Hadith for the World
Topic

ಸದ್ಗುಣಗಳು ಮತ್ತು ನಡವಳಿಕೆಗಳು

288 hadiths

288 hadiths

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಅಲ್ಲಾಹು ಮೊದಲಿನವರು ಮತ್ತು ನಂತರದವರನ್ನು (ಎಲ್ಲರನ್ನೂ) ಒಟ್ಟುಗೂಡಿಸಿದಾಗ, ಪ್ರತಿಯೊಬ್ಬ ವಿಶ್ವಾಸದ್ರೋಹಿಗಾಗಿ ಒಂದು ಪ್ರತ್ಯೇಕ ಧ್ವಜ ಏರಿಸಲಾಗುವುದು. ಆಗ ಹೇಳಲಾಗುವುದು: 'ಇದು ಇಂಥಿಂತವನ ಮಗನ ವಿಶ್ವಾಸದ್ರೋಹ'."متفق عليه
ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.متفق عليه
ಸಹ್ಲ್ ಬಿನ್ ಸಅದ್ ಸಾಇದೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಮಾರ್ಗದಲ್ಲಿ ಒಂದು ದಿನ 'ರಿಬಾತ್' ಮಾಡುವುದು (ಗಡಿಯಲ್ಲಿ ಕಾವಲು ಕಾಯುವುದು) ಇಹಲೋಕ ಮತ್ತು ಅದರಲ್ಲಿರುವ ಎಲ್ಲದಕ್ಕಿಂತ ಉತ್ತಮವಾಗಿದೆ. ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನಿಗೆ ದೊರೆಯುವ ಚಾಟಿಯಷ್ಟು (ಅಥವಾ ಚಾಟಿ ಇಡುವಷ್ಟು) ಸ್ಥಳವು ಇಹಲೋಕ ಮತ್ತು ಅದರಲ್ಲಿರುವ ಎಲ್ಲದಕ್ಕಿಂತ ಉತ್ತಮವಾಗಿದೆ. ಅಲ್ಲಾಹನ ಮಾರ್ಗದಲ್ಲಿ ದಾಸನು ಮಾಡುವ ಒಂದು ಸಂಜೆಯ ನಡೆಯುವಿಕೆ (ರೌಹ) ಅಥವಾ ಒಂದು ಮುಂಜಾನೆಯ ನಡೆಯುವಿಕೆ (ಗದ್ವಾ) ಇಹಲೋಕ ಮತ್ತು ಅದರಲ್ಲಿರುವ ಎಲ್ಲದಕ್ಕಿಂತ ಉತ್ತಮವಾಗಿದೆ".متفق عليه
ಅಬ್ದುರ್‍ರಹ್ಮಾನ್ ಬಿನ್ ಅಬೂ ಲೈಲಾ ರಿಂದ ವರದಿ. ಒಮ್ಮೆ ಅವರು ಹುದೈಫರ ಜೊತೆಯಲ್ಲಿದ್ದರು. ಆಗ ಅವರು ನೀರು ಕೇಳಿದರು ಮತ್ತು ಒಬ್ಬ ಮಜೂಸಿ ಅವರಿಗೆ ನೀರು ತಂದು ಕೊಟ್ಟನು. ಆತ ಲೋಟವನ್ನು ಅವರ ಕೈಯಲ್ಲಿಟ್ಟಾಗ, ಅವರು ಅದನ್ನು ಆತನ ಕಡೆಗೆ ಎಸೆದು ಹೇಳಿದರು: ನಾನು ಇದನ್ನು ಬಳಸದಂತೆ ಒಂದು ಅಥವಾ ಎರಡು ಬಾರಿ ಅವನಿಗೆ ನಿಷೇಧಿಸದಿರುತ್ತಿದ್ದರೆ—ನಾನು ಹೀಗೆ ಮಾಡುತ್ತಿರಲಿಲ್ಲ ಎಂದು ಹೇಳುವುದು ಅವರ ಇಂಗಿತವಾಗಿರಬಹುದು—ಏಕೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ರೇಷ್ಮೆ ಅಥವಾ ಬ್ರೊಕೇಡು (ಜರತಾರಿ ರೇಷ್ಮೆ) ಗಳನ್ನು ಧರಿಸಬೇಡಿ. ಬಂಗಾರ ಅಥವಾ ಬೆಳ್ಳಿಯ ಪಾತ್ರೆಗಳಲ್ಲಿ ಕುಡಿಯಬೇಡಿ ಮತ್ತು ಅವುಗಳ ಬಟ್ಟಲುಗಳಲ್ಲಿ ಆಹಾರ ಸೇವಿಸಬೇಡಿ. ಏಕೆಂದರೆ, ಇವು ಇಹಲೋಕದಲ್ಲಿ ಅವರಿಗೆ ಮತ್ತು ಪರಲೋಕದಲ್ಲಿ ನಮಗೆ ಇರುವುದಾಗಿವೆ."متفق عليه
ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಹಲೋಕದಲ್ಲಿ ರೇಷ್ಮೆ ಧರಿಸಿದವನು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ."متفق عليه
