KN
Fasting
Virtue of Fasting
5 hadiths
Obligation of Fasting and Ruling of Its Abandoning
1
Virtue of Fasting
5
Recommended Acts of Fasting
7
Sighting the Crescent
2
Fasting on the Day of Doubt
2
صيام أهل الأعذار
1
Nullifiers of Fasting
2
ما يجب على الصائم
1
ما يجوز للصائم
1
Voluntary Fasting
12
Seclusion for Worship in Ramadaan (I‘tikaaf)
1
Last Ten Days of Ramadaan
4
Ramadan
2
5 hadiths
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಹೇಳಿದನು: ಆದಮರ ಪುತ್ರ ಮಾಡುವ ಎಲ್ಲಾ ಕರ್ಮಗಳು ಅವನಿಗೇ ಆಗಿವೆ; ಉಪವಾಸದ ಹೊರತು. ಅದು ನನಗಾಗಿದೆ ಮತ್ತು ನಾನೇ ಅದಕ್ಕೆ ಪ್ರತಿಫಲವನ್ನು ನೀಡುತ್ತೇನೆ. ಉಪವಾಸವು ಗುರಾಣಿಯಾಗಿದೆ. ನಿಮ್ಮೆಲ್ಲೊಬ್ಬನು ಉಪವಾಸದಲ್ಲಿರುವಾಗ ಅಶ್ಲೀಲವಾಗಿ ವರ್ತಿಸದಿರಲಿ ಅಥವಾ ಉಚ್ಚ ಸ್ವರದಲ್ಲಿ ಮಾತನಾಡದಿರಲಿ. ಯಾರಾದರೂ ಅವನನ್ನು ದೂಷಿಸಿದರೆ ಅಥವಾ ಅವನೊಂದಿಗೆ ಜಗಳವಾಡಿದರೆ, ಅವನು "ನಾನು ಉಪವಾಸದಲ್ಲಿದ್ದೇನೆ" ಎಂದು ಹೇಳಲಿ. ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಉಪವಾಸಿಗನ ಬಾಯಿಯ ದುರ್ಗಂಧವು ಅಲ್ಲಾಹನ ಬಳಿ ಕಸ್ತೂರಿಗಿಂತಲೂ ಹೆಚ್ಚು ಪರಿಮಳವುಳ್ಳದ್ದಾಗಿದೆ. ಉಪವಾಸಿಗನಿಗೆ ಎರಡು ಸಂತೋಷಗಳಿದ್ದು ಅವನು ಆ ಸಂತೋಷಗಳನ್ನು ಆಸ್ವಾದಿಸುತ್ತಾನೆ: ಒಂದು: ಉಪವಾಸ ಪಾರಣೆ ಮಾಡುವಾಗ ದೊರೆಯುವ ಸಂತೋಷ, ಇನ್ನೊಂದು ಉಪವಾಸದ ಮೂಲಕ ಅವನ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವಾಗ ದೊರೆಯುವ ಸಂತೋಷ."
متفق عليه
ಸಹ್ಲ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಸ್ವರ್ಗದಲ್ಲಿ 'ರಯ್ಯಾನ್' ಎಂಬ ಒಂದು ಬಾಗಿಲಿದೆ. ಉಪವಾಸ ಆಚರಿಸಿದವರು ಪುನರುತ್ಥಾನ ದಿನದಂದು ಅದರ ಮೂಲಕ ಪ್ರವೇಶಿಸುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. (ಆ ದಿನ) 'ಉಪವಾಸಿಗರು ಎಲ್ಲಿ?' ಎಂದು ಕರೆಯಲಾಗುವುದು. ಆಗ ಅವರು ಎದ್ದು ನಿಲ್ಲುವರು. ಅವರಲ್ಲದೆ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ. ಅವರೆಲ್ಲರೂ ಪ್ರವೇಶಿಸಿದ ನಂತರ ಅದನ್ನು ಮುಚ್ಚಲಾಗುವುದು. ನಂತರ ಬೇರೆ ಯಾರೂ ಅದರ ಮೂಲಕ ಪ್ರವೇಶಿಸುವುದಿಲ್ಲ".
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ರಮದಾನ್ ತಿಂಗಳು ಬಂದರೆ, ಸ್ವರ್ಗದ ಬಾಗಿಲುಗಳನ್ನು ತೆರೆಯಲಾಗುತ್ತದೆ, ನರಕದ ಬಾಗಿಲುಗಳನ್ನು ಮುಚ್ಚಲಾಗುತ್ತದೆ ಮತ್ತು ಶೈತಾನರನ್ನು ಸರಪಳಿಗಳಿಂದ ಬಂಧಿಸಲಾಗುತ್ತದೆ."
متفق عليه
عن أم المؤمنين عائشة رضي الله عنها قالت: دخل علي النبي صلى الله عليه وسلم ذات يوم فقال: «هل عندكم شيء؟» فقلنا: لا. قال: «فإني إذن صائم» ثم أتانا يومًا آخر فقلنا: يا رسول الله، أهدي لنا حيس. فقال: «أَرِينيه، فلقد أصبحت صائمًا» فأكل.
رواه مسلم