Hadith for the World
Topic

ಸದ್ಗುಣಗಳು ಮತ್ತು ನಡವಳಿಕೆಗಳು

288 hadiths

288 hadiths

عن أنسٍ رضي الله عنه : أنّهُ مَرَّ على صِبْيَانِ، فَسَلَّمَ عليهم، وقالَ: كانَ النبيُّ صلى الله عليه وسلم يَفعلُهُ.متفق عليه
عن أبي هريرة رضي الله عنه مرفوعاً: «من عُرِضَ عليه رَيْحَانٌ فلا يرده، فإنه خفيف الْمَحْمِلِ، طيب الريح».رواه مسلم
ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಬ್ಬಾಳಿಕೆಯ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ದಬ್ಬಾಳಿಕೆಯು ಪುನರುತ್ಥಾನ ದಿನದಂದು ಅಂಧಕಾರಗಳಾಗಿರುತ್ತವೆ. ಜಿಪುಣತನದ ಬಗ್ಗೆ ಎಚ್ಚರದಿಂದಿರಿ. ಏಕೆಂದರೆ, ನಿಶ್ಚಯವಾಗಿಯೂ ಜಿಪುಣತನವು ನಿಮಗಿಂತ ಮೊದಲಿನವರನ್ನು ನಾಶ ಮಾಡಿದೆ. ಅದು ಅವರನ್ನು ಅವರ ರಕ್ತ ಹರಿಸುವಂತೆ ಮತ್ತು ಅವರಿಗೆ ನಿಷಿದ್ಧವಾದುದನ್ನು ಧರ್ಮಸಮ್ಮತವಾಗಿ ಪರಿಗಣಿಸುವಂತೆ ಪ್ರೇರೇಪಿಸಿದೆ."رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ್ತಾರೋ ಅವರೇ ನಿಮ್ಮಲ್ಲಿ ಅತ್ಯುತ್ತಮ ಜನರು."رواه أبو داود والترمذي وأحمد
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."رواه مسلم
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನು ಅಲ್ಲಾಹು ಪ್ರೀತಿಸುತ್ತಾನೆ."رواه مسلم
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್ನು ಪಡೆಯುತ್ತಾನೆ."رواه أبو داود وأحمد
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು."متفق عليه
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು:"ಇಸ್ಲಾಂ ಧರ್ಮದಲ್ಲಿ ಅತಿಶ್ರೇಷ್ಠವಾದುದು ಯಾವುದು?" ಅವರು ಉತ್ತರಿಸಿದರು: "ಜನರಿಗೆ ಆಹಾರ ನೀಡುವುದು ಮತ್ತು ಪರಿಚಯವಿರುವವರಿಗೂ, ಪರಿಚಯವಿಲ್ಲದವರಿಗೂ ಸಲಾಂ ಹೇಳುವುದು."متفق عليه
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಅಲ್ಲಾಹು ಅಕ್ರಮವೆಸಗುವವನಿಗೆ ಸಮಯಾವಕಾಶವನ್ನು ನೀಡುತ್ತಾನೆ. ಆದರೆ ಅವನು ಅವನನ್ನೇನಾದರೂ ಹಿಡಿದುಬಿಟ್ಟರೆ, ನಂತರ ಅವನನ್ನು ಬಿಟ್ಟುಬಿಡುವುದಿಲ್ಲ." ನಂತರ ಅವರು ಈ ವಚನವನ್ನು ಪಠಿಸಿದರು: "ಅಕ್ರಮವೆಸಗುತ್ತಿರುವ ಊರುಗಳನ್ನು ಹಿಡಿಯುವಾಗ ತಮ್ಮ ಪರಿಪಾಲಕನ (ಅಲ್ಲಾಹನ) ಹಿಡಿತವು ಹೀಗೆಯೇ ಆಗಿರುತ್ತದೆ. ನಿಶ್ಚಯವಾಗಿಯೂ ಅವನ ಹಿಡಿತವು ವೇದನಾಭರಿತ ಮತ್ತು ಕಠೋರವಾಗಿದೆ." [ಸೂರ ಹೂದ್: 102]متفق عليه