عن أبي واقد الحارث بن عوف رضي الله عنه أنَّ رسول الله صلى الله عليه وسلم بينما هو جالس في المسجد، والناس معه، إذ أقبل ثلاثَةُ نَفَرٍ، فأقبل اثنان إلى رسول الله، صلى الله عليه وسلم وذهب واحد، فوقفا على رسول الله صلى الله عليه وسلم ، فأما أحدهما فرأى فُرْجَةً في الْحَلْقَةِ فجلس فيها، وأما الآخر فجلس خلفهم، وأما الثالث فأدْبَر ذاهبٍا، فلما فرغ رسول الله صلى الله عليه وسلم قال: «ألا أُخْبِرُكُم عن النَّفَرِ الثلاثة: أما أحدهم فأَوَى إلى الله فآوَاهُ الله إليه، وأما الآخر فاسْتَحْيا فاسْتَحْيَا الله منه، وأما الآخر، فأعْرَضَ، فأعرضَ اللهُ عنه».متفق عليه
عن عبد الله بن مسعود رضي الله عنه قال: كان نبي الله صلى الله عليه وسلم إذا أمسى قال: «أمسينا وأمسى الملك لله، والحمد لله، لا إله إلا الله وحده لا شريك له» قال الراوي: أَرَاهُ قال فِيهِنَّ: «له الملك وله الحمد وهو على كل شيء قدير، ربِّ أسألك خير ما في هذه الليلة وخير ما بعدها، وأعوذ بك من شر ما في هذه الليلة وشر ما بعدها، رب أعوذ بك من الكسل، وسُوءِ الكِبَرِ، رب أعوذ بك من عذاب في النار، وعذاب في القبر»، وإذا أصبح قال ذلك أيضا «أصبحنا وأصبح الملك لله».رواه مسلم
ಮುಗೀರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಂದು ಯಾತ್ರೆಯಲ್ಲಿ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆ. ಆಗ ನಾನು ಅವರ ಪಾದರಕ್ಷೆಗಳನ್ನು ಕಳಚಲು ಮುಂದಾದೆ. ಆಗ ಅವರು ಹೇಳಿದರು: "ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ." ನಂತರ ಅವರು ಅವುಗಳ ಮೇಲೆ ಸವರಿದರು.متفق عليه
ಮಿಕ್‌ದಾಮ್ ಬಿನ್ ಮಅದೀಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”رواه أبو داود والترمذي والنسائي في الكبرى وأحمد
عن أنس بن مالك رضي الله عنه أنَّ رَجُلاً كَانَ عِند النَبِيَّ صلى الله عليه وسلم فَمَرَّ رَجُلٌ بِهِ، فقال: يا رسول الله، أنِّي لَأُحِبُّ هَذَا، فَقَال لَهُ النَبِيُّ صلى الله عليه وسلم : «أَأَعْلَمْتَهُ؟» قال: لا. قال: «أَعْلِمْهُ»، فَلَحِقَهُ، فقال: إِنِّي أُحِبُّك فِي الله، فقال: أّحَبَّك الَّذِي أَحْبَبْتَنِي لَهُ.رواه أبو داود والنسائي في الكبرى وأحمد
عن أبي موسى الأشعري رضي الله عنه قَالَ: قالَ رسول اللَّه -صَلّى اللهُ عَلَيْهِ وسَلَّم-: «إِنَّ مِنْ إِجْلاَلِ الله -تَعَالَى-: إِكْرَامَ ذِي الشَّيْبَةِ المُسْلِمِ، وَحَامِلِ القُرْآنِ غَيرِ الغَالِي فِيه، وَالجَافِي عَنْه، وَإِكْرَام ذِي السُّلْطَان المُقْسِط».رواه أبو داود
