ್ನು (ಹೊರಡುವಂತೆ) ಪ್ರಚೋದಿಸುವುದಿಲ್ಲ. ಅವನು ನಮಾಝನ್ನಲ್ಲದೆ ಇನ್ನೇನನ್ನೂ ಉದ್ದೇಶಿಸುವುದೂ ಇಲ್ಲ. ಹಾಗಾದರೆ, ಅವನು ಮಸೀದಿಯನ್ನು ಪ್ರವೇಶಿಸುವ ತನಕ ಅವನ ಒಂದೊಂದು ಹೆಜ್ಜೆಗೂ ಅವನಿಗೆ ಒಂದೊಂದು ಪದವಿಯನ್ನು ಏರಿಸಲಾಗುತ್ತದೆ ಮತ್ತು ಅವನಿಂದ ಒಂದೊಂದು ಪಾಪವನ್ನು ಅಳಿಸಲಾಗುತ್ತದೆ. ಅವನು ಮಸೀದಿಯನ್ನು ಪ್ರವೇಶಿಸಿದ ನಂತರ, ಎಲ್ಲಿಯವರೆಗೆ ನಮಾಝ್ ಅವನನ್ನು ಅಲ್ಲಿ ತಡೆದಿರಿಸುತ್ತದೋ ಅಲ್ಲಿಯ ತನಕ ಅವನು ನಮಾಝ್ ಮಾಡುತ್ತಿದ್ದಾನೆಂದೇ ಪರಿಗಣಿಸಲಾಗುತ್ತದೆ. ನಿಮ್ಮಲ್ಲೊಬ್ಬನು ನಮಾಝ್ ಮಾಡಿದ ಸ್ಥಳದಲ್ಲೇ ಕುಳಿತಿರುವ ತನಕ ದೇವದೂತರುಗಳು, “ಓ ಅಲ್ಲಾಹ್! ಇವನಿಗೆ ದಯೆ ತೋರು! ಓ ಅಲ್ಲಾಹ್! ಇವನನ್ನು ಕ್ಷಮಿಸು! ಓ ಅಲ್ಲಾಹ್! ಇವನ ಪಶ್ಚಾತ್ತಾಪವನ್ನು ಸ್ವೀಕರಿಸು!” ಎಂದು ಅವನಿಗಾಗಿ ಪ್ರಾರ್ಥಿಸುತ್ತಲೇ ಇರುತ್ತಾರೆ. ಅವನು ಇತರರಿಗೆ ತೊಂದರೆ ಕೊಡದಿರುವ ತನಕ, ಅಥವಾ ಅವನ ವುದೂ (ಅಂಗಸ್ನಾನ) ಅಸಿಂಧುವಾಗದಿರುವ ತನಕ."
متفق عليه
عن أبي هريرة رضي الله عنه قال: سمعت رسول الله صلى الله عليه وسلم يقول: «ما نهيتكم عنه فاجتنبوه، وما أمرتكم به فأْتُوا منه ما استطعتم، فإنما أَهلَكَ الذين من قبلكم كثرةُ مسائلهم واختلافهم على أنبيائهم».
متفق عليه
عن أبي ذر رضي الله عنه قال: قال النبي صلى الله عليه وسلم :«عُرِضَتْ عَلَيَّ أعمالُ أُمتي، حَسَنُهَا وسَيِّئُهَا فَوَجَدتُ في مَحَاسِنِ أَعْمَالِهَا الأَذَى يُمَاطُ عَنِ الطَّرِيقِ، ووَجَدتُ في مَسَاوِئِ أَعْمَالِهَا النُّخَاعَةُ تَكُونُ في المَسْجِدِ لا تُدْفَنُ».
رواه مسلم
Previous page
Page 4 of 12
Next page