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇಸ್ಲಾಮ್ ಸ್ವೀಕರಿಸಿದನೋ (ಅಥವಾ ಅಲ್ಲಾಹುವಿಗೆ ಶರಣಾದನೋ), ಮತ್ತು ಅವನ ಅಗತ್ಯಕ್ಕೆ ತಕ್ಕಷ್ಟು (ಹೆಚ್ಚೂ ಇಲ್ಲದೆ, ಕಡಿಮೆಯೂ ಇಲ್ಲದೆ) ಅವನಿಗೆ ಜೀವನೋಪಾಯವನ್ನು ಒದಗಿಸಲಾಗಿದೆಯೋ, ಮತ್ತು ಅಲ್ಲಾಹು ಅವನಿಗೆ ನೀಡಿದ್ದರಲ್ಲಿ ಅವನು ಸಂತೃಪ್ತನಾಗುವಂತೆ ಮಾಡಿದ್ದಾನೋ (ಅವನು ಅದರಲ್ಲಿ ತೃಪ್ತನಾದನೋ) ಅವನು ಖಂಡಿತವಾಗಿಯೂ ಯಶಸ್ವಿಯಾದನು (ವಿಜಯಿಯಾದನು) ".رواه مسلم
ಉಸಾಮ ಬಿನ್ ಝೈದ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಿಳೆಯರಿಗಿಂತಲೂ ಹೆಚ್ಚು ಹಾನಿ ಮಾಡುವ ಒಂದು ಪರೀಕ್ಷೆಯನ್ನು ನಾನು ನನ್ನ ನಂತರ ಪುರುಷರಿಗೆ ಬಿಟ್ಟು ಹೋಗುವುದಿಲ್ಲ."متفق عليه
ಉಬೈದುಲ್ಲಾ ಬಿನ್ ಮಿಹ್ಸನ್ ಅಲ್-ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲಿ ಯಾರು ತನ್ನ ದೇಹದಲ್ಲಿ ಆರೋಗ್ಯಪೂರ್ಣನಾಗಿ, ತನ್ನ ವಾಸಸ್ಥಳದಲ್ಲಿ ಸುರಕ್ಷಿತನಾಗಿ, ಮತ್ತು ತನ್ನ ಬಳಿ ಅಂದಿನ ದಿನದ ಆಹಾರವನ್ನು ಹೊಂದಿದವನಾಗಿ ಬೆಳಿಗ್ಗೆ ಏಳುತ್ತಾನೋ (ದಿನವನ್ನು ಆರಂಭಿಸುತ್ತಾನೋ), ಅವನಿಗಾಗಿ ಇಡೀ ಪ್ರಪಂಚವನ್ನೇ ಸಂಗ್ರಹಿಸಿಕೊಟ್ಟಂತಿದೆ."رواه الترمذي وابن ماجه
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."متفق عليه
ಝೈದ್ ಇಬ್ನ್ ಅರ್ಖಮ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಏನು ಹೇಳುತ್ತಿದ್ದರೋ ಅದನ್ನು ಹೊರತುಪಡಿಸಿ ನಾನು ನಿಮಗೆ ಬೇರೇನೂ ಹೇಳುವುದಿಲ್ಲ. ಅವರು ಹೇಳುತ್ತಿದ್ದರು: "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನಲ್-ಅಜ್‌ಝಿ ವಲ್-ಕಸಲಿ ವಲ್-ಜುಬ್‌ನಿ ವಲ್-ಬುಖ್‌ಲಿ ವಲ್-ಹರಮಿ ವ ಅಝಾಬಿಲ್-ಖಬ್ರ್. (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ನಿನ್ನಲ್ಲಿ ಅಶಕ್ತತೆ, ಸೋಮಾರಿತನ, ಹೇಡಿತನ, ಜಿಪುಣತನ, ಅತಿ ವೃದ್ಧಾಪ್ಯ ಮತ್ತು ಸಮಾಧಿಯ ಶಿಕ್ಷೆಯಿಂದ ಅಭಯ ಕೋರುತ್ತೇನೆ). ಅಲ್ಲಾಹುಮ್ಮ ಆತಿ ನಫ್ಸೀ ತಖ್ವಾಹಾ, ವ ಝಕ್ಕಿಹಾ ಅಂತ ಖೈರು ಮನ್ ಝಕ್ಕಾಹಾ, ಅಂತ ವಲಿಯ್ಯುಹಾ ವ ಮೌಲಾಹಾ. (ಅರ್ಥ: ಓ ಅಲ್ಲಾಹನೇ, ನನ್ನ ಆತ್ಮಕ್ಕೆ ಅದರ ತಖ್ವಾವನ್ನು (ದೇವಭಕ್ತಿಯನ್ನು) ನೀಡು, ಮತ್ತು ಅದನ್ನು ಪರಿಶುದ್ಧಗೊಳಿಸು, ನೀನೇ ಅದನ್ನು ಪರಿಶುದ್ಧಗೊಳಿಸುವವರಲ್ಲಿ ಅತ್ಯುತ್ತಮನು. ನೀನೇ ಅದರ 'ವಲೀ' (ರಕ್ಷಕ ಮಿತ್ರ) ಮತ್ತು 'ಮೌಲಾ' (ಒಡೆಯ)). "ಅಲ್ಲಾಹುಮ್ಮ ಇನ್ನೀ ಅಊದು ಬಿಕ ಮಿನ್ ಇಲ್ಮಿನ್ ಲಾ ಯನ್‌ಫಅ್, ವ ಮಿನ್ ಖಲ್‌ಬಿನ್ ಲಾ ಯಖ್‌ಶಅ್, ವ ಮಿನ್ ನಫ್‌ಸಿನ್ ಲಾ ತಶ್‌ಬಅ್, ವ ಮಿನ್ ದಅ್‌ವತಿನ್ ಲಾ ಯುಸ್ತಜಾಬು ಲಹಾ". (ಅರ್ಥ: ಓ ಅಲ್ಲಾಹನೇ, ಖಂಡಿತವಾಗಿಯೂ ನಾನು ಪ್ರಯೋಜನ ನೀಡದ ಜ್ಞಾನದಿಂದ, ವಿನಯವಿಲ್ಲದ ಹೃದಯದಿಂದ, ಆಸೆ ತೀರದ ಆತ್ಮದಿಂದ, ಮತ್ತು ಸ್ವೀಕರಿಸಲ್ಪಡದ ಪ್ರಾರ್ಥನೆಯಿಂದ ನಿನ್ನಲ್ಲಿ ಅಭಯ ಕೋರುತ್ತೇನೆ).رواه مسلم
عن أنس رضي الله عنه أن رسول الله صلى الله عليه وسلم كان إذا أوى إلى فراشه، قال: «الحمد لله الذي أطعمنا وسقانا، وكفانا وآوانَا، فَكَمْ مِمَّنْ لا كَافِيَ له وَلاَ مُؤْوِيَ».رواه مسلم