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದಾರೆ: "ಒಬ್ಬ ವ್ಯಕ್ತಿ ಮನೆಯನ್ನು ಪ್ರವೇಶಿಸುವಾಗ ಮತ್ತು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸಿದರೆ, ಶೈತಾನನು ಹೇಳುತ್ತಾನೆ: ನಿಮಗೆ ಇಲ್ಲಿ ರಾತ್ರಿವಾಸವಿಲ್ಲ ಮತ್ತು ರಾತ್ರಿಭೋಜನವಿಲ್ಲ. ಆದರೆ ಅವನು ಮನೆಯನ್ನು ಪ್ರವೇಶಿಸುವಾಗ ಅಲ್ಲಾಹನನ್ನು ಸ್ಮರಿಸದಿದ್ದರೆ, ಶೈತಾನನು ಹೇಳುತ್ತಾನೆ: ನೀವು ರಾತ್ರಿವಾಸವನ್ನು ಪಡೆದಿದ್ದೀರಿ. ಅವನು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸದಿದ್ದರೆ ಶೈತಾನನು ಹೇಳುತ್ತಾನೆ: ನೀವು ರಾತ್ರಿವಾಸವನ್ನು ಮತ್ತು ರಾತ್ರಿಭೋಜನವನ್ನು ಪಡೆದಿದ್ದೀರಿ."رواه مسلم
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳು ಎಂದರೆ: ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುವುದು, ಮಾತಾಪಿತರಿಗೆ ಅವಿಧೇಯತೆ ತೋರುವುದು, ನರಹತ್ಯೆ ಮಾಡುವುದು ಮತ್ತು ಸುಳ್ಳು ಪ್ರಮಾಣ ಮಾಡುವುದು."رواه البخاري
ಅಬೂ ಸಈದ್ ಖುದ್ರಿ (ರ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಇಹಲೋಕವು ಮಧುರವಾಗಿದೆ ಮತ್ತು ಹಸಿರಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ನಿಮ್ಮನ್ನು ಅದರಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿ, ನೀವು ಹೇಗೆ ವರ್ತಿಸುತ್ತೀರಿ ಎಂದು ನೋಡುತ್ತಾನೆ. ಆದ್ದರಿಂದ ನೀವು ಇಹಲೋಕವನ್ನು ಭಯಪಡಿರಿ ಮತ್ತು ಸ್ತ್ರೀಯರನ್ನು ಭಯಪಡಿರಿ. ಏಕೆಂದರೆ, ಬನೂ ಇಸ್ರಾಈಲರ ಮೊತ್ತಮೊದಲ ಪರೀಕ್ಷೆಯು ಸ್ತ್ರೀಯರ ಮೂಲಕವಾಗಿತ್ತು."رواه مسلم
عن عمران بن حصين رضي الله عنهما قَالَ: قَالَ رسولُ اللَّه -صَلّى اللهُ عَلَيْهِ وسَلَّم-: «الحَيَاءُ لاَ يَأْتِي إِلاَّ بِخَيرٍ». وفي رواية : «الحَيَاءُ خَيرٌ كُلُّهٌ» أو قال: «الحَيَاءُ كُلُّهُ خَيرٌ».الرواية الأولى: متفق عليها. الرواية الثانية والثالثة: رواها مسلم
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಓ ಅಲ್ಲಾಹ್, ನಿನಗೆ ನಾನು ಶರಣಾಗಿದ್ದೇನೆ, ನಿನ್ನಲ್ಲಿ ವಿಶ್ವಾಸವಿಟ್ಟಿದ್ದೇನೆ, ನಿನ್ನ ಮೇಲೆ ಭರವಸೆ ಇಟ್ಟಿದ್ದೇನೆ, ನಿನ್ನ ಕಡೆಗೆ ತಿರುಗಿದ್ದೇನೆ, ನಿನ್ನ ಸಹಾಯದಿಂದ ವಾದಿಸಿದ್ದೇನೆ. ಓ ಅಲ್ಲಾಹ್, ನೀನು ನನ್ನನ್ನು ದಾರಿತಪ್ಪಿಸದಂತೆ ನಿನ್ನ ಘನತೆಯಿಂದ ನಾನು ನಿನ್ನಲ್ಲಿ ಅಭಯ ಬೇಡುತ್ತೇನೆ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ಯಾವುದೇ ಆರಾಧ್ಯನಿಲ್ಲ. ನೀನು ಶಾಶ್ವತವಾಗಿ ಜೀವಂತವಿರುವವನು, ಎಂದಿಗೂ ಸಾಯದವನು. ಜಿನ್ನ್‌ಗಳು ಮತ್ತು ಮನುಷ್ಯರು ಸಾಯುತ್ತಾರೆ."متفق عليه، وهذا لفظ مسلم ورواه البخاري مختصرًا
