Hadith for the World
Belief in the Divine Decree and Fate

Levels of Divine Decree and Fate

2 hadiths

2 hadiths

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಂದು ದಿನ ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂಭಾಗದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಮಗೂ! ನಾನು ನಿನಗೆ ಕೆಲವು ವಚನಗಳನ್ನು ಕಲಿಸುತ್ತೇನೆ. ಅಲ್ಲಾಹನ ಸಂರಕ್ಷಣೆ ಮಾಡು, ಅವನು ನಿನ್ನ ಸಂರಕ್ಷಣೆ ಮಾಡುವನು. ಅಲ್ಲಾಹನ ಸಂರಕ್ಷಣೆ ಮಾಡು, ಆಗ ನೀನು ಅವನನ್ನು ನಿನ್ನ ಮುಂಭಾಗದಲ್ಲಿ ಕಾಣಬಹುದು. ನೀನು ಬೇಡುವುದಾದರೆ ಅಲ್ಲಾಹನಲ್ಲಿ ಬೇಡು. ನೀನು ಸಹಾಯ ಯಾಚಿಸುವುದಾದರೆ, ಅಲ್ಲಾಹನಲ್ಲಿ ಸಹಾಯ ಯಾಚಿಸು. ತಿಳಿದುಕೋ! ನಿನಗೆ ಯಾವುದಾದರೂ ಉಪಕಾರ ಮಾಡಲು ಸಂಪೂರ್ಣ ಸಮುದಾಯವು ಒಗ್ಗಟ್ಟಾದರೂ ಕೂಡ, ಅಲ್ಲಾಹು ನಿನ್ನ ಪರವಾಗಿ ಏನು ಬರೆದಿಟ್ಟಿದ್ದಾನೋ ಅದಲ್ಲದೆ ಬೇರೇನೂ ಉಪಕಾರ ಮಾಡಲು ಅವರಿಗೆ ಸಾಧ್ಯವಿಲ್ಲ. ನಿನಗೆ ಏನಾದರೂ ತೊಂದರೆ ಮಾಡಲು ಸಂಪೂರ್ಣ ಸಮುದಾಯವು ಒಗ್ಗಟ್ಟಾದರೂ ಕೂಡ, ಅಲ್ಲಾಹು ನಿನಗೆ ವಿರುದ್ಧವಾಗಿ ಏನು ಬರೆದಿಟ್ಟಿದ್ದಾನೋ ಅದಲ್ಲದೆ ಬೇರೇನೂ ತೊಂದರೆ ಮಾಡಲು ಅವರಿಗೆ ಸಾಧ್ಯವಿಲ್ಲ. ಲೇಖನಿಯನ್ನು ಎತ್ತಲಾಗಿದೆ ಮತ್ತು ಗ್ರಂಥಗಳು ಒಣಗಿವೆ."رواه الترمذي
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸುವುದಕ್ಕೆ ಐವತ್ತು ಸಾವಿರ ವರ್ಷಗಳ ಮುಂಚೆ ಎಲ್ಲಾ ಸೃಷ್ಟಿಗಳ ವಿಧಿ ನಿರ್ಣಯಗಳನ್ನು ದಾಖಲಿಸಿದ್ದಾನೆ." ಅವರು ಹೇಳಿದರು: "ಆಗ ಅವನ ಅರ್ಶ್ ನೀರಿನ ಮೇಲಿತ್ತು."رواه مسلم