Hadith for the World
ಅಕೀದಾ

Allegiance and Dissociation

4 hadiths

4 hadiths

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮನುಷ್ಯನು ಅವನ ಆಪ್ತ ಸ್ನೇಹಿತನ ಧರ್ಮದಲ್ಲಿರುತ್ತಾನೆ. ಆದ್ದರಿಂದ ನಿಮ್ಮಲ್ಲೊಬ್ಬನು ತಾನು ಯಾರೊಡನೆ ಸ್ನೇಹ ಬೆಳೆಸುತ್ತಿದ್ದೇನೆಂದು ನೋಡಿಕೊಳ್ಳಲಿ."رواه أبو داود والترمذي وأحمد
ಅಬೂ ಅಯ್ಯೂಬ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನ್ನ (ಮುಸಲ್ಮಾನ) ಸಹೋದರನೊಂದಿಗೆ ಮೂರು ರಾತ್ರಿಗಳಿಗಿಂತ ಹೆಚ್ಚು ಮಾತನಾಡದೆ ಇರಲು ಯಾರಿಗೂ ಅನುಮತಿಯಿಲ್ಲ. ಅವರಿಬ್ಬರು ಎದುರಾಗುವಾಗ ಒಬ್ಬ ಆ ಕಡೆ ಮತ್ತು ಇನ್ನೊಬ್ಬ ಈ ಕಡೆ ಮುಖ ತಿರುಗಿಸುತ್ತಾನೆ. ಅವರಲ್ಲಿ ಮೊದಲು ಸಲಾಮ್ ಹೇಳುವವನೇ ಅತ್ಯುತ್ತಮನು.”متفق عليه
ಅಬೂ ಸಿರ್ಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಇತರರಿಗೆ ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಇತರರಿಗೆ ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ."رواه أبو داود والترمذي وابن ماجه وأحمد
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಸ್ತ್ರೀಯರ ಉಡುಪನ್ನು ಧರಿಸುವ ಪುರುಷನನ್ನು ಮತ್ತು ಪುರುಷರ ಉಡುಪನ್ನು ಧರಿಸುವ ಸ್ತ್ರೀಯನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶಪಿಸಿದ್ದಾರೆ."رواه النسائي في الكبرى وابن ماجه بمعناه وأحمد