كَانَ ابنُ عمرَ -رضِيَ الله عنهما- يَقُول لِلرَّجُل إِذَا أَرَادَ سَفَرًا: ادْنُ مِنِّي حَتَّى أُوَّدِعَكَ كَمَا كَان رسولُ الله -صلَّى الله عليه وسلَّم- يُوَدِّعُنَا، فَيقُول: «أَسْتَوْدِعُ الله دِينَكَ، وَأَمَانَتَكَ، وَخَوَاتِيمَ عَمَلِكَ». وعن عبد الله بن يزيد الخطمي رضي الله عنه- قال: كَانَ رسُول الله -صلَّى الله عليه وسلَّم- إِذَا أَرَادَ أَنْ يُوَدِّعَ الجَيشَ، قال: «أَسْتَودِعُ الله دِينَكُم، وَأَمَانَتَكُم، وخَوَاتِيمَ أَعْمَالِكُم».الحديث الأول: رواه أبو داود، والتَرمذي واللفظ له، وابن ماجه والنسائي في الكبرى وأحمد. الحديث الثاني: رواه أبو داود والنسائي الكبرى
عن عبد الله بن عمرو بن العاص رضي الله عنهما مرفوعاً: «ليس منا من لم يَرحمْ صغيرنا، ويَعرفْ شَرَفَ كبيرنا».رواه أبو داود والترمذي وأحمد
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತ್ಯಸಮಯದ ಬಗ್ಗೆ ವಿಚಾರಿಸುತ್ತಾ ಕೇಳಿದರು: "ಅಂತ್ಯಸಮಯ ಯಾವಾಗ?" ಅವರು ಕೇಳಿದರು: "ನೀನು ಅದಕ್ಕಾಗಿ ಏನನ್ನು ಸಿದ್ಧಪಡಿಸಿದ್ದೀಯಾ?" ಆ ವ್ಯಕ್ತಿ ಉತ್ತರಿಸಿದರು: "ಏನೂ ಇಲ್ಲ. ಆದರೆ ನಾನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರೀತಿಸುತ್ತೇನೆ." ಆಗ ಅವರು (ಪ್ರವಾದಿ) ಹೇಳಿದರು: "ನೀನು ಯಾರನ್ನು ಪ್ರೀತಿಸುತ್ತೀಯೋ ಅವರೊಂದಿಗೆ ಇರುವೆ." ಅನಸ್ ಹೇಳಿದರು: "ನೀನು ಯಾರನ್ನು ಪ್ರೀತಿಸುತ್ತೀಯೋ ಅವರೊಂದಿಗೆ ಇರುವೆ" ಎಂಬ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಾತನ್ನು ಕೇಳಿ ನಮಗೆ ಎಷ್ಟು ಸಂತೋಷವಾಯಿತೆಂದರೆ, ಅಷ್ಟು ಸಂತೋಷ ನಮಗೆ ಇನ್ನಾವುದರಿಂದಲೂ ಉಂಟಾಗಿರಲಿಲ್ಲ." ಅನಸ್ ಹೇಳಿದರು: "ನಾನು ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), ಅಬೂಬಕರ್‌ರನ್ನು ಮತ್ತು ಉಮರ್‌ರನ್ನು ಪ್ರೀತಿಸುತ್ತೇನೆ. ಅವರು ಮಾಡಿದಂತಹ ಕರ್ಮಗಳನ್ನು ನಾನು ಮಾಡಿರದಿದ್ದರೂ ಸಹ, ನನಗೆ ಅವರಲ್ಲಿರುವ ಪ್ರೀತಿಯಿಂದಾಗಿ ನಾನು ಅವರೊಂದಿಗೆ ಇರಲು ಬಯಸುತ್ತೇನೆ."متفق عليه