عن أبي هريرة-رضي الله عنه مرفوعاً: «اللهم إني أعوذ بك من الجوع، فإنه بِئْسَ الضَّجِيعُ،وأعوذُ بِكَ منَ الخِيَانَةِ، فَإنَّهَا بِئْسَتِ البِطَانَةُ».رواه أبو داود والنسائي وابن ماجه
عن أبي هريرة رضي الله عنه مرفوعًا: «بينما رجل يمشي في حُلَّةٍ تُعْجِبُهُ نَفْسُهُ، مُرَجِّلٌ رأسه، يَخْتَالُ في مَشْيَتهِ، إذ خَسَفَ اللهُ به، فهو يَتَجَلْجَلُ في الأرض إلى يوم القيامة".متفق عليه
عن أنس بن مالك رضي الله عنه قال: كان رسول الله صلى الله عليه وسلم يقول: «اللهم إني أعوذ بك من العَجْزِ، والكَسَلِ، وَالجُبْنِ، والهَرَمِ، والبخل، وأعوذ بك من عذاب القبر، وأعوذ بك من فتنة المحيا والممات». وفي رواية: «وَضَلَعِ الدَّيْنِ، وَغَلَبَةِ الرِّجَالِ».متفق عليه. والرواية الثانية رواها البخاري دون مسلم
ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನೊಡನೆ ಹೇಳಿದರು: "ಓ ಅಲ್ಲಾಹ್! ನನಗೆ ಮಾರ್ಗದರ್ಶನ ನೀಡು ಮತ್ತು ನನ್ನನ್ನು ನೇರವಾಗಿಡು. ಮಾರ್ಗದರ್ಶನವನ್ನು ಬೇಡುವಾಗ ನೇರವಾದ ಮಾರ್ಗದಲ್ಲಿ ಮುನ್ನಡೆಸುವಂತೆ ಬೇಡು ಮತ್ತು ನೇರವಾಗಿರುವುದನ್ನು ಬೇಡುವಾಗ ಬಾಣದಷ್ಟು ನೇರವಾಗಿರುವುದನ್ನು ಬೇಡು."رواه مسلم
ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಒಂದು ಸ್ಥಳದಲ್ಲಿ ಇಳಿದು, 'ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್‍ರಿ ಮಾ ಖಲಕ್' (ಅರ್ಥ: ಅಲ್ಲಾಹನ ಪರಿಪೂರ್ಣ ವಚನಗಳೊಂದಿಗೆ ಅವನು ಸೃಷ್ಟಿಸಿದ ಎಲ್ಲಾ ಕೆಡುಕುಗಳಿಂದ ನಾನು ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಾನೋ ಅವನು ಆ ಸ್ಥಳದಿಂದ ತೆರಳುವ ತನಕ ಅವನಿಗೆ ಯಾವುದೇ ವಸ್ತು ತೊಂದರೆ ಕೊಡುವುದಿಲ್ಲ."رواه مسلم
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."متفق عليه
عن أبي هريرة رضي الله عنه مرفوعاً: «إذا أوى أحدكم إلى فراشه فَليَنْفُضْ فِرَاشَهُ بِدَاخِلَةِ إزَارِهِ فإنَّهُ لا يدري ما خلفه عليه، ثم يقول: باسمك ربي وضعت جنبي، وبك أرفعه، إن أمسكت نفسي فارحمها، وإن أرسلتها، فاحفظها بما تحفظ به عبادك الصالحين».متفق عليه
عن أبي هريرة رضي الله عنه مرفوعاً: «تعوذوا بالله من جَهْدِ البلاء، وَدَرَكِ الشقاء، وسوء القضاء، وشماتة الأعداء». وفي رواية قال سفيان: أشك أني زدت واحدة منها.متفق عليه