عن أبي موسى الأشعري رضي الله عنه قال: خَسَفَت الشمس على زمان رسول الله صلى الله عليه وسلم . فقام فَزِعًا، ويخشى أن تكون الساعة، حتى أتى المسجد، فقام، فصلى بأطول قيام وسجود، ما رأيته يفعله في صلاته قطُّ، ثم قال: إن هذه الآيات التي يُرْسِلُهَا الله عز وجل : لا تكون لموت أحد ولا لحياته، ولكن الله يُرْسِلُهَا يُخَوِّفُ بها عباده، فإذا رأيتم منها شيئا فَافْزَعُوا إلى ذكر الله و دُعَائِهِ وَاسْتِغْفَارِهِ.متفق عليه
عن أنس بن مالك رضي الله عنه قال: كان أخوانِ على عهد النبي صلى الله عليه وسلم وكان أحدُهما يأتي النبي صلى الله عليه وسلم والآخر يَحتَرِف، فَشَكَا الُمحتَرِف أَخَاه للنبي صلى الله عليه وسلم فقال: «لعَلَّك تُرزَقُ بِهِ».رواه الترمذي
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ. ಕಸ್ತೂರಿ ಮಾರುವವನು ನಿನಗೆ ಸ್ವಲ್ಪ ಕಸ್ತೂರಿಯನ್ನು ಕೊಡಬಹುದು. ಅಥವಾ ನೀನು ಅವನಿಂದ ಅದನ್ನು ಖರೀದಿಸಬಹುದು. ಅಥವಾ ನಿನಗೆ ಅವನಿಂದ ಉತ್ತಮ ಸುವಾಸನೆಯನ್ನು ಅನುಭವಿಸಬಹುದು. ಆದರೆ ತಿದಿ ಊದುವವನು ನಿನ್ನ ಬಟ್ಟೆಯನ್ನು ಸುಟ್ಟು ಹಾಕಬಹುದು. ಅಥವಾ ನಿನಗೆ ಅವನಿಂದ ಕೆಟ್ಟ ವಾಸನೆಯನ್ನು ಅನುಭವಿಸಬೇಕಾಗಬಹುದು."متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿಧವೆ ಮತ್ತು ಬಡವರಿಗಾಗಿ ಪರಿಶ್ರಮಪಡುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವರಿಗೆ, ಅಥವಾ ರಾತ್ರಿಯಿಡೀ ನಮಾಝ್ ಮಾಡುವವರು ಮತ್ತು ಹಗಲಿಡೀ ಉಪವಾಸ ಆಚರಿಸುವವರಿಗೆ ಸಮವಾಗಿದ್ದಾರೆ."متفق عليه
عن عائشة رضي الله عنها قالت: «ما غِرْتُ على أحد من نساء النبي صلى الله عليه وسلم ما غِرْتُ على خديجة رضي الله عنها ، وما رأيتها قط، ولكن كان يُكثر ذِكْرَها، وربما ذبح الشَّاةَ، ثم يُقطعها أَعْضَاءً، ثم يَبْعَثُهَا في صَدَائِقِ خديجة، فربما قلت له: كأن لم يكن في الدنيا إلا خديجة! فيقول: «إنها كانت وكانت وكان لي منها وَلَدٌ». وفي رواية: وإن كان لَيَذْبَحُ الشَّاءَ، فيُهدي في خَلَائِلِهَا منها ما يَسَعُهُنَّ. وفي رواية: كان إذا ذَبَحَ الشَّاةَ، يقول: «أرسلوا بها إلى أصدقاء خديجة». وفي رواية: قالت: اسْتَأْذَنَتْ هالة بنت خويلد أخت خديجة على رسول الله صلى الله عليه وسلم فعرف استئذان خديجة، فارْتَاحَ لذلك، فقال: «اللهم هالة بنت خويلد».الرواية الأولى: متفق عليها. الرواية الثانية: متفق عليها. الرواية الثالثة: متفق عليها. الرواية الرابعة: متفق عليها